ದಳಪತಿ ವಿಜಯ್ ಹುಟ್ಟುಹಬ್ಬ: ಅಭಿಮಾನಿಗಳು, ಸಿನಿ ಗಣ್ಯರಿಂದ ಶುಭಾಶಯಗಳ ಸುರಿಮಳೆ

ಭಾರತೀಯ ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 46ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿಜಯ್ ಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೆ ಹರಿದು ಬರುತ್ತಿದೆ. ಅಭಿಮಾನಿಗಳ ಜೊತೆಗೆ ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿಯೇ ಶುಭಕೋರುತ್ತಿದ್ದಾರೆ.

Recommended Video

ತಾವು ಹುಟ್ಟಿ ಬೆಳೆದ ಊರಿನ ಬಗ್ಗೆ ಜಗ್ಗೇಶ್ ನೆನಪುಗಳನ್ನು ಮೆಲುಕು ಹಾಕಿದ್ದು ಹೀಗೆ | Jaggesh about his village

ತಮಿಳುನಟರಾದ ಆರ್ಯ, ಧನುಷ್, ಶಿವಕಾರ್ತಿಕೇಯನ್, ಆಟ್ಲಿ, ರಾಘವ್ ಲಾರೆನ್ಸ್, ಕಾಜಲ್ ಅಗರ್ ವಾಲ್, ವರಲಕ್ಷ್ಮಿ ಶರತ್ ಕುಮಾರ್, ಐಶ್ವರ್ಯ ರಜೇಶ್ ಸೇರಿದ್ದಂತೆ ಸಾಕಷ್ಟು ಗಣ್ಯರು ವಿಶ್ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ #HappyBirthdayThalapathyVijayಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.

ನಟ ಆರ್ಯ "ಹುಟ್ಟುಹಬ್ಬದ ಶುಭಾಶಯಗಳು ವಿಜಯ್. ಒಳ್ಳೆಯದಾಗಲಿ" ಎಂದು ವಿಶ್ ಮಾಡಿದ್ದಾರೆ. ಇನ್ನೂ ನಿರ್ದೇಶಕ ಆಟ್ಲಿ "ನನಗಿಂತ ಹೆಚ್ಚು ನಿಮ್ಮನ್ನು ಪ್ರೀತಿಸುತ್ತೇನೆ. ಗೌರವಿಸುತ್ತೇನೆ. ನೀವು ಇಲ್ಲದೆ ನಾ ಏನು ಇಲ್ಲ. ಲವ್ ಯೂ, ಹುಟ್ಟುಹಬ್ಬದ ಶುಭಾಶಯಗಳು" ಎಂದಿದ್ದಾರೆ.

Thalapathy Vijay Celebrating His 46th Birthday

ನಟ ಧನುಷ್ "ಹುಟ್ಟುಹಬ್ಬದ ಶುಭಾಶಯಗಳು ಸರ್" ಎಂದು ಹೇಳಿದ್ದಾರೆ. ಇನ್ನೂ ನಟಿ ಹನ್ಸಿಕಾ, ಕಾಜಲ್ ಸೇರಿದ್ದಂತೆ ಅನೇಕ ಗಣ್ಯರು ವಿಶ್ ಮಾಡಿದ್ದಾರೆ.

ವಿಜಯ್ ಅಭಿನಯದ ಬಹುನಿರೀಕ್ಷೆಯ ಮಾಸ್ಟರ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಕೊರೊನಾ ವೈರಸ್ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಇಂದು ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದಿಂದ ಫೋಸ್ಟರ್ ರಿಲೀಸ್ ಆಗಿದೆ. ಚಿತ್ರದ ಟ್ರೈಲರ್ ರಿಲೀಸ್ ಆಗುವ ಸಾಧ್ಯತೆ ಇದ್ದು, ಟ್ರೈಲರ್ ಗಾಗಿ ಅಭಿಮಾನಿಗಳು ಕಾದುಕುಳಿತಿದ್ದಾರೆ.

ಪ್ರತಿ ವರ್ಷ ವಿಜಯ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಅಭಿಮಾನಿಗಳು ಹಬ್ಬದ್ದಂತೆ ಆಚರಣೆ ಮಾಡುತ್ತಿದ್ದರು. ಆದರೆ ಈ ವರ್ಷ ಕೊರೊನಾ ವೈರಸ್ ಹಾವಳಿಯ ಪರಿಣಾಮ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೆ ಅಭಿಮಾನಿಗಳು ಹುಟ್ಟುಹಬ್ಬ ಸೆಲೆಬ್ರೇಟ್ ಮಾಡುತ್ತಿದ್ದಾರೆ.

More from Filmibeat

English summary
Thalapathy Vijay celebrating his 46th birthday. Fans and Celebrities birthday wish to vijay.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X