ಅಲ್ಲು ಅರ್ಜುನ್ ಸಿನಿಮಾಗೆ 100 ದಿನ ಕಾಲ್‌ಶೀಟ್ ಕೊಟ್ಟ ದೀಪಿಕಾ ಪಡುಕೋಣೆ; ಅಟ್ಲೀ ಸಿನಿಮಾ ಎಂದಿನಿಂದ ಶುರು
ಬಾಲಿವುಡ್ ಲೇಡಿ ಸೂಪರ್‌ಸ್ಟಾರ್ ದೀಪಿಕಾ ಪಡುಕೋಣೆ ಮತ್ತೆ ಶೂಟಿಂಗ್‌ಗೆ ಮರಳುತ್ತಿದ್ದಾರೆ. ಇಬ್ಬರು ಸೂಪರ್‌ಸ್ಟಾರ್‌ಗಳ ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ನಟಿ ಕೆಲವು ದಿನಗಳು ಬ್ರೇಕ್ ತೆಗೆದುಕೊಂಡಿದ್ದರು. ಈಗ 2025, ಅಕ್ಟೋಬರ್ ತಿಂಗಳಿನಿಂದ ಶಾರುಖ್ ಖಾನ್ ನಟಿಸುತ್ತಿರುವ 'ಕಿಂಗ್' ಹಾಗೂ ಅಲ್ಲು ಅರ್ಜುನ್ ನಟಿಸುತ್ತಿರುವ AA22xA6 ಸಿನಿಮಾಗಳ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.
'ಪುಷ್ಪ 2' ಬಳಿಕ ಅಲ್ಲು ಅರ್ಜುನ್ ಸಿನಿಮಾವನ್ನು ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ನವೆಂಬರ್‌ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಅಲ್ಲು ಅರ್ಜುನ್ ಮತ್ತು ಅಟ್ಲೀ ಸಿನಿಮಾಗಾಗಿ ದೀಪಿಕಾ ಪಡುಕೋಣೆ 100 ದಿನಗಳನ್ನು ಮೀಸಲಿಟ್ಟಿದ್ದಾರೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ.

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾಗೆ ಸ್ಟಾರ್ ಡೈರೆಕ್ಟರ್ ಅಟ್ಲಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾಗೆ 'AA22xA6' ಸದ್ಯಕ್ಕೆ ತಾತ್ಕಾಲಿಕ ಟೈಟಲ್ ಇಟ್ಟು ಕೆಲಸವನ್ನು ಆರಂಭಿಸಿದ್ದಾರೆ. ಇವರೊಂದಿಗೆ ದೀಪಿಕಾ ಪಡುಕೋಣೆ ಕೂಡ ಕೈ ಜೋಡಿಸಿದ್ದಾರೆ. ಈ ಮೂವರು ಸೇರಿ ಭಾರತೀಯ ಚಿತ್ರರಂಗದಲ್ಲೇ ಅತಿ ದೊಡ್ಡ ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈ ಸಿನಿಮಾವನ್ನು ಭಾರಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
'AA22xA6' ಆಕ್ಷನ್ ಹಾಗೂ ಸ್ಟಂಟ್‌ಗಳೇ ಹೈಲೈಟ್. ಹೀಗಾಗಿ ಇವುಗಳನ್ನು ಕಂಪೋಸ್ ಮಾಡುವುದಕ್ಕೆ ನಿರ್ಮಾಪಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ತಂಡವನ್ನು ಕರೆಸಿಕೊಂಡಿದ್ದಾರೆ. ಈ ಸಿನಿಮಾ ಪ್ರಮುಖ ಆಕರ್ಷಣೆ ಎಂದರೆ, ಅಲ್ಲು ಅರ್ಜುನ್ ಜೊತೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ 'ಪುಷ್ಪ'ದಲ್ಲಿ ಜೋಡಿಯಾಗಿದ್ದ ರಶ್ಮಿಕಾ ಮಂದಣ್ಣ, ಜಾಹ್ನವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಪ್ರಮುಖ ಪಾತ್ರಗಳಲ್ಲಿ ಇರುತ್ತಾರೆಂದು ವರದಿಯಾಗಿದೆ.
'ಪುಷ್ಪ' ಬಳಿಕ ಅಲ್ಲು ಅರ್ಜುನ್ ನಟಿಸುತ್ತಿರುವ ಬಹುಕೋಟಿ ವೆಚ್ಚದ ಸಿನಿಮಾ ನವೆಂಬರ್‌ನಿಂದ ಶೂಟಿಂಗ್ ಆರಂಭ ಆಗುತ್ತಿದೆ. ಅಟ್ಲಿ ನಿರ್ದೇಶಿಸುತ್ತಿರುವ ಈ ಸಿನಿಮಾದ ಶೂಟಿಂಗ್ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ರೆಡಿಯಾಗಿದ್ದಾರೆ. ಇದಕ್ಕಾಗಿ ದೀಪಿಕಾ ಪಡುಕೋಣೆ ಈಗಾಗಲೇ ತಯಾರಿಯನ್ನೂ ನಡೆಸಿದ್ದು, ನವೆಂಬರ್ ತಿಂಗಳಿನಿಂದ ಸೆಟ್ ಸೇರಿಕೊಳ್ಳಲಿದ್ದಾರೆ. ಈ ಸಿನಿಮಾಗಾಗಿ ದೀಪಿಕಾ ಪಡುಕೋಣೆ 100 ದಿನಗಳ ಕಾಲ್‌ಶೀಟ್ ಅನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ದೀಪಿಕಾ ಪಡುಕೋಣೆ ಸಿನಿಮಾ ಕಲಾವಿದರೂ ಸಮಯವನ್ನು ನಿಗಧಿ ಪಡಿಸಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಅದಕ್ಕೆ ಕೆಲವರಿಂದ ವಿರೋಧ ಕೂಡ ವ್ಯಕ್ತವಾಗಿತ್ತು. ಅಲ್ಲದೇ ಪ್ರಭಾಸ್ ನಟಿಸುತ್ತಿರುವ ಸ್ಪಿರೀಟ್ ಸಿನಿಮಾದ ನಿರ್ದೇಶಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇವುಗಳ ಮಧ್ಯೆ ದೀಪಿಕಾ ಪಡುಕೋಣೆ AA22xA6 ಸಿನಿಮಾಗಾಗಿ ಸುಮಾರು 100 ದಿನಗಳನ್ನು ಮೀಸಲಿಟ್ಟಿದ್ದಾರೆ.
ಈ ಸಿನಿಮಾದಲ್ಲಿ ಅಲ್ಲು ಅರ್ಜು್ ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. 'ಅವತಾರ್' ಸಿನಿಮಾದಲ್ಲಿ ಬಳಸಿಕೊಂಡಿದ್ದ ತಂತ್ರಜ್ಞಾನವನ್ನು ಬಳಸಿ ವಿಭಿನ್ನ ಲೋಕವನ್ನೇ ಸೃಷ್ಠಿ ಮಾಡಲಾಗುತ್ತಿದೆ. ನವೆಂಬರ್‌ನಲ್ಲಿ ಆರಂಭ ಆಗುವ ಈ ಸಿನಿಮಾ ಮುಂದಿನ ವರ್ಷ ಅಂದರೆ, 2026 ಸೆಪ್ಟೆಂಬರ್‌ಗೆ ಮುಗಿಯಲಿದ್ದು, ಇಲ್ಲಿಂದ ಸಿನಿಮಾ ಬಿಡುಗಡೆ ಆರೇಳು ತಿಂಗಳು ತಡವಾಗಲಿದೆ ಎನ್ನಲಾಗಿದೆ. ಇಷ್ಟೇ ಅಲ್ಲದೆ ಅಲ್ಲು ಅರ್ಜುನ್ ಸಿನಿಮಾ ಆರಂಭಕ್ಕೂ ಮುನ್ನ ದೀಪಿಕಾ ಪಡುಕೋಣೆ ಅಕ್ಟೋಬರ್‌ನಿಂದ ಶಾರುಖ್ ಖಾನ್ ಜೊತೆ 'ಕಿಂಗ್' ಚಿತ್ರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ವಿಶೇಷ ಅಂದರೆ, ತಾಯಿಯಾದ ಬಳಿಕ ದೀಪಿಕಾ ಪಡುಕೋಣೆ ನಟಿಸುತ್ತಿರುವ ಮೊದಲ ಎರಡು ಸಿನಿಮಾಗಳಾಗಿವೆ ಅನ್ನೋದು ವಿಶೇಷ. ಹೀಗಾಗಿ ಎರಡು ಸಿನಿಮಾಗಳನ್ನು ನೋಡುವುದಕ್ಕೆ ಅವರ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.


Click it and Unblock the Notifications











