For Quick Alerts
  ALLOW NOTIFICATIONS  
  For Daily Alerts

  Breaking: ಚಿರಂಜೀವಿ ಸೋದರಳಿಯ, ನಟ ಸಾಯಿ ಧರಮ್ ತೇಜ ಬೈಕ್ ಅಪಘಾತ

  |

  ತೆಲುಗು ಸಿನಿಮಾ ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಸೋದರಳಿಯ ಸಾಯಿ ಧರಮ್ ತೇಜ ಬೈಕ್ ಅಪಘಾತಕ್ಕೆ ಒಳಗಾಗಿದ್ದಾರೆ. ಕಳೆದ ರಾತ್ರಿ (ಶುಕ್ರವಾರ) ಹೈದರಾಬಾದ್‌ನ ಮಾಧಪುರ್ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಾಯಿ ಧರಮ್ ತೇಜ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

  ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಸಾಯಿ ಧರಮ್ ತೇಜ ಸ್ಪೋರ್ಟ್ಸ್ ಬೈಕ್‌ನಲ್ಲಿ ಅತಿಯಾದ ವೇಗವಾಗಿ ಚಾಲನೆ ಮಾಡುತ್ತಿದ್ದರು. ಹಾಗಾಗಿ, ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.

  ಅಪಘಾತ ಕೂಡಲೇ ಅವರನ್ನು ಮೆಡಿಕವರ್ ಆಸ್ಪತ್ರೆಗೆ ಸೇರಿಸಲಾಯಿತು. ಬಳಿಕ ಗಾಯಗಳ ಗಂಭೀರತೆಯ ಪರಿಣಾಮ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

  ಅಪಘಾತದ ಕುರಿತು 'ದಿ ಹಿಂದೂ' ಪತ್ರಿಕೆಗೆ ಮಾಧಪುರ್ ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದು, ''ಈ ಅಪಘಾತ ಶುಕ್ರವಾರ ರಾತ್ರಿ ಸುಮಾರು 8.30ರ ಸಮಯಕ್ಕೆ ಸಂಭವಿಸಿದೆ. ಐಟಿ ಕಾರಿಡಾರ್‌ನಲ್ಲಿ ನಾಲೆಡ್ಜ್ ಸಿಟಿ ಹತ್ತಿರ ನಟ ತನ್ನ ಟ್ರಯಂಫ್ ಬೈಕ್ ನಲ್ಲಿ ಜುಬಿಲಿ ಹಿಲ್ಸ್ ನಿಂದ ಗಚಿಬೌಲಿ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲಿ ಸ್ಕಿಡ್ ಆಗಿದೆ'' ಎಂದಿದ್ದಾರೆ.

  ರಜತ್ ಬೇಡಿ ಕಾರು ಅಪಘಾತ: ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು, ನಟನಿಗೆ ಕಂಟಕರಜತ್ ಬೇಡಿ ಕಾರು ಅಪಘಾತ: ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು, ನಟನಿಗೆ ಕಂಟಕ

  ಶುಕ್ರವಾರ ಗಣೇಶ ಚತುರ್ಥಿ ಹಬ್ಬವಿದ್ದ ಕಾರಣ ಸಾಮಾನ್ಯವಾಗಿ ರಸ್ತೆಯಲ್ಲಿ ಟ್ರಾಫಿಕ್ ಸಹ ಇರಲಿಲ್ಲ. ಜನಸಂದಣಿಯೂ ಇರಲಿಲ್ಲ. ಈ ಅಪಘಾತದಲ್ಲಿ ಸಾಯಿ ಧರಮ್ ತೇಜ ಅವರ ತಲೆಗೆ, ಎದೆ ಭಾಗಕ್ಕೆ ಹಾಗೂ ದೇಹದ ಇತರೆ ಅಂಗಗಳಿಗೂ ಪೆಟ್ಟು ಬಿದ್ದಿದೆ ಎಂಬ ಮಾಹಿತಿ ಇದೆ. ಇನ್ನು ನಟ ಸಾಯಿ ಧರಮ್ ತೇಜ ಅವರು ಒಬ್ಬರೇ ಬೈಕ್‌ನಲ್ಲಿ ಹೋಗುತ್ತಿದ್ದರಾ ಅಥವಾ ಸ್ನೇಹಿತರ ತಂಡವೂ ಇತ್ತಾ ಎನ್ನುವುದರ ಬಗ್ಗೆ ಸಿಸಿಟಿವಿ ದೃಶ್ಯಗಳಲ್ಲಿ ಪರೀಕ್ಷಿಸಲಾಗುತ್ತಿದೆ ಎಂದು ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದಾರೆ.

  actor-sai-dharam-tej-met-raod-accident

  ಇನ್ನು ಆಸ್ಪತ್ರೆಯಿಂದ ತಡರಾತ್ರಿಯೇ ಸಾಯಿ ಧರಮ್ ತೇಜ ಅವರ ಆರೋಗ್ಯದ ಬಗ್ಗೆ ಅಧಿಕೃತ ಅಪ್‌ಡೇಟ್ ಬಿಡುಗಡೆ ಮಾಡಲಾಗಿದೆ. ''ನಟ ಸಾಯಿ ಧರಮ್ ತೇಜ ಆರೋಗ್ಯವಾಗಿದ್ದಾರೆ. ಯಾವುದೇ ಅಪಾಯವಿಲ್ಲ. ಮುನ್ನೆಚ್ಚರಿಕೆ ಉದ್ದೇಶದಿಂದ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ'' ಎಂದು ತಿಳಿಸಿದ್ದಾರೆ.

  ಮೆಗಾ ನಟನ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರು, ಕಲಾವಿದರು ಆಸ್ಪತ್ರೆಗೆ ಧಾವಿಸಿ ಯೋಗಕ್ಷೇಮ ವಿಚಾರಿಸಿದರು. ಮೆಗಾಸ್ಟಾರ್ ಚಿರಂಜೀವಿ, ಅವರ ಸಹೋದರ ಮತ್ತು ನಟ-ರಾಜಕಾರಣಿ ಪವನ್ ಕಲ್ಯಾಣ್, ನಿರ್ಮಾಪಕ ಅಲ್ಲು ಅರವಿಂದ್, ನಟನ ಕಿರಿಯ ಸಹೋದರ ವೈಷ್ಣವ್ ತೇಜ್ ಮತ್ತು ಇತರ ಕುಟುಂಬ ಸದಸ್ಯರು ಮೆಡಿಕೊವರ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಾಧಪುರ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  2014ರಲ್ಲಿ ಚಿತ್ರರಂಗ ಪ್ರವೇಶಿಸಿದ ಸಾಯಿ ಧರಮ್ ತೇಜ 'ಪಿಲ್ಲಾ ನುವ್ವು ಲೇನಿ ಜೀವಿತಂ' ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದರು. ಆ ನಂತರ ರೇ, ಸುಬ್ರಮಣ್ಯಂ ಫಾರ್ ಸೇಲ್, ಸುಪ್ರೀಂ, ತಿಕ್ಕ, ವಿನ್ನರ್, ಜವಾನ್, ಇಂಟಿಲಿಜೆಂಟ್, ತೇಜ್ ಐ ಲವ್ ಯೂ, ಚಿತ್ರಲಹರಿ, ಪ್ರತಿ ರೋಜು ಪಂಡಗೆ, ಸೋಲೋ ಬ್ರಾಥುಕೆ ಸೋ ಬೆಟರ್ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ 'ರಿಪಬ್ಲಿಕ್' ಎನ್ನುವ ಚಿತ್ರದಲ್ಲಿ ಸಾಯಿ ಧರಮ್ ತೇಜ ನಟಿಸುತ್ತಿದ್ದಾರೆ.

  English summary
  Actor Sai Dharam Tej admitted to hospital after suffering from injuries in a road accident and Nothing to worry. No major injuries.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X