National Film Awards: ರಾಷ್ಟ್ರ ಪ್ರಶಸ್ತಿ ಪಡೆಯಲು ದೆಹಲಿಗೆ ಹೊರಟ ಅಲ್ಲು ಅರ್ಜುನ್, ರಾಜಮೌಳಿ ಮತ್ತು ಕೀರವಾಣಿ
ಅಕ್ಟೋಬರ್ 17ರ ಮಂಗಳವಾರ ನವದೆಹಲಿಯಲ್ಲಿ 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆಲುಗು ಚಿತ್ರರಂಗದ ಹಲವು ಗಣ್ಯರು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಮೊದಲ ಬಾರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ಅಲ್ಲು ಅರ್ಜುನ್ ಕೂಡ ತಮ್ಮ ಪತ್ನಿಯೊಂದಿಗೆ ಏರ್‌ಪೋರ್ಟ್‌ನಲ್ಲಿ ಫೋಸ್ ನೀಡಿದ್ದಾರೆ.
ಖ್ಯಾತ ಚಲನಚಿತ್ರ ನಿರ್ದೇಶಕ ಎಸ್‌ಎಸ್ ರಾಜಮೌಳಿ ಮತ್ತು ಪ್ರಸಿದ್ಧ ಸಂಗೀತ ಸಂಯೋಜಕ ಎಂಎಂ ಕೀರವಾಣಿ ಕೂಡ ನವದೆಹಲಿಯಲ್ಲಿ ನಡೆಯಲಿರುವ 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಎಸ್‌ಎಸ್ ರಾಜಮೌಳಿ ಅವರು ತಮ್ಮ ಮಗ ಕಾರ್ತಿಕೇಯ ಅವರೊಂದಿಗೆ ಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅಲ್ಲು ಅರ್ಜುನ್‌ಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ
ಪುಷ್ಪ: ದಿ ರೈಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಪಡೆಯಲಿರುವ ನಟ ಅಲ್ಲು ಅರ್ಜುನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದು, ತಮ್ಮ ಪತ್ನಿ ಅಲ್ಲು ಸ್ನೇಹಾ ರೆಡ್ಡಿ ಅವರೊಂದಿಗೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಪ್ರಶಸ್ತಿ ಪುರಷ್ಕೃತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನಿಸಲಿದ್ದಾರೆ.
ಅಲ್ಲು ಅರ್ಜುನ್ ಕಪ್ಪು ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದರು. ಸ್ನೇಹಾ ರೆಡ್ಡಿ ಬಿಳಿ ಕ್ರಾಪ್ಡ್ ಟಾಪ್ ಮತ್ತು ನೀಲಿ ಜೀನ್ಸ್ ತೊಟ್ಟಿದ್ದರು. ಇಬ್ಬರೂ ಕೈ ಹಿಡಿದುಕೊಂಡು ಒಟ್ಟಿಗೆ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿದ್ದರು. ಪುಷ್ಪ: ದಿ ರೈಸ್ ಸಿನಿಮಾವು ಅಲ್ಲು ಅರ್ಜುನ್‌ಗೆ ರಾಷ್ಟ್ರ ಪ್ರಶಸ್ತಿ ಕೊಡುವ ಜೊತೆಗೆ ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ದೇವಿ ಶ್ರೀ ಪ್ರಸಾದ್ ಅವರಿಗೂ ಪ್ರಶಸ್ತಿ ಕೊಡಿಸಿದೆ.
ಸುಕುಮಾರ್ ನಿರ್ದೇಶನದ ಪುಷ್ಪ: ದಿ ರೈಸ್ ಡಿಸೆಂಬರ್ 17, 2021 ರಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಪುಷ್ಪರಾಜ್ ಅಲಿಯಾಸ್ ಪುಷ್ಪಾ ಎಂಬ ಟ್ರಕ್ ಡ್ರೈವರ್ ಆಗಿ ನಟಿಸಿದ್ದಾರೆ. ಅವರು ಜೀವನೋಪಾಯಕ್ಕಾಗಿ ರಕ್ತ ಚಂದನವನ್ನು ಕಳ್ಳಸಾಗಣೆ ಮಾಡುವವರಾಗಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಶ್ರೀವಲ್ಲಿಯಾಗಿ ನಟಿಸಿದರೆ, ಫಹಾದ್ ಫಾಸಿಲ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಎಸ್‌ಎಸ್ ರಾಜಮೌಳಿ ಮತ್ತು ಎಂಎಂ ಕೀರವಾಣಿ
ಆರ್‌ಆರ್‌ಆರ್ ಉತ್ತಮ ಮನರಂಜನೆಗಾಗಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇದು ಆಕ್ಷನ್ ಕೊರಿಯೋಗ್ರಫಿ, ಡ್ಯಾನ್ಸ್ ಕೊರಿಯೋಗ್ರಫಿ, ಸ್ಪೆಷಲ್ ಎಫೆಕ್ಟ್ಸ್, ಎಂಎಂ ಕೀರವಾಣಿಯ ಹಿನ್ನೆಲೆ ಸಂಗೀತ ಮತ್ತು ಕಾಲ ಭೈರವ ಅವರು ಕೊಮುರಂ ಭೀಮುಡೋ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗಳನ್ನು ಗೆದ್ದಿದೆ.
ಎಂಎಂ ಕೀರವಾಣಿ ಮತ್ತು ಅವರ ಮಗ ಕಾಲ ಭೈರವ ಇಬ್ಬರೂ ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದ ನಂತರ ತೆಲುಗು ಚಲನಚಿತ್ರೋದ್ಯಮಕ್ಕೆ ಇ ವರ್ಷ ಐತಿಹಾಸಿಕ ವರ್ಷವಾಗಿದೆ. ಕೀರವಾಣಿ ಈ ವರ್ಷದ ಆರಂಭದಲ್ಲಿ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಹಾಡಿಗಾಗಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದ್ದರು.
ಎಸ್‌ಎಸ್ ರಾಜಮೌಳಿ
ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರ ಬಾಹುಬಲಿ: ದಿ ಬಿಗಿನಿಂಗ್ 63 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಎರಡು ವರ್ಷಗಳ ನಂತರ, ಬಾಹುಬಲಿ: ದಿ ಕನ್‌ಕ್ಲೂಷನ್ 65 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಈಗ ಆರ್‌ಆರ್‌ಆರ್ ಪ್ರಶಸ್ತಿ ಪಡೆದುಕೊಂಡಿದೆ.


Click it and Unblock the Notifications











