For Quick Alerts
  ALLOW NOTIFICATIONS  
  For Daily Alerts

  ಮಾಲ್ಡೀವ್ಸ್ ಪ್ರವಾಸದಲ್ಲಿ ಸಮಂತಾ; ಸ್ಕೂಬಾ ಡೈವಿಂಗ್ ಎಂಜಾಯ್ ಮಾಡಿದ ನಟಿ

  |

  ತೆಲುಗು ಸಿನಿಮಾರಂಗದ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಇದೀಗ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಇತ್ತೀಚಿಗೆ ಅಂದರೆ ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ಸೆಲೆಬ್ರಿಟಿಗಳು ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಅನೇಕರು ಮಾಲ್ಡೀವ್ಸ್ ಕಡೆ ಹೊರಟಿದ್ದಾರೆ. ಇತ್ತೀಚಿಗಷ್ಟೆ ನಟಿ ಕಾಜಲ್ ಅಗರ್ವಾಲ್ ಮತ್ತು ಪತಿ ಗೌತಮ್ ಮಾಲ್ಡೀವ್ಸ್ ನಲ್ಲಿ ಹನಿಮೂನ್ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ.

  ನಟಿ ಪ್ರಣಿತಾ, ಶಾನ್ವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ. ಇದೀಗ ತೆಲುಗು ನಟಿ ಸಮಂತಾ ಅಕ್ಕಿನೇನಿ ಪತಿ ನಾಗಚೈತನ್ಯ ಜೊತೆ ಮಾಲ್ಡೀವ್ಸ್ ಪ್ರವಾಸಕ್ಕೆ ಹೊರಟಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  'ನಾಗ ಚೈತನ್ಯಗೆ ವಿಚ್ಛೇದನ ನೀಡಿ, ನನ್ನನ್ನು ಮದುವೆಯಾಗಿ' ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು?'ನಾಗ ಚೈತನ್ಯಗೆ ವಿಚ್ಛೇದನ ನೀಡಿ, ನನ್ನನ್ನು ಮದುವೆಯಾಗಿ' ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು?

  ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಸಮಂತಾ ಪ್ರತಿದಿನ ತರವೇವಾರಿ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಮಾಲ್ಡೀವ್ಸ್ ನ ಸುಂದರ ಫೋಟೋಗಳನ್ನು ಶೇರ್ ಮಾಡಿದ್ದಾರೆ. ವಿಶೇಷ ಎಂದರೆ ಸಮಂತಾ ಸ್ಕೂಬಾ ಡೈವಿಂಗ್ ಮಾಡಿ ಖುಷಿ ಪಟ್ಟಿದ್ದಾರೆ.

  ಇತ್ತೀಚಿಗಷ್ಟೆ ನಟಿ ಸಮಂತಾ ಟಾಕ್ ಶೋ ಪ್ರಾರಂಭಿಸಿದ್ದಾರೆ. ವಿಜಯ್ ದೇವರಕೊಂಡ, ನಟ ಚಿರಂಜೀವಿ, ತಮನ್ನಾ, ಅಲ್ಲು ಅರ್ಜುನ್ ಸೇರಿದಂತೆ ಅನೇಕರು ಸಮಂತಾ ಅವರ ಸ್ಯಾಮ್ ಜಾಮ್ ಟಾಕ್ ಶೋ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  ಸಮಂತಾ ಸಿನಿಮಾ ವಿಚಾರಕ್ಕೆ ಬರುವುದಾದರೆ ವಿಘ್ನೇಶ್ ಶಿವನ್ ನಿರ್ದೇಶನದ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಸಿನಿಮಾ ಜೊತೆಗೆ ವೆಬ್ ಸೀರಿಸ್ ನಲ್ಲೂ ಬ್ಯುಸಿಯಾಗಿದ್ದಾರೆ.

  English summary
  Actress Samantha Akkineni all set to dive into the sea, she enjoying her Maldives Vacation.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X