For Quick Alerts
  ALLOW NOTIFICATIONS  
  For Daily Alerts

  ಕೊರೊನಾ ವರದಿ ನೆಗೆಟಿವ್: 15 ದಿನಗಳ ಬಳಿಕ ಮಕ್ಕಳನ್ನು ತಬ್ಬಿ ಮುದ್ದಾಡಿದ ಅಲ್ಲು ಅರ್ಜುನ್

  |

  ಕೊರೊನಾ ಸೋಂಕಿಗೆ ತುತ್ತಾಗಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಕೊರೊನಾ ವರದಿ ನೆಗೆಟಿವ್ ಬಂದಿರುವ ಬಗ್ಗೆ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ.

  ಕೊರೊನಾ ನೆಗೆಟಿವ್ ವರದಿ ಬಂದ ತಕ್ಷಣ ಮಕ್ಕಳನ್ನು ಕಂಡ ಅಲ್ಲು ಅರ್ಜುನ್ ಫುಲ್ ಹ್ಯಾಪಿ | Filmibeat Kannada

  ಕಳೆದ 15 ದಿನಗಳ ಹಿಂದೆ ಅಲ್ಲು ಅರ್ಜುನ್ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು. ಮನೆಯಲ್ಲೇ ಕ್ವಾರೆಂಟೈನ್ ಆಗಿದ್ದ ಅಲ್ಲು ಅರ್ಜುನ್ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದರು. 15 ದಿನಗಳು ಕ್ವಾರಂಟೈನ್ ಆಗಿದ್ದ ಅಲ್ಲು ಅರ್ಜುನ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು ಮುದ್ದಾದ ಮಕ್ಕಳನ್ನು ತಬ್ಬಿ ಮುದ್ದಾಡಿದ್ದಾರೆ.

  'KGF' ಚಿತ್ರದ ಹಾದಿಯಲ್ಲಿ ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸಿನಿಮಾ

  ಕೊರೊನಾ ವರದಿ ನೆಗೆಟಿವ್ ಬಂದಿರುವ ಬಗ್ಗೆ ಅಲ್ಲು ಅರ್ಜುನ್ , '15 ದಿನಗಳು ಕ್ವಾರಂಟೈನ್ ಆದ ಬಳಿಕ ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ. ನಿಮ್ಮೆಲ್ಲರ ಪ್ರೀತಿಯ ಹಾರೈಕೆ ಮತ್ತು ಪ್ರಾರ್ಥನೆಗೆ ನನ್ನ ಧನ್ಯವಾದಗಳು. ಈ ಲಾಕ್ ಡೌನ್ ಕೊರೊನಾ ನಿಯಂತ್ರಣಕ್ಕೆ ಕಾರಣವಾಗುತ್ತೆ ಎಂದು ಭಾವಿಸುತ್ತೇನೆ.' ಎಂದಿದ್ದಾರೆ.

  ಮತ್ತೊಂದು ಪೋಸ್ಟ್ ಶೇರ್ ಮಾಡಿ, 'ನೆಗೆಟಿವ್ ಬಂದ ಬಳಿಕ ನನ್ನ ಕುಟುಂಬದ ಜೊತೆ ಮೀಟಿಂಗ್. ಮಕ್ಕಳನ್ನು ತುಂಬಾ ಮಿಸ್ ಮಾಡಿಕೊಂಡಿದ್ದೆ' ಎಂದು ಹೇಳುವ ಜೊತೆಗೆ ಮಕ್ಕಳನ್ನು ತಬ್ಬಿಕೊಂಡು ಮುದ್ದಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಅಲ್ಲು ಅರ್ಜುನ್ ಸದ್ಯ ಬಹುನಿರೀಕ್ಷೆಯ ಪುಷ್ಪ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಟೀಸರ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಕೊರೊನಾ ಭೀಕರತೆಯಿಂದ ಚಿತ್ರೀಕರಣ ಸ್ಥಗಿತಗೊಳಿಸಲಾಗಿದ್ದು, ಲಾಕ್ ಡೌನ್ ಮುಗಿಯುತ್ತಿದೆ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ.

  English summary
  Tollywood Actor Allu Arjun meets with Family After tests Negative for corona.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X