Vijay Antony Daughter: ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಸಾವು, ಪೊಲೀಸರಿಂದ ಸಮಗ್ರ ತನಿಖೆ

ತಮಿಳು ಚಿತ್ರರಂಗದ ಖ್ಯಾತ ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಂಟೋನಿ ಅವರ 16 ವರ್ಷದ ಪುತ್ರಿ ಮೀರಾ ಅವರ ಸಾವಿನ ದುರಂತ ಸುದ್ದಿಗೆ ಇಡೀ ಚಿತ್ರರಂಗ ಮತ್ತು ಚೆನ್ನೈ ನಗರ ತತ್ತರಿಸಿದೆ. ವರದಿಗಳ ಪ್ರಕಾರ, ಅವರು ದೀರ್ಘಕಾಲದಿಂದ ತೀವ್ರವಾದ ಖಿನ್ನತೆಗೆ ಒಳಗಾಗಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

ತಮ್ಮ ಸಂಗೀತ ಪ್ರತಿಭೆ ಮತ್ತು ನಟನೆಯಿಂದ ಮೋಡಿ ಮಾಡಿರುವ ವಿಜಯ್ ಆಂಟೋನಿ ಅವರು ತಮ್ಮ ಕುಟುಂಬದೊಂದಿಗೆ ಚೆನ್ನೈನ ಡಿಡಿಕೆ ರಸ್ತೆಯ ಅಲ್ವಾರ್‌ಪೇಟ್‌ನಲ್ಲಿ ನೆಲೆಸಿದ್ದಾರೆ. ಮೃತ ಮೀರಾ, ಚರ್ಚ್ ಪಾರ್ಕ್ ಶಾಲೆಯಲ್ಲಿ ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು.

vijay-antony-daughter-meera-death

ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಪತ್ತೆ

ಕುಟುಂಬವು ಸೆಪ್ಟೆಂಬರ್ 19 ರಂದು ಮುಂಜಾನೆ 3 ಗಂಟೆಗೆ ಇಂತಹ ಘಟನೆಗೆ ಮೂಕ ಸಾಕ್ಷಿಯಾಗಿದೆ. ಮೀರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಕುಟುಂಬ ಸಹಾಯಕರ ನೆರವಿನೊಂದಿಗೆ ಕಾರಿನಲ್ಲಿ ಕಾವೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಾವೇರಿ ಆಸ್ಪತ್ರೆಯ ವೈದ್ಯರು ಆಕೆ ಮನೆಯಲ್ಲೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದರು.

ಸಮಗ್ರ ಪೊಲೀಸ್ ತನಿಖೆ

ಘಟನೆಯ ಮಾಹಿತಿ ಸಿಕ್ಕ ಕೂಡಲೇ ತೆನಾಂಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತ ಮೀರಾ ಅವರು ದೀರ್ಘಕಾಲದಿಂದ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು, ಆಕೆಯ ಮಾನಸಿಕ ಆರೋಗ್ಯ ಉತ್ತಮವಾಗಿರಲಿಲ್ಲ ಎಂಬ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು, ಮೀರಾ ಅವರ ಅಸಹಜ ಸಾವಿಗೆ ಕಾರಣವಾದ ಎಲ್ಲಾ ಸಂದರ್ಭಗಳನ್ನು ಹೊರಗೆಳೆಯಲು ಪೋಲಿಸ್ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ವಿಧಿವಿಜ್ಞಾನ ಇಲಾಖೆಯ ತಜ್ಞರು ದುರಂತದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಯಾವುದೇ ಸುಳಿವು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ವಿಜಯ್ ಆಂಟೋನಿ ಅವರ ನಿವಾಸದಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳ ವಿಚಾರಣರ ನಡೆಸಲಾಗುತ್ತಿದ್ದು ಸಮಗ್ರ ತನಿಖೆಯನ್ನು ಪ್ರಾರಂಭಿಸಲಾಗಿದೆ. ಖಿನ್ನತೆಯೇ ಮೀರಾ ಅವರು ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತೆ ಎಂಬುದನ್ನು ಸಹ ಪೊಲೀಸರು ಕಂಡುಹಿಡಿಯುತ್ತಿದ್ದಾರೆ. ಇದಲ್ಲದೆ, ಘಟನೆಯ ಬಗ್ಗೆ ಏನಾದರೂ ಸುಳಿವು ಸಿಗಬಹುದು ಎಂಬ ಭರವಸೆಯಲ್ಲಿ ಪೊಲೀಸರು ಮೀರಾ ಅವರ ಸೆಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು, ವರದಿಗಳ ಪ್ರಕಾರ ಮೀರಾ ಕಳೆದ ಆರು ತಿಂಗಳಿನಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಷಯ ಬೆಳಕಿಗೆ ಬಂದಿದೆ. ಮೀರಾ ಅವರ ಸಾವಿಗೆ ತಮಿಳು ಚಿತ್ರರಂಗದ ಗಣ್ಯರು ವಿಜಯ್ ಆಂಟೋನಿಗೆ ಸಂತಾಪ ಸೂಚಿಸಿ, ಧೈರ್ಯದ ಮಾತುಗಳನ್ನಾಡಿದ್ದಾರೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

More from Filmibeat

English summary
ijay Antony Daughter Meera Death: Police Investigation Underway.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X