For Quick Alerts
  ALLOW NOTIFICATIONS  
  For Daily Alerts

  ಫೋಟೋಗಳು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾಜಲ್ ಅಗರ್ವಾಲ್

  |

  ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಬಹುಕಾಲದ ಗೆಳೆಯ ಗೌತಮ್ ಕಿಚಲು ಜೊತೆ ಹಸೆಮಣೆ ಏರಿದ್ದಾರೆ. ನಿನ್ನೆ (ಅಕ್ಟೋಬರ್ 31) ಸಂಜೆ ಮುಂಬೈನ ತಾಜ್ ಮಹಲ್ ಪ್ಯಾಲೆಸ್ ಹೋಟೆಲ್ ನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಗೌತಮ್ ಖ್ಯಾತ ನಟಿ ಕಾಜಲ್ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

  ಕಾಜಲ್ ಮತ್ತು ಗೌತಮ್ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಾಜಲ್ ದಂಪತಿಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರಿಂದ ಶುಭಾಶಯ ತಿಳಿಸುತ್ತಿದ್ದಾರೆ. ಮದುಮಗಳು ಕಾಜಲ್ ಕೆಂಪು ಬಣ್ಣದ ಲೆಹಂಗಾದಲ್ಲಿ ಕಂಗೊಳಿಸುತ್ತಿದ್ದರೆ, ಪತಿ ಗೌತಮ್ ಶೆರ್ವಾನಿಯಲ್ಲಿ ಮಿಂಚಿದ್ದಾರೆ.

  ಅರಿಶಿಣ ಶಾಸ್ತ್ರದ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್

  ಕಾಜಲ್ ಮದುವೆಗೆ ಕೆಲವೇ ಕೆಲವು ಮಂದಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ಕುಟುಂಬದವರು, ಸ್ನೇಹಿತರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳ ಮಿತಿಯಲ್ಲೇ ಮದುವೆ ಸಮಾರಂಭ ಮಾಡಿ ಮುಗಿಸಿದ್ದಾರೆ.

  ಕಾಜಲ್ ಕುಟುಂಬ ಮತ್ತು ಆಪ್ತರು ಮದುವೆ ನಿಮಿತ್ತ ಹೈದರಾಬಾದ್ ನಿಂದ ಮುಂಬೈಗೆ ತೆರಳಿದ್ದಾರೆ. ಮದುವೆ ಸಮಾರಂಭ ಮುಗಿಸಿ ಹೈದರಾಬಾದ್ ಗೆ ವಾಪಸ್ ಆಗಲಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕಾಜಲ್ ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮೆಹಂದಿ ಶಾಸ್ತ್ರ, ಅರಿಶಿಣ ಶಾಸ್ತ್ರ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.

  ಮದುವೆ ನಂತರವೂ ಅಭಿನಯ ಮುಂದುವರೆಸುವುದಾಗಿ ಹೇಳಿರುವ ಕಾಜಲ್ ಈಗಾಗಲೇ ವೆಬ್ ಸೀರಿಸ್ ಲೋಕಕ್ಕೆ ಕಾಲಿಟ್ಟಿದ್ದಾರೆ. ಜೊತೆಗೆ ಕಮಲ್ ಹಾಸನ್ ಅಭಿನಯದ ಇಂಡಿಯನ್-2 ಸಿನಿಮಾದಲ್ಲೂ ಕಾಜಲ್ ಬ್ಯುಸಿಯಾಗಿದ್ದಾರೆ.

  English summary
  Actress Kajal Aggarwal ties the knot with Gautam Kitchlu. Kajal Aggarwal and Gautam Kitchlu marriage photo goes viral on social media.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X