ದಳಪತಿ ವಿಜಯ್ ಮುಂದಿನ ಸಿನಿಮಾಗೆ ತೆಲುಗು ಸ್ಟಾರ್ ನಟನ ತಂದೆ ನಿರ್ಮಾಣ
ತಮಿಳು ಸ್ಟಾರ್ ದಳಪತಿ ವಿಜಯ್ ಸದ್ಯ ಬೀಸ್ಟ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಅಂದರೆ ವಿಜಯ್ ಹುಟ್ಟುಹಬ್ಬದ ದಿನ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬೀಸ್ಟ್ ಪೋಸ್ಟರ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ವಿಜಯ್ ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
ಅಂದಹಾಗೆ ಬೀಸ್ಟ್ ವಿಜಯ್ ಅಭಿನಯದ 65 ಸಿನಿಮಾವಾಗಿದೆ. ಬೀಸ್ಟ್ ಸೆಟ್ಟೇರುತ್ತಿದ್ದಂತೆ ವಿಜಯ್ ಮುಂದಿನ ಸಿನಿಮಾ ಕೂಡ ಸದ್ದು ಮಾಡುತ್ತಿದೆ. 66 ಮತ್ತು 67ನೇ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗಾಗಲೇ ಕಳಬರುತ್ತಿರುವ ಮಾಹಿತಿ ಪ್ರಕಾರ ವಿಜಯ್ 66ನೇ ಸಿನಿಮಾಗೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಚಿತ್ರಕ್ಕೆ ತೆಲುಗು ನಿರ್ಮಾಪಕ ದಿಲ್ ರಾಜು ಬಂಡವಾಳ ಹೂಡಲು ಸಜ್ಜಾಗಿದ್ದಾರೆ.
ಈ ಸಿನಿಮಾ ಜೊತೆಗೆ ದಳಪತಿ ನಟನೆಯ 67ನೇ ಸಿನಿಮಾ ಕೂಡ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಈ ಸಿನಿಮಾಗೆ ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ನಿರ್ಮಾಣ ಮಾಡಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಅಲ್ಲು ಅರವಿಂದ್ ಮತ್ತು ವಿಜಯ್ ಸಿನಿಮಾದ ಬಗ್ಗೆ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ತಮಿಳು ಮತ್ತು ತೆಲುಗು ಎರಡು ಭಾಷೆಯಲ್ಲಿ ಸಿದ್ಧವಾಗುತ್ತಿರುವ ಸಿನಿಮಾಗೆ ಅಲ್ಲು ಅರವಿಂದ್ ಬಂಡವಾಳ ಹೂಡಲಿದ್ದಾರೆ ಎನ್ನುವ ಮಾತು ಜೋರಾಗಿ ಹರಿದಾಡುತ್ತಿದೆ.

ಟಾಲಿವುಡ್ ನ ಜನಪ್ರಿಯ ಪ್ರೊಡಕ್ಷನ್ ಹೌಸ್ ಗೀತಾ ಆರ್ಟ್ಸ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದೆ. ಒಂದು ವೇಳೆ ವಿಜಯ್ ಜೊತೆ ಸಿನಿಮಾ ಮಾಡುವುದು ನಿಜವೇ ಆದರೆ ವಿಜಯ್ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಲಿದೆ. ವಿಜಯ್ 66ನೇ ಸಿನಿಮಾ ಬಳಿಕ ಅಲ್ಲು ಅರವಿಂದ್ ಜೊತೆಗಿನ ಸಿನಿಮಾದ ಘೋಷಣೆಯಾಗುವ ಸಾಧ್ಯತೆ ಇದೆ. ಅಲ್ಲಿವರೆಗೂ ಅಭಿಮಾನಿಗಳು ಕಾಯಲೇ ಬೇಕು.
Recommended Video
ಇನ್ನು ಬೀಸ್ಟ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಚಿತ್ರಕ್ಕೆ ನೆಲ್ಸನ್ ದಿಲೀಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಪೂಜಾ, ದಳಪತಿ ವಿಜಯ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು, ಇಬ್ಬರ ಕಾಂಬಿನೇಷನ್ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.


Click it and Unblock the Notifications











