For Quick Alerts
  ALLOW NOTIFICATIONS  
  For Daily Alerts

  ವಿಜಯ್ ಅಭಿಮಾನಿಗಳಿಗೆ 'ಮಾಸ್ಟರ್' ಸಿನಿಮಾದಿಂದ ಪ್ರತಿದಿನ ಕಾದಿದೆ ಸರ್ಪ್ರೈಸ್

  |

  ಕೊರೊನಾ ಲಾಕ್ ಡೌನ್ ಬಳಿಕ ಮತ್ತು ಹೊಸ ವರ್ಷದ ಪ್ರಾರಂಭದಲ್ಲಿ ರಿಲೀಸ್ ಗೆ ರೆಡಿಯಾಗಿರುವ ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಎಂದರೇ ವಿಜಯ್ ನಟನೆ ಮಾಸ್ಟರ್ ಚಿತ್ರ. ಹೌದು, ಜನವರಿ 13 ಪೊಂಗಲ್ ಹಬ್ಬದ ಪ್ರಯುಕ್ತ ಮಾಸ್ಟರ್ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ.

  ಕೊರೊನಾ ಸಮಯದಲ್ಲೂ ಧೈರ್ಯವಾಗಿ ಸಿನಿಮಾ ಮಾಡುತ್ತಿರುವ ಮಾಸ್ಟರ್ ಸಿನಿಮಾಗೆ ಅನೇಕ ವಿಘ್ನಗಳು ಎದುರಾಗುತ್ತಿದೆ. ಈಗಾಗಲೇ ತಮಿಳು ನಾಡು ಸರ್ಕಾರ ಶೇ.100 ಆಸನ ಭರ್ತಿಗೆ ನೀಡಿದ ಅವಕಾಶಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ಎತ್ತಿದೆ. ಹಾಗಾಗಿ ಶೇ.50ರಷ್ಟು ಆಸನದಲ್ಲೇ ಸಿನಿಮಾ ಪ್ರದರ್ಶನ ಮಾಡಬೇಕಾಗಿರುವ ಅನಿವಾರ್ಯತೆ ಎದುರಾಗಿದೆ.

  ಶೇ.100 ಆಸನ ಭರ್ತಿಗೆ ತಮಿಳುನಾಡು ಸರ್ಕಾರದ ಅನುಮತಿ; ವೈದ್ಯರಿಂದ ನಟ ವಿಜಯ್ ಗೆ ಬಹಿರಂಗ ಪತ್ರ

  ಈ ನಡುವೆಯೂ ಮಾಸ್ಟರ್ ಸಿನಿಮಾತಂಡ ಅಭಿಮಾನಿಗಳಿಗೆ ದಿನಕ್ಕೊಂದು ಸರ್ಪ್ರೈಸ್ ನೀಡುತ್ತಿದೆ. ಈಗಾಗಲೇ ಸಿನಿಮಾದ ಪೋಸ್ಟರ್ ಮತ್ತು ಟೀಸರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಇದೀಗ ಸಿನಿಮಾತಂಡ ಮತ್ತೊಂದು ಅಭಿಯಾನ ಪ್ರಾರಂಭಿಸಿದೆ. ಮಾಸ್ಟರ್ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಪ್ರತಿದಿನ ವಿವಿಧ ರೀತಿಯ ಪ್ರೋಮೋಗಳನ್ನು ರಿಲೀಸ್ ಮಾಡಿ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಿಸುತ್ತಿದೆ.

  ಪ್ರತಿದಿನ ಸಂಜೆ ಚಿತ್ರತಂಡ ಹೊಸ ಪ್ರೋಮೋ ರಿಲೀಸ್ ಮಾಡುತ್ತಿದೆ. ನಿನ್ನೆ (ಜನವರಿ.06) ಸಂಜೆ ಹೊಸ ಪ್ರೋಮೋ ರಿಲೀಸ್ ಆಗಿದ್ದು, ಅಭಿಮಾನಿಗಳು ವಿಜಯ್ ನೋಡಿ ಸಖತ್ ಥ್ರಿಲ್ ಆಗಿದ್ದಾರೆ. ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ವಿಜಯ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂದು ಸಂಜೆ ರಿಲೀಸ್ ಆಗುವ ಪ್ರೋಮೋ ಹೇಗಿರಲಿದೆ ಎಂದು ಚಿತ್ರಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.

  ಈಗಾಗಲೇ ರಿಲೀಸ್ ಆಗಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಜಯ್ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಕಳೆದ ವರ್ವೇರಿಲೀಸ್ ಆಗಬೇಕಿತ್ತು. ಆದರೀಗ ಅಭಿಮಾನಿಗಳನ್ನು ರಂಜಿಸಲು ಬರ್ತಿದೆ. ಕೊರೊನಾ ಲಾಕ್ ಡೌನ್ ಬಳಿಕ ರಿಲೀಸ್ ಆಗುತ್ತಿರುವ ಮೊದಲ ಬಿಗ್ ಬಜೆಟ್ ಸಿನಿಮಾ ಇದಾಗಿರುವುದರಿಂದ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

  English summary
  Tamil Actor Vijay starrer Master movie team to release new promos every day till movie is released on 13th.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X