For Quick Alerts
  ALLOW NOTIFICATIONS  
  For Daily Alerts

  ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್; 'ಮಾಸ್ಟರ್' ಮುಂಗಡ ಟಿಕೆಟ್ ಬುಕ್ಕಿಂಗ್ ಗೆ ರೆಡಿಯಾಗಿ

  By ಫಿಲ್ಮ್ ಡೆಸ್ಕ್
  |

  ದಳಪತಿ ವಿಜಯ್ ಅಭಿಮಾನಿಗಳು ವರ್ಷದಿಂದ ಕಾತರದಿಂದ ಕಾಯುತ್ತಿರುವ ಮಾಸ್ಟರ್ ಸಿನಿಮಾ ಈ ವರ್ಷ ರಿಲೀಸ್ ಆಗಿಲ್ಲ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈ ವರ್ಷ ಏಪ್ರಿಲ್ ನಲ್ಲೇ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಲಾಕ್ ಡೌನ್ ನಿಂದ ಈ ವರ್ಷ ಸಿನಿಮಾ ರಿಲೀಸ್ ಸಾಧ್ಯವಾಗಿಲ್ಲ.

  ಮಾಸ್ಟರ್ ಆಗಿ ವಿಜಯ್ ಅಭಿಮಾನಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ. ಯಾವಾಗ ರಿಲೀಸ್ ಆಗುತ್ತೆ ಎನ್ನುವ ದೊಡ್ಡ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇತ್ತೀಚಿಗಷ್ಟೆ ಎಂದರೆ ದೀಪಾವಳಿ ಹಬ್ಬಕ್ಕೆ ಚಿತ್ರದ ಟೀಸರ್ ಮಾಡಿ, ಅಭಿಮಾನಿಗಳ ಹಾರ್ಟ್ ಬೀಟ್ ಹೆಚ್ಚಿಸಿದ ಮಾಸ್ಟರ್ ಟೀಂ ಮುಂದಿನ ವರ್ಷ ಸಂಕ್ರಾಂತಿಗೆ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ಮಾಡಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ರಿಲೀಸ್ ಗೆ ಮೊದಲೇ ಸಿನಿಮಾದ ಮುಂಗಡ ಬುಕ್ಕಿಂಗ್ ಆರಂಭಿಸಲು ಸಿನಿಮಾತಂಡ ನಿರ್ಧರಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಮುಂದೆ ಓದಿ..

  ಬಾಲಿವುಡ್‌ಗೆ ಕಾಲಿಟ್ಟ ತಮಿಳು ನಟ ವಿಜಯ್ ಮತ್ತು ವಿಜಯ್ ಸೇತುಪತಿಬಾಲಿವುಡ್‌ಗೆ ಕಾಲಿಟ್ಟ ತಮಿಳು ನಟ ವಿಜಯ್ ಮತ್ತು ವಿಜಯ್ ಸೇತುಪತಿ

  ಮಾಸ್ಟರ್ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

  ಮಾಸ್ಟರ್ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

  ಇತ್ತೀಚಿಗಷ್ಟೆ ಮಾಸ್ಟರ್ ಚಿತ್ರಕ್ಕೆ ಸೆನ್ಸಾರ್ ಆಗಿದೆ. ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಮಾಸ್ಟರ್ ಗೆ ಯು/ಎ ಪ್ರಮಾಣ ಪತ್ರ ನೀಡಿದ್ದಾರೆ. ಮಾಸ್ಟರ್ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎನ್ನುವ ಮಾತು ಕೇಳಿಬರುತ್ತಿತ್ತು. ಆದರೆ ಸಿನಿಮಾತಂಡ ಚಿತ್ರಮಂದಿರದಲ್ಲೇ ಮಾಸ್ಟರ್ ರಿಲೀಸ್ ಆಗಲಿದೆ ಎಂದು ಸ್ಪಷ್ಟನೆ ನೀಡಿರುವ ಮೂಲಕ ವದಂತಿಗೆ ಬ್ರೇಕ್ ಹಾಕಿತ್ತು. ಒಟಿಟಿಯಿಂದ ಉತ್ತಮ ಆಫರ್ ಬಂದರೂ ವಿಜಯ್ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಮಾಡಬೇಕು ಎನ್ನುವ ಉದ್ದೇಶದಿಂದ ಸಿನಿಮಾವನ್ನು ಯಾರಿಗೂ ನೀಡಿಲ್ಲ.

  ಜನವರಿ 7ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್

  ಜನವರಿ 7ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್

  ಇದೀಗ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ ಮಾಸ್ಟರ್ ಸಿನಿಮಾ ಮುಂದಿನ ವರ್ಷ ಸಂಕ್ರಾಂತಿಗೆ ರಿಲೀಸ್ ಆಗುವುದು ಪಕ್ಕಾ ಎನ್ನುತ್ತಿವೆ ಮೂಲಗಳು. ಹಾಗಾಗಿ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಓಪನ್ ಆಗಲಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಹೌದು, ಜನವರಿ 7ರಿಂದ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ ಮಾಡಲು ಸಿನಿಮಾತಂಡ ನಿರ್ಧರಿಸಿದೆಯಂತೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

  ವಿಜಯ್ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ: ಸಂಕ್ರಾಂತಿಗೂ ಮಾಸ್ಟರ್ ಅನುಮಾನ?ವಿಜಯ್ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ: ಸಂಕ್ರಾಂತಿಗೂ ಮಾಸ್ಟರ್ ಅನುಮಾನ?

  ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ ಮಾಸ್ಟರ್

  ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ ಮಾಸ್ಟರ್

  ಮಾಸ್ಟರ್ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾಸ್ಟರ್ ತೆಲುಗು ರಿಲೀಸ್ ವರ್ಷನ್ ಗೆ ಎಲ್ಲಾ ತಯಾರಿ ನಡೆಯುತ್ತಿದೆ. ಜೊತೆಗೆ ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ವಿಜಯ್ ದಿ ಮಾಸ್ಟರ್ ಎನ್ನುವ ಹೆಸರಿನಲ್ಲಿ ಹಿಂದಿಯಲ್ಲಿ ರಿಲೀಸ್ ಆಗುತ್ತಿದೆ.

  ಖಳನಟನ ಪಾತ್ರದಲ್ಲಿ ವಿಜಯ್ ಸೇತುಪತಿ

  ಖಳನಟನ ಪಾತ್ರದಲ್ಲಿ ವಿಜಯ್ ಸೇತುಪತಿ

  ಮಾಸ್ಟರ್ ಸಿನಿಮಾದಲ್ಲಿ ಖಳನಟನಾಗಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ದಳಪತಿ ವಿಜಯ್ ಎದುರು ನಟಿಸಿದ್ದು, ಚಿತ್ರದಲ್ಲಿ ಇಬ್ಬರ ಕಾಳಗ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರಕ್ಕೆ ಲೋಕೇಶ್ ಕನಗರಾಜ್ ಆಕ್ಷನ್ ಕಟ್ ಹೇಳಿದ್ದಾರೆ. ಮಾಳವಿಕಾ ಮೋಹನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

  English summary
  Thalapathy Vijay starrer Master movie makers may open ticket booking on January 7th.
  Sunday, December 27, 2020, 14:15
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X