ಸೆಲ್ಫಿ ಮೂಲಕ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಆದ ನಟಿ ತ್ರಿಷಾ

By ಫಿಲ್ಮ್ ಡೆಸ್ಕ್

ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಒಂದಲ್ಲೊಂದು ವಿಚಾರದ ಮೂಲಕ ಸುದ್ದಿಯಲ್ಲಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದ ನಟಿ ತ್ರಿಷಾ ದಿಢೀರನೆ ಸಾಮಾಜಿಕ ಜಾಲತಾಣದಿಂದ ದೂರ ಉಳಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

Recommended Video

Susheel Kumar, ದುರಂತದ ಹಿಂದಿನ ಕಾರಣವೇನು | Filmibeat Kannada

ಸಾಮಾಜಿಕ ಜಾಲತಾಣದಲ್ಲಿ ತ್ರಿಷಾ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರೆಲ್ಲರಿಂದ ದೂರ ಉಳಿದು ಬೇಸರ ಮೂಡಿಸಿದ್ದರು. ಸುಮಾರು ಒಂದು ತಿಂಗಳಿಂದ ತ್ರಿಷಾ ಸಾಮಾಜಿಕ ಜಾಲತಾಣ ಬಳಸುತ್ತಿರಲಿಲ್ಲ. ಫೋಟೋ, ವಿಡಿಯೋ ಪೋಸ್ಟ್ ಮಾಡುತ್ತ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದ ನಟಿ, ದಿಢೀರ್ ಸೈಲೆಂಟ್ ಆಗಿದ್ದು ಅಚ್ಚರಿ ಮೂಡಿಸಿತ್ತು.

ಆದರೀಗ ಸ್ಟನಿಂಗ್ ಫೋಟೋ ಮೂಲಕ ಮತ್ತೆ ವಾಪಸ್ ಆಗಿದ್ದಾರೆ. ಮೇಕಪ್ ಇಲ್ಲದೆ ಸೆಲ್ಫಿ ಶೇರ್ ಮಾಡಿರುವ ತ್ರಿಷಾ ಫೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೆ ಹರಿದುಬರುತ್ತಿದೆ. ತ್ರಿಷಾ ಮತ್ತೆ ವಾಪಸ್ ಆಗಿರುವುದು ಅಭಿಮಾನಿಗಳಿಗೆ ಸಂತವಾಗಿದೆ.

Trisha Krishnan Shares Selfie Photos After A Long Time

ಇತ್ತೀಚಿಗೆ ಮಲಯಾಳಂ ನಟಿ ಪ್ರಿಯಾ ವಾರಿಯರ್ ಕೆಲವು ದಿನಗಳಿಂದ ಇನ್ಸ್ಟಾಗ್ರಾಮ್ ನಿಂದ ದೂರ ಉಳಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಮಾನಸಿಕ ನೆಮ್ಮದಿಗಾಗಿ ಸಾಮಾಜಿಕ ಜಾಲತಾಣದಿಂದ ದೂರ ಸರಿದಿರುವುದಾಗಿ ಹೇಳಿ ಮತ್ತೆ ವಾಪಸ್ ಆಗಿದ್ದರು. ಈಗ ಅದೆ ಕೆಲಸವನ್ನು ನಟಿ ಮಾಡಿದ್ದಾರೆ.

ಅಂದ್ಹಾಗೆ ತ್ರಿಷಾ ತಮಿಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪರಮಪಾದಂ ವಿಲಾಯಟ್ಟು ಮತ್ತು ಪೊನ್ನಿಯನ್ ಸೆಲ್ವನ್ ಎರಡು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ಆಚಾರ್ಯ ಸಿನಿಮಾದಿಂದ ಹೊರಬಂದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

More from Filmibeat

English summary
Actress Trisha Krishnan shares a selfie photos After a long time.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X