ಕೇರಳದಲ್ಲಿ 'ಪುಷ್ಪ' ಅರಗಿಣಿಯ ಹವಾ ಹೇಗಿದೆ ನೋಡಿ; ಅಭಿಮಾನಿಗಳ ಕ್ರೇಜ್‌ಗೆ ಕಂಡು ಏನಂದ್ರು ರಶ್ಮಿಕಾ ಮಂದಣ್ಣ?
ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಸಿನಿಪ್ರಿಯರ ಮನದಲ್ಲಿ ಗಟ್ಟಿಯಾಗಿ ನೆಲೆಯೂರಿದ್ದಾರೆ. ಇತ್ತೀಚೆಗೆ ಬಾಲಿವುಡ್‌ನಲ್ಲೂ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಕೊಟ್ಟು ಸದ್ದು ಮಾಡುತ್ತಿದ್ದಾರೆ. ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳಲ್ಲಿಯೇ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯಾಗಿದ್ದಾರೆ. ಇದೇ ಬೆನ್ನಲ್ಲೇ ಕೊಡಗಿನ ಕುವರಿಗೆ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿದ್ದಾರೆ.
ಇತ್ತೀಚೆಗೆ ಸಿನಿಮಾಗಳಷ್ಟೇ ಅಲ್ಲದೆ, ಸೋಶಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ತಮ್ಮ ಹೊಸ ಹೊಸ ಫೋಟೋಗಳನ್ನು, ವಿಡಿಯೋಗಳನ್ನು ರಶ್ಮಿಕಾ ಮಂದಣ್ಣ ಶೇರ್ ಮಾಡುತ್ತಲೇ ಇರುತ್ತಾರೆ. ಹೀಗಾಗಿ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕೇರಳಕ್ಕೆ ಹೋಗಿದ್ದರು. ಈ ವೇಳೆ ಅಲ್ಲಿ ಸಿಕ್ಕ ಅಭಿಮಾನಿಗಳ ಪ್ರತಿಕ್ರಿಯೆ ಕಂಡು ಖುದ್ದು ರಶ್ಮಿಕಾ ಮಂದಣ್ಣ ಥ್ರಿಲ್ ಆಗಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕಾರ್ಯಕ್ರಮವೊಂದಕ್ಕೆ ಭಾಗವಹಿಸುವುದಕ್ಕೆ ಕೇರಳಗೆ ಹೋಗಿದ್ದರು. ಈ ವೇಳೆ 'ಪುಷ್ಪ' ನಟಿಯನ್ನು ಕಣ್ತುಂಬಿಕೊಳ್ಳುವುದಕ್ಕೆ ಸಾವಿರಾರು ಮಂದಿ ಸೇರಿಕೊಂಡಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಸೇರಿಕೊಂಡಿದ್ದ ಅಭಿಮಾನಿಗಳನ್ನು ಕಂಡು ರಶ್ಮಿಕಾ ಥ್ರಿಲ್ ಆಗಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಸಂತಸ ವ್ಯಕ್ತಪಡಿಸಿದ್ದಾರೆ.
"ಇತ್ತೀಚೆಗಿನ ಕಾರ್ಯಕ್ರಮವೊಂದಕ್ಕೆ ಭಾಗವಹಿಸುವುದಕ್ಕೆ ಜುಲೈ 25ರಂದು ಕೇರಳದ ಕರುನಾಗಪಲ್ಲಿಗೆ ಹೋಗಿದ್ದೆ. ಅಲ್ಲಿ ಸಂಘಟಕರು ಆ ಕಾರ್ಯಕ್ರಮವನ್ನು ಅದ್ಭುತವಾಗಿ ಆಯೋಜನೆ ಮಾಡಿದ್ದರು. ನನ್ನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಅವರೆಲ್ಲರೂ ನನ್ನ ಮೇಲೆ ತೋರಿದ ಪ್ರೀತಿ ಎಷ್ಟು ಅನ್ನೋದು ಕಂಡು ನನಗೆ ಆಶ್ಚರ್ಯವಾಯಿತು. ನಾನು ಅವರಿಂದ ಇಷ್ಟೊಂದು ಪ್ರೀತಿಯನ್ನು ಖಂಡಿತವಾಗಿಯೂ ನಿರೀಕ್ಷೆ ಮಾಡಿರಲಿಲ್ಲ. ಅವರ ಅಭಿಮಾನಕ್ಕೆ ನನ್ನ ಹೃದಯ ತುಂಬಿ ಬಂತು. ನನ್ನ ಬಗ್ಗೆ ಅವರು ಇಟ್ಟುಕೊಂಡಿದ್ದ ಪ್ರೀತಿಗೆ ಹೇಗೆ ಧನ್ಯವಾದ ಹೇಳಬೇಕೆಂದು ತಿಳಿಯುತ್ತಿಲ್ಲ." ಎಂದು ಹೇಳಿಕೊಂಡಿದ್ದಾರೆ.
ಇದರೊಂದಿಗೆ ಇಷ್ಟೊಂದು ಅಭಿಮಾನಿಗಳ ಪ್ರೀತಿಗೆ ಪಾತ್ರನಾಗಲು ನಾನೆಷ್ಟು ಪುಣ್ಯ ಮಾಡಿದ್ದೆನೋ ಗೊತ್ತಿಲ್ಲ. ನಿಮ್ಮ ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ಪ್ರೀತಿ ಮಾಡುತ್ತೇನೆ. ನನ್ನೆಲ್ಲ ಅಭಿಮಾನಿಗಳಿಗೂ ಧನ್ಯವಾದಗಳು" ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಇದೇ ವೇಳೆ ರಶ್ಮಿಕಾ ಮಂದಣ್ಣ ಹಂಚಿಕೊಂಡ ಫೋಟೊಗಳು ಕೂಡ ವೈರಲ್ ಆಗಿವೆ.
ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ 'ಅನಿಮಲ್' ಅಂತಹ ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾದಲ್ಲಿ ನಟಿಸಿದ್ದರು. ರಣ್‌ಬೀರ್ ಕಪೂರ್ ಜೊತೆ ನಾಯಕಿಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದರು. ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿರುವ ಈ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಈ ಸಿನಿಮಾದಲ್ಲಿ ಹಿಂಸಾಚಾರ ಹೆಚ್ಚಿದೆ ಎಂದು ವಿವಾದಕ್ಕೂ ಕಾರಣವಾಗಿತ್ತು.
ಸದ್ಯಕ್ಕೀಗ ಬಹು ನಿರೀಕ್ಷಿತ ಸಿನಿಮಾ 'ಪುಷ್ಪ 2' ರಿಲೀಸ್ ಆಗಬೇಕಿದೆ. ಹಾಗೇ 'ರೇನ್‌ಬೋ', 'ದಿ ಗರ್ಲ್‌ಫ್ರೆಂಡ್', 'ಸಿಕಂದರ್' ಮತ್ತು 'ಕುಬೇರ' ದಂತಹ ಪ್ರತಿಷ್ಠಿತ ಚಿತ್ರಗಳಲ್ಲಿ ರಶ್ಮಿಕಾ ನಡಿಸುತ್ತಿದ್ದಾರೆ. ಲಕ್ಷ್ಮಣ್ ಉತೇಕರ್ ನಿರ್ದೇಶನದ ಬಾಲಿವುಡ್ ಸಿನಿಮಾದಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ. ಒಟ್ಟು 6ಕ್ಕೂ ಹೆಚ್ಚು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ.


Click it and Unblock the Notifications











