ತಮಿಳುನಾಡು ಸರ್ಕಾರ ಯು-ಟರ್ನ್: 100% ಆಸನ ಭರ್ತಿ ಆದೇಶ ವಾಪಸ್

ಜನವರಿ 13 ರಿಂದ ಸಿನಿಮಾ ಚಿತ್ರಮಂದಿರಗಳಲ್ಲಿ ಶೇಕಡಾ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲು ಜಾರಿ ಮಾಡಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ. ಜನವರಿ 5 ರಂದು ಜಾರಿ ಮಾಡಿದ್ದ ಆದೇಶವನ್ನು ಶುಕ್ರವಾರ ಸಂಜೆ ವಾಪಸ್ ಪಡೆದುಕೊಂಡಿದೆ.

ತಮಿಳುನಾಡು ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಅವಕಾಶ ನೀಡಿದ ಬೆನ್ನಲ್ಲೆ ಕೇಂದ್ರ ಗೃಹ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು. ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಸೂಚಿಸಿತ್ತು.

ಈ ಸಂಬಂಧ ಕೇಂದ್ರ ಇಲಾಖೆಯ ಕಾರ್ಯದರ್ಶಿ ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಮಧ್ಯೆ ಮದ್ರಾಸ್ ಹೈ ಕೋರ್ಟ್‌ನಲ್ಲಿ ಆದೇಶ ಹಿಂಪಡೆಯುವಂತೆ ಆಕ್ಷೇಪಣೆ ಅರ್ಜಿ ಸಹ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವೂ ಸಹ ಜನವರಿ 11ರವರೆಗೂ ಕೇವಲ 50 ಪರ್ಸೆಂಟ್‌ಗೆ ಮಾತ್ರ ಅವಕಾಶ ನೀಡಿತ್ತು.

 Tamilnadu Govt goes back to 50% occupancy In Film theaters

ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ತಮಿಳುನಾಡು ಸರ್ಕಾರ ಕೊನೆಗೂ ತಮ್ಮ ಆದೇಶವನ್ನು ಹಿಂದಕ್ಕೆ ತೆಗೆದುಕೊಂಡಿದೆ. ಚಿತ್ರರಂಗದ ಹಿತದೃಷ್ಟಿಯಿಂದ ಹೆಚ್ಚುವರಿ ಪ್ರದರ್ಶನ ನಡೆಸಲು ಅವಕಾಶ ನೀಡಿದೆ.

ಮತ್ತೊಂದೆಡೆ ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಸಿನಿಮಾ ಥಿಯೇಟರ್‌ಗಳಿಗೆ 100 ಪರ್ಸೆಂಟ್ ಆಸನ ಭರ್ತಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 26ನೇ ಕೊಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಈ ನಿರ್ಧಾರ ಪ್ರಕಟಿಸಿದ್ದರು.

More from Filmibeat

English summary
Tamilnadu government goes back to 50% occupancy In Film theaters, after madras high court denies permission to allow 100% occupancy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X