ಅಲ್ಲು ಅರ್ಜುನ್‌ಗೆ ಕೊರೊನಾ ಪಾಸಿಟಿವ್: ರಶ್ಮಿಕಾಗೆ ಹೆಚ್ಚಿದ ಆತಂಕ

ತೆಲುಗು ಸಿನಿಮಾರಂಗದ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ನಿರತರಾಗಿದ್ದ ಅಲ್ಲು ಅರ್ಜುನ್ ಕೊರೊನಾ ಪಾಸಿಟಿವ್ ವರದಿ ಬರುತ್ತಿದ್ದಂತೆ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಈ ಬಗ್ಗೆ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ, 'ನನಗೆ ಕೊರೊನಾ ಪಾಸಿಟಿವ್ ಆಗಿದೆ. ಸದ್ಯ ಐಸೊಲೇಟ್ ಆಗಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ಅಭಿಮಾನಿಗಳು ಮತ್ತು ಹಿತೈಶಿಗಳು ಯಾವುದೇ ಭಯ ಪಡಬೇಡಿ. ನಾನು ಚೆನ್ನಾಗಿದ್ದೇನೆ' ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲು ಅರ್ಜುನ್ ಸದ್ಯ ಪುಷ್ಪ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರಿಂದ ಪುಷ್ಪ ತಂಡಕ್ಕೂ ಕೊರೊನಾ ಆತಂಕ ಶುರುವಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಪುಷ್ಪ ಚಿತ್ರೀಕರಣಕ್ಕಾಗಿ ಮುಂಬೈನಿಂದ ಹೈದರಾಬಾದ್‌ಗೆ ಆಗಮಿಸಿದ್ದರು. ಇದೀಗ ರಶ್ಮಿಕಾಗೂ ಕೂಡ ಕೊರೊನಾ ಭಯ ಶುರುವಾಗಿದೆ.

Actor Allu Arjun tests positive for Corona

ಅಲ್ಲು ಅರ್ಜುನ್ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಬಹುನಿರೀಕ್ಷೆಯ ಪುಷ್ಪ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Recommended Video

ನವರಸಗಳನ್ನು ಅಭಿನಯಿಸಿ ನೆಟ್ಟಿಗರ ಗಮನಸೆಳೆದ ಆಶಾ ಭಟ್ | Filmibeat Kannada

More from Filmibeat

English summary
Telugu Actor Allu Arjun tests positive for Corona. He says don't worry about me I am fine.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X