'ಮಾಸ್ಟರ್' ಸಿನಿಮಾದ ಬಿಗ್ ಅಪ್ ಡೇಟ್: ಟೀಸರ್ ಬಿಡುಗಡೆ ದಿನಾಂಕ ಬಹಿರಂಗ
ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷೆಯ ಮಾಸ್ಟರ್ ಸಿನಿಮಾದಿಂದ ಬಿಗ್ ಅಪ್ ಡೇಟ್ ಹೊರಬಿದ್ದಿದೆ. ಅನೇಕ ದಿನಗಳಿಂದ ಮಾಸ್ಟರ್ ಸಿನಿಮಾದ ಅಪ್ ಡೇಟ್ ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ.
ಹೌದು, ಮಾಸ್ಟರ್ ಸಿನಿಮಾದ ಟೀಸರ್ ರಿಲೀಸ್ ಗೆ ದಿನಾಂಕ ಫಿಕ್ಸ್ ಆಗಿದೆ. ಈ ಬಗ್ಗೆ ಸಿನಿಮಾತಂಡ ಬಹಿರಂಗ ಪಡಿಸಿದೆ. ನಿನ್ನೆ (ನವೆಂಬರ್ 12) ಮಾಸ್ಟರ್ ಸಿನಿಮಾದ ಬಿಗ್ ಅಪ್ ಡೇಟ್ ನೀಡುವುದಾಗಿ ಹೇಳಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದರು. ಸಂಜೆ 6 ಗಂಟೆಗೆ ಮಾಸ್ಟರ್ ಸಿನಿಮಾದ ಟೀಸರ್ ರಿಲೀಸ್ ಡೇಟ್ ಬಹಿರಂಗ ಪಡಿಸಿ ಕುತೂಹಲಕ್ಕೆ ತೆರೆ ಎಳೆದಿದೆ.
ಮಾಸ್ಟರ್ ಸಿನಿಮಾದ ಟೀಸರ್ ನವೆಂಬರ್ 14ರಂದು ತೆರೆಗೆ ಬರುತ್ತಿದೆ. ಸಂಜೆ 6 ಗಂಟೆಗೆ ಮಾಸ್ಟರ್ ಸಿನಿಮಾದ ರಿಲೀಸ್ ಆಗುತ್ತಿದೆ. ದೀಪಾವಳಿಗೆ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವ ಮಾತು ಕೇಳಿಬರುತ್ತಿತ್ತು, ಆದರೆ ಚಿತ್ರಮಂದಿರಗಳು ತೆರೆದ ಬಳಿಕ ಯಾವ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ.

ತಯಾರಕರು ಸಿನಿಮಾ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಮಾಸ್ಟರ್ ಸಿನಿಮಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. 'ಮಾಸ್ಟರ್' ನಿರ್ದೇಶಕ ಲೋಕೇಶ್ ಕನಗರಾಜ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ಚಿತ್ರದಲ್ಲಿ ವಿಜಯ್ ಗೆ ನಾಯಕಿಯಾಗಿ ಮಾಳವಿಕಾ ಮೋಹನ್ ಕಾಣಿಸಿಕೊಂಡಿದ್ದಾರೆ.
ಮಾಸ್ಟರ್ ಸಿನಿಮಾದಲ್ಲಿ ದಳಪತಿ ವಿಜಯ್ ಎದುರು ಖಳನಟನಾಗಿ ವಿಜಯ್ ಸೇತುಪತಿ ನಟಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಮತ್ತು ವಿಜಯ್ ಇಬ್ಬರ ಕಾಳಗ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.


Click it and Unblock the Notifications











