For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬದ ಸಂಭ್ರಮದಲ್ಲಿ ದಳಪತಿ ವಿಜಯ್: ಟ್ರೆಂಡಿಂಗ್ ನಲ್ಲಿ 'ಬೀಸ್ಟ್'

  |

  ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಇಂದು (ಜೂನ್ 22) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 47ನೇ ವಸಂತಕ್ಕೆ ಕಾಲಿಟ್ಟಿರುವ ನಟ ವಿಜಯ್ ಗೆ ಅಭಿಮಾನಿಗಳು ಮತ್ತು ಸಿನಿ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ನಟಿ ನಯನತಾರಾ, ಕೀರ್ತಿ ಸುರೇಶ್, ಖುಷ್ಬೂ, ರಾಧಿಕ ಶರತ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

  ಕೊರೊನಾ ಕಾರಣದಿಂದ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಬಿದ್ದರೂ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬ ಮಾಡುತ್ತಿದ್ದಾರೆ. ನೆಚ್ಚಿನ ನಟನ ಫೋಟೋ, ವಿಡಿಯೋ ಶೇರ್ ಮಾಡುವ ಮೂಲಕ ದಳಪತಿಗೆ ವಿಶ್ ಮಾಡುತ್ತಿದ್ದಾರೆ. ಅಂದಹಾಗೆ ವಿಜಯ್ ಹುಟ್ಟುಹಬ್ಬದ ವಿಶೇಷವಾಗಿ ಹೊಸ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

  ವಿಜಯ್ ನಟನೆಯ ಹೊಸ ಸಿನಿಮಾದ ಹೆಸರು ಘೋಷಣೆವಿಜಯ್ ನಟನೆಯ ಹೊಸ ಸಿನಿಮಾದ ಹೆಸರು ಘೋಷಣೆ

  ಹುಟ್ಟುಹಬ್ಬದ ಮುನ್ನಾದಿನವೇ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ ಚಿತ್ರತಂಡ.

  ಅಂದಹಾಗೆ ವಿಜಯ್ ಹೊಸ ಸಿನಿಮಾಗೆ 'ಬೀಸ್ಟ್' ಎಂದು ಶೀರ್ಷಿಕೆ ಇಡಲಾಗಿದೆ. ಈಗಾಗಲೇ ಬೀಸ್ಟ್ ಸಿನಿಮಾದಿಂದ ಎರಡು ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ನಟ ವಿಜಯ್ ಗನ್ ಹಿಡಿದು ಅಬ್ಬರಿಸಿದ್ದಾರೆ. ಪೋಸ್ಟರ್ ನೋಡುತ್ತಿದ್ದಂತೆ ಇದೊಂದು ಪಕ್ಕ ಮಾಸ್ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

  ಬೀಸ್ಟ್ ಸಿನಿಮಾದ ಪೋಸ್ಟರ್ ಬಿಗುಡೆಯಾಗುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಪೋಸ್ಟರ್ ಶೇರ್ ಮಾಡಿ ವೈರಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದಳಪತಿ ಬೀಸ್ಟ್ ಸಿನಿಮಾ ಟ್ರೆಂಡಿಂಗ್ ನಲ್ಲಿದೆ.

  ನೆಲ್ಸನ್ ದಿಲೀಪ್ ಕುಮಾರ್ ಸಾರಥ್ಯದಲ್ಲಿ ಬೀಸ್ಟ್ ಸಿನಿಮಾ ಮೂಡಿಬರುತ್ತಿದೆ. ಚಿತ್ರಕ್ಕೆ ಸನ್ ಪಿಕ್ಚರ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಗೆ ನಾಯಕಿಯಾಗಿ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಪೂಜಾ, ವಿಜಯ್ ಗೆ ನಾಯಕಿಯಾಗಿ ಮಿಂಚುತ್ತಿದ್ದಾರೆ.

  ಸಂಚಾರಿ ವಿಜಯ್ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿ‌ ಒಂದಾ..ಎರಡಾ.. | Filmibeat Kannada

  ಅಂದಹಾಗೆ ಬೀಸ್ಟ್ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು ಮೊದಲ ಹಂತದ ಚಿತ್ರೀಕರಣ ಜಾರ್ಜಿಯಾದಲ್ಲಿ ಮಾಡಿ ಮುಗಿಸಿದೆ ಸಿನಿಮಾತಂಡ. ಬಳಿಕ ಕೊರೊನಾ ಲಾಕ್ ಡೌನ್ ಕಾರಣ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಇದೀಗ ಮತ್ತೆ ಚಿತ್ರೀಕರಣಕ್ಕೆ ಹೊರಡಲು ಸಿನಿಮಾತಂಡ ಸಿದ್ಧತೆ ನಡೆಸುತ್ತಿದೆ. ವಿಜಯ್ ಕೊನೆಯದಾಗಿ ಮಾಸ್ಟರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

  English summary
  Thalapathy Vijay celebrating his 47th birthday today. Vijay new movie Beast poster trends on Twitter.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X