ಕೊರೊನಾ ಗೆದ್ದು ಬಂದ ನಟ ಪವನ್ ಕಲ್ಯಾಣ್
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಕೊರೊನಾ ವರದಿ ಪಾಸಿಟಿವ್ ಬಂದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಪವನ್ ಕಲ್ಯಾಣ್ ಕೊನೆಗೂ ಕೊರೊನಾ ಗೆದ್ದು ಬಂದಿದ್ದಾರೆ.
ಕೊರೊನಾ ವರದಿ ನೆಗೆಟಿವ್ ಬಂದಿರುವ ಬಗ್ಗೆ ಪವನ್ ಕಲ್ಯಾಣ್ ಅವರ ಜನ ಸೇನಾ ಪಾರ್ಟಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಏಪ್ರಿಲ್ ಮೂರನೇ ವಾರದಲ್ಲಿ ಪವನ್ ಕಲ್ಯಾಣ್ ಗೆ ಕೊರೊನಾ ವರದಿ ಪಾಸಿಟಿವ್ ಬಂದಿತ್ತು. ಬಳಿಕ ತಮ್ಮ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ 20 ದಿನಗಳ ಬಳಿಕ ವರದಿ ನೆಗೆಟಿವ್ ಬಂದಿದೆ. 'ಪವನ್ ಕಲ್ಯಾಣ್ ಆರ್ ಟಿ ಪಿ ಆರ್ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ಯಾವುದೇ ತೊಂದರೆ ಇಲ್ಲ, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಪವನ್ ಕಲ್ಯಾಣ್ ಆರೋಗ್ಯಕ್ಕೆ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು' ಎಂದು ಹೇಳಿದ್ದಾರೆ.

ಪವನ್ ಕಲ್ಯಾಣ್ ಸಿಬ್ಬಂದಿಗೆ ಮೊದಲು ಕೊರೊನಾ ಸೋಂಕು ತಗುಲಿತ್ತು. ಉಪ ಚುನಾವಣೆಯ ರ್ಯಾಲಿಯಲ್ಲಿ ಭಾಗಿಯಾಗಿದ್ದ ಪವನ್ ಕಲ್ಯಾಣ್ ಅವರಿಗೂ ಸೋಂಕು ದೃಢಪಟ್ಟಿತ್ತು. ಕಡಿಮೆ ಲಕ್ಷಣಗಳು ಕಾಣಿಸಿಕೊಂಡಿತ್ತು. ಸದ್ಯ ಪವನ್ ಕಲ್ಯಾಣ್ ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಕೇಳಿ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ ಪವನ್ ಕಲ್ಯಾಣ್ ಇತ್ತೀಚಿಗಷ್ಟೆ ವಕೀಲ್ ಸಾಬ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಇದೀಗ ಹರಿ ಹರ ವೀರ ಮಲ್ಲು, ಅಯ್ಯಪ್ಪನುಂ ಕೋಶಿಯಮ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಯ್ಯಪ್ಪನುಂ ಕೋಶಿಯಮ್ ಮಲಯಾಳಂ ಸಿನಿಮಾದ ರಿಮೇಕ್ ಆಗಿದ್ದು, ರಾಣಾ ದಗ್ಗುಬಾಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


Click it and Unblock the Notifications











