'ವೆಟ್ಟೆಯಾನ್' ಅಡ್ವಾನ್ಸ್ ಬುಕ್ಕಿಂಗ್ ದಾಖಲೆ; ಟಿಕೆಟ್ ದರ ಹೆಚ್ಚಾದ್ರು ಮುಗಿಬಿದ್ದ ಬೆಂಗಳೂರಿಗರು
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ವೆಟ್ಟೆಯಾನ್' ಸಿನಿಮಾ ಈ ವಾರ ತೆರೆಗೆ ಬರ್ತಿದೆ. ಈಗಾಗಲೇ ಟೀಸರ್, ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸದ್ಯ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಶುರುವಾಗಿದ್ದು ಬೆಂಗಳೂರಿನಲ್ಲಿ ಸಿನಿಮಾ ಕಲೆಕ್ಷನ್ ಜೋರಾಗಿದೆ.
ರಜನಿಕಾಂತ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ಹೊಸ ರೆಸ್ಪಾನ್ಸ್ ಸಿಗುತ್ತಿದೆ. ಕಳೆದ ವರ್ಷ ಬಂದ 'ಜೈಲರ್' ಸಿನಿಮಾ ಸಖತ್ ಸದ್ದು ಮಾಡಿತ್ತು. ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ವೆಟ್ಟೆಯಾನ್' ಬರ್ತಿದ್ದಾನೆ. ಜ್ಞಾನವೇಲ್ ನಿರ್ದೇಶನದ ಆಕ್ಷನ್ ಎಂಟರ್‌ಟೈನರ್ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿದೆ.

ರಜನಿಕಾಂತ್, ಅಮಿತಾಬ್ ಜೊತೆಗೆ ರಾಣಾ ದಗ್ಗುಬಾಟಿ, ಫಹಾಸ್ ಫಾಸಿಲ್, ಮಂಜು ವಾರಿಯರ್, ಅಭಿರಾಮಿ, ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ 'ವೆಟ್ಟೆಯಾನ್' ಚಿತ್ರದಲ್ಲಿದೆ. ಅನಿರುದ್ದ್ ರವಿಚಂದರ್ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಚಿತ್ರದಲ್ಲಿ ಎನ್‌ಕೌಂಟರ್ ಸ್ಪೆಷಲಿಸ್ಟ್ ಪಾತ್ರದಲ್ಲಿ ಸೂಪರ್ ಸ್ಟಾರ್ ಮಿಂಚಿದ್ದಾರೆ. ಈಗಾಗಲೇ ಹಲವೆಡೆ ಸಿನಿಮಾ ಅಡ್ವಾನ್ಸ್ ಬುಕ್ಕಿಂಗ್ ಆರಂಭವಾಗಿದೆ.
ಕರ್ನಾಟಕದಲ್ಲಿ 'ವೆಟ್ಟೆಯಾನ್' ಅಡ್ವಾನ್ಸ್ ಬುಕ್ಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಬೆಳ್ಳಂ ಬೆಳಗ್ಗೆ 4 ಗಂಟೆಗೆ ಕೆಲವೆಡೆ ಸಿನಿಮಾ ಪ್ರದರ್ಶನ ಆರಂಭವಾಗುತ್ತಿದೆ. ಮೊದಲ ಶೋಗಳ ಟಿಕೆಟ್ ದರವನ್ನು ಗಣನೀಯವಾಗಿ ಏರಿಸಲಾಗಿದೆ. ಆದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ದಸರಾ ಸಂಭ್ರಮದಲ್ಲಿ ಸಿನಿಮಾ ದೊಡ್ಡಮಟ್ಟದಲ್ಲಿ ಓಪನಿಂಗ್ ಪಡೆಯುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲೇ 'ವೆಟ್ಟೆಯಾನ್' ಚಿತ್ರದ ಮೊದಲ ದಿನದ 25 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಬುಕ್ ಆಗಿದೆ. ಅಡ್ವಾನ್ಸ್ ಬುಕ್ಕಿಂಗ್‌ನಿಂದಲೇ ಸಿನಿಮಾ ಕಲೆಕ್ಷನ್ ಈಗಾಗಲೇ 1 ಕೋಟಿ ರೂ. ದಾಟಿದೆ. ಇದು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಮಲ್ಟಿಫ್ಲೆಕ್ಸ್ ಮಾತ್ರವಲ್ಲ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳಲ್ಲೂ ಟಿಕೆಟ್ ಬುಕ್ಕಿಂಗ್ ಜೋರಾಗಿದೆ.
ಈಗಾಗಗಲೇ ಬೆಂಗಳೂರಿನಲ್ಲಿ ಮೊದಲ ದಿನ 140 ಕ್ಕೂ ಅಧಿಕ ಅರ್ಲಿ ಮಾರ್ನಿಂಗ್ ಶೋಗಳು ನಿಗದಿಯಾಗಿದೆ. ತಮಿಳುನಾಡಿಗಿಂತ ಮುನ್ನ ಕರ್ನಾಟಕದಲ್ಲೇ 'ವೆಟ್ಟೆಯಾನ್' ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಇತ್ತೀಚೆಗೆ ತಮಿಳು ನಟ ದಳಪತಿ ವಿಜಯ್ ನಟಿಸಿದ ಚಿತ್ರಗಳು ಬೆಂಗಳೂರಿನಲ್ಲಿ ಭರ್ಜರಿ ಓಪನಿಂಗ್ ಪಡೆಯುತ್ತಿವೆ. ಇದೀಗ 'ವೆಟ್ಟೆಯಾನ್' ಸಹ ಅದೇ ಹಾದಿಯಲ್ಲಿದೆ.
'ವೆಟ್ಟೆಯಾನ್' ಚಿತ್ರಕ್ಕಾಗಿ 200 ರೂ. ಇದ್ದ ಟಿಕೆಟ್ ದರವನ್ನು 400 ರೂ. 500 ರೂ.ಗೆ ಹೆಚ್ಚಿಸಲಾಗಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ 1000 ರೂ. ಗಡಿ ದಾಟಿದೆ. ಆದರೂ ಅಭಿಮಾನಿಗಳು ಟಿಕೆಟ್ ಬುಕ್ ಮಾಡಲು ಹಿಂದೇಟು ಹಾಕುತ್ತಿಲ್ಲ. ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳ ಆರ್ಭಟವೇ ಜೋರಾಗಿದೆ. ಎಗ್ಗಿಲ್ಲದೇ ಟಿಕೆಟ್ ದರ ಹೆಚ್ಚಿಸಿ ಹಣ ಕೊಳ್ಳೆ ಹೊಡೆಯಲಾಗುತ್ತಿದೆ.
ಈಗಾಗಲೇ ಬೆಂಗಳೂರಿನಲ್ಲಿ ಬೆಳಗ್ಗೆ 4 ಗಂಟೆಯ ಕೆಲ ಶೋಗಳು ಸೋಲ್ಡ್‌ಔಟ್ ಆಗಿದೆ. ಸಾಕಷ್ಟು ಕಡೆ ಫಾಸ್ಟ್ ಫಿಲ್ಲಿಂಗ್ ನಡೀತಿದೆ. ಕೆಲವರು ದಸರಾ ವೀಕೆಂಡ್‌ನಲ್ಲಿ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಗುರುವಾರವೇ 'ವೆಟ್ಟೆಯಾನ್' ಸಿನಿಮಾ ತೆರೆಗೆ ಬರ್ತಿದ್ದು ಶುಕ್ರವಾರ ಕನ್ನಡ 'ಮಾರ್ಟಿನ್' ಸಿನಿಮಾ ಬಿಡುಗಡೆ ಆಗಲಿದೆ. ಧ್ರುವ ಸರ್ಜಾ ನಟನೆಯ ಈ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ಕಳೆದ ವರ್ಷ ರಜನಿಕಾಂತ್ ನಟಿಸಿದ 'ಜೈಲರ್' ಸಿನಿಮಾ ಭರ್ಜರಿ ಸಕ್ಸಸ್ ಕಂಡಿತ್ತು. ಮೋಹನ್ ಲಾಲ್ ಹಾಗೂ ಶಿವಣ್ಣನ ಗೆಸ್ಟ್ ಅಪಿಯರೆನ್ಸ್ ಚಿತ್ರಕ್ಕೆ ಪ್ಲಸ್ ಆಗಿತ್ತು. ಆದರೆ ಬಳಿಕ ಬಂದ 'ಲಾಲ್ ಸಲಾಂ' ಸಿನಿಮಾ ಹೀನಾಯವಾಗಿ ಸೋತಿತ್ತು. ಈ ಚಿತ್ರ ಮುಖ್ಯ ಪಾತ್ರದಲ್ಲಿ ತಲೈವಾ ನಟಿಸಿದ್ದರು. 'ವೆಟ್ಟೆಯಾನ್' ಟೀಸರ್ ಹಾಗೂ ಟ್ರೈಲರ್ ಕೂಡ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿಲ್ಲ. ಆದರೂ ತಲೈವಾ ಕ್ರೇಜ್ ಜೋರಾಗಿದೆ.


Click it and Unblock the Notifications











