ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು

ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನಲೆ ತಮನ್ನಾ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಲ್ಕಿ ಬ್ಯೂಟಿ ಸದ್ಯ ವೆಬ್ ಸೀರಿಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು.

ಹೈದರಾಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದ ತಮನ್ನಾಗೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ. ಬಳಿಕ ಪರೀಕ್ಷೆ ಮಾಡಿಸಿಕೊಂಡ ತಮನ್ನಾಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಚ್ಚಿನ ನಟಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕಳೆದ ತಿಂಗಳು ನಟಿ ತಮನ್ನಾ ಪೋಷಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸ್ವತಹ ನಟಿ ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

Actress Tamannaah Bhatia Tests Positive For Covid 19

'ಅಪ್ಪ-ಅಮ್ಮನಿಗೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ನನ್ನ ವರದಿ ನೆಗೆಟಿವ್ ಬಂದಿದೆ. ಪೋಷಕರು ಶೀಘ್ರ ಗುಣಮುಖರಾಗಲಿದ್ದಾರೆ. ನೀವು ದೇವರಲ್ಲಿ ಪ್ರಾರ್ಥಿಸಿ' ಎಂದು ಹೇಳಿದ್ದರು.

ಇದೀಗ ತಿಂಗಳ ಬಳಿಕ ಈಗ ತಮನ್ನಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಾಕ್ ಡೌನ್ ನಲ್ಲಿ ತಮನ್ನಾ ಮುಂಬೈನಲ್ಲಿ ನೆಲೆಸಿದ್ದರು. ಮುಂಬೈನಲ್ಲಿ ಕಾಲಕಳೆಯುತ್ತಿದ್ದ ತಮನ್ನಾ ಚಿತ್ರೀಕರಣ ಪ್ರಾರಂಭವಾದ ಕಾರಣ ಹೈದರಾಬಾದ್ ಗೆ ವಾಪಸ್ ಆಗಿದ್ದರು. ಸಿನಿಮಾ ವಿಚಾರಕ್ಕೆ ಬರುವುದಾದರೆ ತಮನ್ನಾ ಸದ್ಯ ಕನ್ನಡದ ಸೂಪರ್ ಹಿಟ್ 'ಲವ್ ಮಾಕ್ ಟೇಲ್' ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟ ಗೋಪಿಚಂದ್ ನಾಯಕನಾಗಿ ಅಭಿನಯಿಸುತ್ತಿರುವ ಸಿನಿಮಾದಲ್ಲಿಯೂ ತಮನ್ನಾ ನಟಿಸುತ್ತಿದ್ದಾರೆ. ಜೊತೆಗೆ ಬಾಲಿವುಡ್ ನ ಸೂಪರ್ ಹಿಟ್ ಅಂಧಾಧುನ್ ಸಿನಿಮಾದ ತೆಲುಗು ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ಕೈಯಲ್ಲಿ ಹಿಡಿದುಕೊಂಡಿರುವ ತಮನ್ನಾ ತಿಂಗಳುಗಳ ಬಳಿಕ ಚಿತ್ರೀಕರಣ ಪ್ರಾರಂಭಿಸಿದ್ದಾರು. ಆದರೀಗ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಮತ್ತೆ ಚಿತ್ರೀಕರಣಕ್ಕೆ ಬ್ರೇಕ್ ಹಾಕಿದ್ದಾರೆ.

More from Filmibeat

English summary
Actress tamannaah Bhatia tests positive for corona virus. She Admitted to hospital.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X