For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದಳಪತಿ ವಿಜಯ್ ವಿಶೇಷ ಮನವಿ

  |

  ಕಾಲಿವುಡ್ ಸ್ಟಾರ್ ನಟ ವಿಜಯ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ವಿಜಯ್ ಹುಟ್ಟುಹಬ್ಬ ಹತ್ತಿರ ಬರುತ್ತಿದೆ. ದಳಪತಿ ಜನ್ಮದಿನಾಚರಣೆಗೆ ಇನ್ನೇನು ಕೆಲವೇ ದಿನಗಳು ಭಾಕಿ ಇದೆ. ಈಗಾಗಲೆ ಅಭಿಮಾನಿಗಳು ಅದ್ದೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ಹಾವಳಿಯ ಪರಿಣಾಮ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

  ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ದುನಿಯಾ ವಿಜಯ್ | Duniya vijay | Huccha Venkat

  ಇದೇ ತಿಂಗಳು ಜೂನ್ 22ರಂದು ವಿಜಯ್ ಹುಟ್ಟುಹಬ್ಬ. 46ನೇ ವರ್ಷದ ಹುಟ್ಟುಹಬ್ಬವನ್ನು ವಿಜಯ್ ಆಚರಿಸಿಕೊಳ್ಳುತ್ತಿದ್ದಾರೆ. ಪ್ರತೀವರ್ಷ ವಿಜಯ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಬ್ಬದ್ದಂತೆ ಆಚರಣೆ ಮಾಡುತ್ತಿದ್ದರು. ಆದರೆ ಈ ಬಾರಿ ಈ ಸಂಭ್ರಮಿಸುವಂತಿಲ್ಲ. ಅಲ್ಲದೆ ವಿಜಯ್ ಸಹ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

  ಮೊದಲ ಕ್ರಶ್ ಬಗ್ಗೆ ಬಹಿರಂಗ ಪಡಿಸಿದ ನಟ ದಳಪತಿ ವಿಜಯ್ಮೊದಲ ಕ್ರಶ್ ಬಗ್ಗೆ ಬಹಿರಂಗ ಪಡಿಸಿದ ನಟ ದಳಪತಿ ವಿಜಯ್

  ಕೊರೊನಾ ಹಾವಳಿಯ ಪರಿಣಾಮ ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಈ ಸಮಯದಲ್ಲಿ ಬಡವರಿಗೆ ಸಹಾಯಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹುಟ್ಟುಹಬ್ಬ, ಸೆಲೆಬ್ರೇಷನ್ ಅಂತ ಖರ್ಚು ಮಾಡುವ ಹಣದಲ್ಲಿಯೆ ಬಡವರಿಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

  ವಿಜಯ್ ಸದ್ಯ ಮಾಸ್ಟರ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೆ ರಿಲೀಸ್ ಆಗಬೇಕಿತ್ತು ಆದರೆ ಕೊರೊನಾ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸಿನಿಮಾ ದೀಪಾವಳಿಗೆ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

  English summary
  Thalapathy Vijay has request to his Fans not celebrate his birthday. Actor Vijay's birthday on June 22nd.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X