twitter
    For Quick Alerts
    ALLOW NOTIFICATIONS  
    For Daily Alerts

    ಚಿತ್ರಮಂದಿರಗಳನ್ನು ಸೀಜ್ ಮಾಡಿದ ಸರ್ಕಾರ: ಕೆರಳಿ ಕೆಂಡವಾದ ತೆಲುಗು ಚಿತ್ರರಂಗ

    |

    ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಹಾಗೂ ತೆಲುಗು ಚಿತ್ರರಂಗದ ನಡುವಿನ ವೈಷಮ್ಯ ದಿನೇ-ದಿನೇ ಹೆಚ್ಚಾಗುತ್ತಲೇ ಇದೆ. ಸಣ್ಣದಾಗಿ ಆರಂಭವಾದ ಈ ವೈಷಮ್ಯ ಇದೀಗ ಕಾದಾಟದ ಹಂತಕ್ಕೆ ತಲುಪಿದೆ.

    ತೆಲುಗು ನಟ ನಾನಿಯ 'ಶ್ಯಾಮ ಸಿಂಘ ರಾಯ್' ಸಿನಿಮಾ ಕಳೆದ ಶುಕ್ರವಾರವಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ಆಗುವ ಒಂದು ದಿನ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ನಾನಿ, ''ಆಂಧ್ರ ಪ್ರದೇಶ ಸರ್ಕಾರವು ಚಿತ್ರಮಂದಿರಗಳ ಟಿಕೆಟ್ ದರ ತಗ್ಗಿಸಿರುವುದು ತರ್ಕವಿಲ್ಲದ ನಿರ್ಣಯ ಹಾಗೂ ಪ್ರೇಕ್ಷಕರಿಗೆ ಮಾಡಿದ ಅಪಮಾನ'' ಎಂದಿದ್ದರು.

    ನಾನಿಯ ಈ ಹೇಳಿಕೆಯನ್ನು ಆಂಧ್ರ ಸರ್ಕಾರದ ಮಂತ್ರಿಗಳು, ಶಾಸಕರು ಹಾಗೂ ಕಾರ್ಯಕರ್ತರು ಖಂಡಿಸಿದ್ದರು. ನಾನಿಯ ಹೇಳಿಕೆ ಬಳಿಕ ಅವರ 'ಶ್ಯಾಮ ಸಿಂಘ ರಾಯ್' ಸಿನಿಮಾ ಆಂಧ್ರದಲ್ಲಿ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ಪ್ರದರ್ಶನ ಕಾಣುತ್ತಿದ್ದ ಕೆಲವು ಚಿತ್ರಮಂದಿರಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿ ಚಿತ್ರಮಂದಿರಗಳನ್ನೇ ಸೀಜ್ ಮಾಡಿದ್ದಾರೆ.

    20 ಚಿತ್ರಮಂದಿರಗಳನ್ನು ಸೀಜ್ ಮಾಡಲಾಗಿದೆ

    20 ಚಿತ್ರಮಂದಿರಗಳನ್ನು ಸೀಜ್ ಮಾಡಲಾಗಿದೆ

    ಹಾಗೆ ನೋಡಿದರೆ 'ಶ್ಯಾಮ ಸಿಂಘ ರಾಯ್' ಸಿನಿಮಾ ಬಿಡುಗಡೆಗೆ ಮುಂಚೆಯಿಂದಲೂ ಅಧಿಕಾರಿಗಳು ಚಿತ್ರಮಂದಿರಗಳನ್ನು ಸೀಜ್ ಮಾಡುತ್ತಿದ್ದಾರೆ. ಈ ವರೆಗೆ ಸುಮಾರು 20 ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ಸೀಜ್ ಮಾಡಲಾಗಿದೆ. 'ಶ್ಯಾಮ್ ಸಿಂಘ ರಾಯ್' ಸಿನಿಮಾದ ಬಿಡುಗಡೆ ದಿನವೇ ಒಟ್ಟು ಆರು ಚಿತ್ರಮಂದಿರಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಒಳ್ಳೆಯ ಪ್ರದರ್ಶನ ಕಾಣುತ್ತಿರುವ 'ಶ್ಯಾಮ ಸಿಂಘ ರಾಯ್' ಸಿನಿಮಾ ಆಂಧ್ರದಲ್ಲಿ ಪೆಟ್ಟು ತಿಂದಿದೆ.

    ಚಿತ್ರರಂಗದ ಮುಖಂಡರ ಮೇಲೂ ಅಸಮಾಧಾನ

    ಚಿತ್ರರಂಗದ ಮುಖಂಡರ ಮೇಲೂ ಅಸಮಾಧಾನ

    ಸಂದರ್ಶನದಲ್ಲಿ ಮಾತನಾಡಿದ್ದ ನಟ ನಾನಿ ತೆಲುಗು ಚಿತ್ರರಂಗದವರ ಮೇಲೂ ಅಸಮಾಧಾನ ವ್ಯಕ್ತಪಡಿಸಿದ್ದರು, ''ವಕೀಲ್ ಸಾಬ್' ಸಿನಿಮಾಕ್ಕೆ ಸಮಸ್ಯೆ ಆದಾಗಲೇ ಎಲ್ಲರೂ ಒಟ್ಟಾಗಿ ಬೀದಿಗೆ ಇಳಿದು ಹೋರಾಟ ಮಾಡಿದ್ದಿದ್ದರೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ. ಅಂದು ನಮಗ್ಯಾಕೆ ಎಂದುಕೊಂಡರು ಇಂದು ಸಮಸ್ಯೆ ದೊಡ್ಡದಾಗಿ ಬೆಳೆದು ನಮ್ಮ ಅಸ್ತಿತ್ವದ ಪ್ರಶ್ನೆಯಾಗಿ ನಿಂತಿದೆ'' ಎಂದಿದ್ದರು ನಾನಿ.

    ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದೆ ಚಿತ್ರರಂಗ

    ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದೆ ಚಿತ್ರರಂಗ

    ಚಿತ್ರಮಂದಿರಗಳನ್ನು ಸೀಜ್ ಮಾಡುತ್ತಿರುವುದನ್ನು ತೆಲುಗು ಚಿತ್ರರಂಗ ಹಾಗೂ ಆಂಧ್ರ ಪ್ರದೇಶ ಚಿತ್ರಮಂದಿರ ಮಾಲೀಕರ ಸಂಘ ತೀವ್ರವಾಗಿ ಖಂಡಿಸಿದೆ. ಪ್ರೇಕ್ಷಕರಿಗೆ ಮಾಡಿದ ಅಪಮಾನ ಎಂಬ ನಾನಿ ಹೇಳಿಕೆಗೆ ನಿರ್ಮಾಪಕ ದಿಲ್ ರಾಜು ಸೇರಿದಂತೆ ಹಲವರು ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ತೆಲುಗು ಚಿತ್ರರಂಗ ಒಟ್ಟಾಗಿ ಆಂಧ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಆಂಧ್ರದ ಚಿತ್ರಮಂದಿರಗಳ ಮಾಲೀಕರ ಸಂಘವು ಚಿತ್ರರಂಗದ ಬೆಂಬಲದೊಂದಿಗೆ ಆಂಧ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದೆ.

    ಆಂಧ್ರದಲ್ಲಿ ಟಿಕೆಟ್ ದರಗಳು ಎಷ್ಟಿವೆ?

    ಆಂಧ್ರದಲ್ಲಿ ಟಿಕೆಟ್ ದರಗಳು ಎಷ್ಟಿವೆ?

    ಚಿತ್ರಮಂದಿರಗಳ ಟಿಕೆಟ್‌ ದರವನ್ನು ಏರಿಸಬೇಕು ಎಂದು ತೆಲುಗು ಚಿತ್ರರಂಗವು ಆಂಧ್ರ ಸರ್ಕಾರದ ಬಳಿ ಮನವಿ ಮಾಡಿತ್ತು. ಆದರೆ ಮನವಿಗೆ ವ್ಯತಿರಿಕ್ತವಾಗಿ ಸ್ಪಂದಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ ರಾಜ್ಯದ ಚಿತ್ರಮಂದಿರಗಳ ಟಿಕೆಟ್ ದರವನ್ನು ಧಾರುಣವಾಗಿ ತಗ್ಗಿಸಿದರು. ಆಂಧ್ರ ಸರ್ಕಾರದ ಹೊಸ ಆದೇಶದಂತೆ, ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿನ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ಪ್ರೀಮಿಯಂ ಟಿಕೆಟ್ ದರ 250ರೂ ರು ದಾಟುವಂತಿಲ್ಲ. ಡಿಲಕ್ಸ್ ವಿಭಾಗದ ದರ 150 ರು. ದಾಟುವಂತಿಲ್ಲ. ಎಕಾನಮಿ ಕ್ಲಾಸ್ ಟಿಕೆಟ್ 75 ರು. ದಾಟುವಂತಿಲ್ಲ. ಎಸಿ ಚಿತ್ರಮಂದಿರಗಳಲ್ಲಿ ಪ್ರೀಮಿಯಂ ಟಿಕೆಟ್ ದರ 100 ರು ದಾಟುವಂತಿಲ್ಲ, ಡಿಲಕ್ಸ್ 60 ರು. ಹಾಗೂ ಎಕಾನಮಿ 40 ರು ದಾಟುವಂತಿಲ್ಲ. ನಾನ್ ಎಸಿ ಚಿತ್ರಮಂದಿರಗಳಲ್ಲಿ, ಪ್ರೀಮಿಯಂ ಟಿಕೆಟ್ ದರ 60, ಡಿಲಕ್ಸ್ 40, ಎಕಾನಮಿ 20 ಇರಬೇಕು ಎಂದು ಆದೇಶಿಸಲಾಗಿದೆ. ಅದೇ ಮುನ್ಸಿಪಾಲಿಟಿ ಪ್ರಾಂಥ್ಯದಲ್ಲಿ ಮಲ್ಟಿಫ್ಲೆಕ್ಸ್‌ಗಳ ಪ್ರೀಮಿಯಂ ಟಿಕೆಟ್ ದರ 150, ಡಿಲಕ್ಸ್ 100, ಎಕಾನಮಿ 60 ರುಗಳನ್ನು ದಾಟುವಂತಿಲ್ಲ.

    ಎಸಿ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 70 ರು, ಡಿಲಕ್ಸ್ 50 ರು, ಎಕಾನಮಿ 30 ರು ದಾಟುವಂತಿಲ್ಲ. ನಗರ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಲ್ಟಿಫ್ಲೆಕ್ಸ್‌ನ ಪ್ರೀಮಿಯಂ ಟಿಕೆಟ್ ದರ 120 ರು, ಡಿಲಕ್ಸ್ ಟಿಕೆಟ್ ದರ 80 ರು, ಎಕಾನಮಿ 40 ರುಪಾಯಿ ಬೆಲೆ ದಾಟುವಂತಿಲ್ಲ. ಎಸಿ ಹೊಂದಿದ ಚಿತ್ರಮಂದಿರಗಳಲ್ಲಿ ಪ್ರೀಮಿಯಂ ಟಿಕೆಟ್ ದರ 35 ರು, ಡಿಲಕ್ಸ್ 25 ರು, ಎಕಾನಮಿ 15 ರು ದಾಟುವಂತಿಲ್ಲ. ಇನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಮಲ್ಟಿಫ್ಲೆಕ್ಸ್‌ ಪ್ರೀಮಿಯಂ ಟಿಕೆಟ್ ಬೆಲೆ 80 ರು, ಡಿಲಕ್ಸ್ 50 ರು, ಎಕಾನಮಿ 30 ರು. ಎಸಿ ಹೊಂದಿದ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 20 ರು. ಡಿಲಕ್ಸ್ 15 ರು, ಎಕಾನಮಿ 10 ರು. ಇನ್ನು ಎಸಿ ಇರದ ಚಿತ್ರಮಂದಿರಗಳ ಪ್ರೀಮಿಯಂ ಟಿಕೆಟ್ ದರ 15, ಡಿಲಕ್ಸ್ 10, ಎಕಾನಮಿ ಕ್ಲಾಸ್‌ನ ಟಿಕೆಟ್ ದರ 5 ರುಪಾಯಿ ದಾಟುವಂತಿಲ್ಲ. ಆಂಧ್ರ ಸರ್ಕಾರದ ಈ ಆದೇಶದ ವಿರುದ್ಧ ತೆಲುಗು ಚಿತ್ರರಂಗ ಹಾಗೂ ಆಂಧ್ರದ ಚಿತ್ರಮಂದಿರಗಳ ಮಾಲೀಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

    English summary
    Andhra Pradesh government seizing theaters in the state for different reasons. Telugu movie industry express anger on the government.
    Thursday, December 30, 2021, 9:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X