For Quick Alerts
  ALLOW NOTIFICATIONS  
  For Daily Alerts

  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನಟಿ ತಮನ್ನಾ ಹೇಳಿದ್ದೇನು?

  |

  ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಮಿಲ್ಕಿ ಬ್ಯೂಟಿ ಸಾಮಾಜಿಕ ಜಾಲತಾಣದದ ಮೂಲಕ ತಿಳಿಸಿದ್ದಾರೆ.

  ಹೈದರಾಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದ ತಮನ್ನಾಗೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಬಳಿಕ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ತಮನ್ನಾ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. ಅಲ್ಲದೆ ಬೇಗ ಗುಣಮುಖರಾಗುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮುಂದೆ ಓದಿ...

  ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲುದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು

  ತಮನ್ನಾ ಹೇಳಿದ್ದೇನು?

  ತಮನ್ನಾ ಹೇಳಿದ್ದೇನು?

  "ಚಿತ್ರೀಕರಣ ಸೆಟ್ ನಲ್ಲಿ ನಾನು ಮತ್ತು ನನ್ನ ತಂಡ ಮುನ್ನೆಚ್ಚರಿಕೆಯಿಂದ ಇದ್ದರೂ ದುರದೃಷ್ಟವಾಶಾತ್ ಜ್ವರ ಕಾಣಿಸಿಕೊಂಡಿದೆ. ಪರೀಕ್ಷೆ ಮಾಡಿಸಿಕೊಂಡ ಬಳಿಕ ಕೊರೊನಾ ಪಾಸಿಟಿವ್ ಇದೆ ಎಂದು ಗೊತ್ತಾಗಿದೆ. ನಂತರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರ ಆರೈಕೆ ಬಳಿಕ ನಾನು ಈಗ ಡಿಸ್ಚಾರ್ಜ್ ಆಗಿದ್ದೀನಿ. ಈ ರೋಗದಿಂದ ಚೇತರಿಸಿಕೊಳ್ಳುತ್ತಿದ್ದೇನೆ. ನಾನು ಈಗ ಸ್ವಯಂ ಐಸೋಲೇಷನ್ ನಲ್ಲಿದ್ದೀನಿ." ಎಂದು ಬರೆದುಕೊಂಡಿದ್ದಾರೆ.

  ನಿತಿನ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ನಟಿ ತಮನ್ನಾನಿತಿನ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ನಟಿ ತಮನ್ನಾ

  ತಿಂಗಳ ಹಿಂದೆ ತಮನ್ನಾ ಪೋಷಕರಿಗೆ ಕೊರೊನಾ ಪಾಸಿಟಿವ್

  ತಿಂಗಳ ಹಿಂದೆ ತಮನ್ನಾ ಪೋಷಕರಿಗೆ ಕೊರೊನಾ ಪಾಸಿಟಿವ್

  ತಮನ್ನಾ ಪೋಸ್ಟ್ ಗೆ ಅಭಿಮಾನಿಗಳು ಮತ್ತು ಸಿನಿಗಣ್ಯರು ಕಾಮೆಂಟ್ ಮಾಡಿ ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ.

  ಅಂದ್ಹಾಗೆ ಕಳೆದ ತಿಂಗಳು ನಟಿ ತಮನ್ನಾ ಪೋಷಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸ್ವತಹ ನಟಿ ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

  ಲಾಕ್ ಡೌನ್ ನಲ್ಲಿ ಮುಂಬೈನಲ್ಲಿ ನೆಲೆಸಿದ್ದ ತಮನ್ನಾ

  ಲಾಕ್ ಡೌನ್ ನಲ್ಲಿ ಮುಂಬೈನಲ್ಲಿ ನೆಲೆಸಿದ್ದ ತಮನ್ನಾ

  ತಿಂಗಳ ಹಿಂದೆ ತಮನ್ನಾಗೆ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಇದೀಗ ತಮನ್ನಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಾಕ್ ಡೌನ್ ನಲ್ಲಿ ತಮನ್ನಾ ಮುಂಬೈನಲ್ಲಿ ನೆಲೆಸಿದ್ದರು. ಮುಂಬೈನಲ್ಲಿ ಕಾಲಕಳೆಯುತ್ತಿದ್ದ ತಮನ್ನಾ ಚಿತ್ರೀಕರಣ ಪ್ರಾರಂಭವಾದ ಕಾರಣ ಹೈದರಾಬಾದ್ ಗೆ ವಾಪಸ್ ಆಗಿದ್ದರು. ಸದ್ಯ ವೆಬ್ ಸೀರಿಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

  ದಯವಿಟ್ಟು ಆ ವಿಡಿಯೋ, ಫೋಟೋಸ್ ನ ಲೀಕ್ ಮಾಡಬೇಡಿ ಎಂದು ಬೇಡಿಕೊಂಡ ಆಶಿಕಾ ರಂಗನಾಥ್ | Filmibeat Kannada
  ತಮನ್ನಾ ಬಳಿ ಇರುವ ಸಿನಿಮಾಗಳು

  ತಮನ್ನಾ ಬಳಿ ಇರುವ ಸಿನಿಮಾಗಳು

  ಸಿನಿಮಾ ವಿಚಾರಕ್ಕೆ ಬರುವುದಾದರೆ ತಮನ್ನಾ ಸದ್ಯ ಕನ್ನಡದ ಸೂಪರ್ ಹಿಟ್ 'ಲವ್ ಮಾಕ್ ಟೇಲ್' ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಗೋಪಿಚಂದ್ ನಾಯಕನಾಗಿ ಅಭಿನಯಿಸುತ್ತಿರುವ ಸಿನಿಮಾದಲ್ಲಿಯೂ ತಮನ್ನಾ ನಟಿಸುತ್ತಿದ್ದಾರೆ. ಜೊತೆಗೆ ಬಾಲಿವುಡ್ ನ ಸೂಪರ್ ಹಿಟ್ ಅಂಧಾಧುನ್ ಸಿನಿಮಾದ ತೆಲುಗು ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ಕೈಯಲ್ಲಿ ಹಿಡಿದುಕೊಂಡಿರುವ ತಮನ್ನಾ ತಿಂಗಳುಗಳ ಬಳಿಕ ಚಿತ್ರೀಕರಣ ಪ್ರಾರಂಭಿಸಿದ್ದಾರು. ಆದರೀಗ ಕೊರೊನಾ ಪಾಸಿಟಿವ್ ಬಂದ ಕಾರಣ ಮತ್ತೆ ಚಿತ್ರೀಕರಣಕ್ಕೆ ಬ್ರೇಕ್ ಹಾಕಿದ್ದಾರೆ.

  English summary
  Actress Tamannaah Bhatia discharged from hospital after treatment for Corona virus. After testpositive for corona She Admitted to hospital.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X