'ಪುಷ್ಪ' ಸಂಗೀತ ನಿರ್ದೇಶಕರಿಗೆ ಸರ್ಪ್ರೈಸ್ ಗಿಫ್ಟ್ ಕಳುಹಿಸಿದ ಅಲ್ಲು ಅರ್ಜುನ್

ತೆಲುಗು ಸಿನಿಮಾರಂಗದ ಖ್ಯಾತ ನಟ ಅಲ್ಲು ಅರ್ಜುನ್ ಸದ್ಯ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಲಾಕ್ ಡೌನ್ ನಿಂದ ಚಿತ್ರೀಕರಣ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಚಿತ್ರೀಕರಣ ಪ್ರಾರಂಭವಾಗಿದ್ದು, ನಟ ಅಲ್ಲು ಅರ್ಜುನ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಈ ನಡುವೆ ಅಲ್ಲು ಅರ್ಜುನ್ ಪುಷ್ಪ ಸಿನಿಮಾದ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರಿಗೆ ಸರ್ಪ್ರೈಸ್ ಗಿಫ್ಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ. ಅಲ್ಲು ಅರ್ಜುನ್ ಗಿಫ್ಟ ನೋಡಿ ದೇವಿಶ್ರೀ ಪ್ರಸಾದ್ ಫುಲ್ ಖುಷ್ ಆಗಿದ್ದಾರೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ದೇವಿ ಶ್ರೀ ಪ್ರಸಾದ್ ಅನೇಕ ಸೂಪರ್ ಹಿಟ್ ಸಿನಿಮಾಗಳಿಗೆ ಹಿಟ್ ಸಂಗೀತ ನೀಡಿದ್ದಾರೆ.

ಇದೀಗ ಬನ್ನಿ ನಟನೆಯ ಬಹುನಿರೀಕ್ಷೆಯ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಇದೇ ಖುಷಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ ನೀಡಿದ್ದಾರೆ. ಉಡುಗೊರೆಯ ವಿಡಿಯೋವನ್ನು ದೇವಿ ಶ್ರೀ ಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ಅಲ್ಲು ಅರ್ಜುನ್ ನೀಡಿದ ವಿಶೇಷ ಗಿಫ್ಟ್ 'ರಾಕ್ ಸ್ಟಾರ್' ಎಂದು ಡಿಜಿಟಲ್ ಬೋರ್ಡ್ ಅನ್ನು ಕಳುಹಿಸಿದ್ದಾರೆ.

Allu Arjun sends surprise gift to Pushpa Music Director Devi Sri Prasad

ಗಿಫ್ಟ್ ನ ವಿಡಿಯೋವನ್ನು ದೇವಿಶ್ರೀ ಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಐಕಾನ್ ಸ್ಟಾರ್ ನಿಂದ ರಾಕ್ ಸ್ಟಾರ್ ಗಿಫ್ಟ್ ಎಂದು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಗಿಫ್ಟ್ ಅನ್ನು ಅನಾವರಣ ಮಾಡುತ್ತ ದೇವಿ ಶ್ರೀ ಪ್ರಸಾದ್ ಸಂತಸ ವ್ಯಕ್ತಪಡಿಸಿದ್ದಾರೆ.

"ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರಿಂದ ಸರ್ಪ್ರೈಸ್ ರಾಕ್ ಸ್ಟಾರ್ ಗಿಫ್ಟ್. ತುಂಬ ಧನ್ಯವಾದಗಳು ನನ್ನ ಆತ್ಮೀಯ ಸಹೋದರ ಬನ್ನಿ. ಎಂದ ಅದ್ಭುತವಾದ ಸರ್ಪೈಸ್, ಅನಿರೀಕ್ಷಿತ" ಎಂದು ಬರೆದುಕೊಂಡಿದ್ದಾರೆ.

ಬನ್ನಿ ಸರ್ಪ್ರೈಸ್ ಗಿಫ್ಟ್ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಪುಷ್ಪ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿದೆ. ಇನ್ನು ವಿಶೇಷ ಎಂದರೆ ಪುಷ್ಪ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ.

Recommended Video

Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Filmibeat Kannada

ಸದ್ಯ ಪುಷ್ಪ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲಾರಿ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ರಶ್ಮಿಕಾ ಅಲ್ಲು ಅರ್ಜುನ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ.

More from Filmibeat

English summary
Tollywood Actor Allu Arjun sends surprise gift to Pushpa Music Director Devi Sri Prasad.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X