ಅಲಿಯಾ ಭಟ್ v/s ಪ್ರಭಾಸ್; ಬಾಕ್ಸ್ ಆಫೀಸ್ ನಲ್ಲಿ ಮೆಗಾವಾರ್
ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್ ನಟನೆಯ ರಾಧೆ ಶ್ಯಾಮ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ರಾಧೆ ಶ್ಯಾಮ್ ಯಾವಾಗ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
ಇತ್ತೀಚಿಗಷ್ಟೆ ಸಿನಿಮಾತಂಡ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ರಂದು ತೆರೆಗೆ ಬರುತ್ತಿದೆ. ವಿಶೇಷ ಅಂದರೆ ಅದೆ ದಿನ ಬಾಲಿವುಡ್ ನಟಿ ಅಲಿಯಾ ಭಟ್ ಅಭಿನಯದ ಗಂಗೂಬಾಯಿ ಕಾಥಿಯವಾಡಿ ಸಿನಿಮಾ ಕೂಡ ತೆರೆಗೆ ಬರುತ್ತಿದೆ.
ಗಂಗೂಬಾಯಿ ಕಾಥಿಯವಾಡಿ ಚಿತ್ರಕ್ಕೆ ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿದ್ದಾರೆ. ಭಾರಿ ನಿರೀಕ್ಷೆಯ ಸಿನಿಮಾ ಇದಾಗಿದ್ದು ಈಗಾಗಲೇ ರಿಲೀಸ್ ಆಗಿರುವ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಧೆ ಶ್ಯಾಮ್ ಸಿನಿಮಾ ತೆಲುಗು ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆಯ ಜೊತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಪ್ರಭಾಸ್ ಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಉತ್ತರ ಭಾರತದಲ್ಲೂ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿದ್ದಾರೆ. ಇದೀಗ ಇಬ್ಬರು ಸ್ಟಾರ್ ಕಲಾವಿದರು ನಟನೆಯ ಬಹುನಿರೀಕ್ಷೆಯ ಸಿನಿಮಾಗಳು ಒಂದೇ ದಿನ ತೆರೆಗೆ ಬರುತ್ತಿರುವುದರಿಂದ ಬಾಕ್ಸ್ ಆಫೀಸ್ ನಲ್ಲಿ ವಾರ್ ಆಗುವುದು ಪಕ್ಕ ಎನ್ನುತ್ತಿದ್ದಾರೆ ಸಿನಿಮಾ ವಿಶ್ಲೇಷಕರು.
ಈ ವರ್ಷ ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಕೊರೊನಾದಿಂದ ಕಳೆದ ವರ್ಷ ರಿಲೀಸ್ ಆಗದೆ ಮುಂದಕ್ಕೆ ಹೋಗಿದ್ದ ಸಿನಿಮಾಗಳ ಜೊತೆಗೆ ಈ ವರ್ಷ ರಿಲೀಸ್ ಆಗಲು ಸಜ್ಜಾಗಿದ್ದ ಸಿನಿಮಾಗಳು ಸಹ ತೆರೆಗೆ ಬರುತ್ತಿವೆ.
ಈಗಾಗಲೇ ಬಹುತೇಕ ಸಿನಿಮಾಗಳ ರಿಲೀಸ್ ಡೇಟ್ ಬಹಿರಂಗ ವಾಗಿದ್ದು ಸಾಕಷ್ಟು ಸಿನಿಮಾಗಳ ನಡುವೆ ಬಾಕ್ಸ್ ಆಫೀಸ್ ವಾರ್ ನಡೆಯುತ್ತಿದೆ. ಆದರೆ ಅಭಿಮಾನಿಗಳು ಯಾವ ಸಿನಿಮಾಗೆ ಜೈ ಎನ್ನುತ್ತಾರೆ, ಯಾವ ಸಿನಿಮಾ ಮೆಚ್ಚುಕೊಳ್ಳುತ್ತಾರೆ ಎನ್ನುವುದೇ ಸದ್ಯದ ಕುತೂಹಲ.


Click it and Unblock the Notifications











