For Quick Alerts
  ALLOW NOTIFICATIONS  
  For Daily Alerts

  ಮಹೇಶ್ ಬಾಬು ಮತ್ತು ರಾಜಮೌಳಿ ಅಭಿಮಾನಿಗಳಿಗೆ ಬೇಸರದ ಸುದ್ದಿ

  By ಫಿಲ್ಮ್ ಡೆಸ್ಕ್
  |

  ಟಾಲಿವುಡ್ ಖ್ಯಾತ ನಿರ್ದೇಶಕ ರಾಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯಬೇಕಿತ್ತು. ಆದರೆ ಕೊರೊನಾ ಲಾಕ್ ಡೌನ್ ಪರಿಣಾಮ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿದೆ. ಮುಂದಿನ ವರ್ಷದ ಪ್ರಾರಂಭದಲ್ಲಿ ತೆರೆಗೆ ಬರಲು ಪ್ಲಾನ್ ಮಾಡಿದ್ದ ಆರ್ ಆರ್ ಆರ್ ಸಿನಿಮಾ ಅಂದುಕೊಂಡ ದಿನಕ್ಕೆ ರಿಲೀಸ್ ಆಗುವುದು ಅನುಮಾನವಾಗಿದೆ.

  ಅಂಬರೀಷ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ | Sumalatha Ambareesh | Filmibeat Kannada

  ಇನ್ನೂ ಈ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದಂತೆ ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಹಿರಂಗ ಪಡಿಸಿದ್ದರು. ರಾಜಮೌಳಿ ಮುಂದಿನ ಸಿನಿಮಾ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಜೊತೆ ಮಾಡುವುದಾಗಿ ಹೇಳಿದ್ದಾರೆ. ಪ್ರಿನ್ಸ್ ಮತ್ತು ರಾಜಮೌಳಿ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

  ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾದ ಕೀರ್ತಿ ಸುರೇಶ್ ಪಾತ್ರ ರಿವೀಲ್ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾದ ಕೀರ್ತಿ ಸುರೇಶ್ ಪಾತ್ರ ರಿವೀಲ್

  ಎಲ್ಲವೂ ಸರಿ ಇದ್ದಿದ್ದರೆ ಆರ್ ಆರ್ ಆರ್ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರೀಕರಣ ಪ್ರಾರಂಭವಾಗಬೇಕಿತ್ತು. ಆದರೀಗ ಮಹೇಶ್ ಬಾಬು ಮತ್ತು ರಾಜಮೌಳಿ ಸಿನಿಮಾ ಮುಂದಿನ ವರ್ಷ ಅಂದರೆ 2021ರಲ್ಲಿ ಸೆಟ್ಟೇರುವುದು ಅನುಮಾನವಾಗಿದೆ. ಮೂಲಗಳ ಪ್ರಕಾರ ಇಬ್ಬರ ಕನಸಿನ ಸಿನಿಮಾ 2022ಕ್ಕೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ವರ್ಷವೆ ಸೆಟ್ಟೇರಲಿದೆ ಅಂತ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

  ಆರ್ ಆರ್ ಆರ್ ಸಿನಿಮಾದ ಕೆಲಸಗಳು ಜಾಸ್ತಿ ಇರುವ ಕಾರಣ ಸಿನಿಮಾ ರಿಲೀಸ್ ತಡವಾಗಲಿದೆ. ಹಾಗಾಗಿ ಮಹೇಶ್ ಬಾಬು ಜೊತೆಗಿನ ಸಿನಿಮಾ ಸಹ ಮುಂದಕ್ಕೆ ಹೋಗಲಿದೆಯಂತೆ. ಅಂದುಕೊಂಡಂತೆ ಆಗಿದ್ದಾರೆ ಆರ್ ಆರ್ ಆರ್ ಸಿನಿಮಾ ಮುಂದಿನ ವರ್ಷ ಜನವರಿ 8ಕ್ಕೆ ತೆರೆಗೆ ಬರಬೇಕಿತ್ತು. ಆದರೀಗ ಕೊರೊನಾ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

  English summary
  Actor Mahesh Babu and SS Rajamouli dream project postponed by 2022.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X