ನಟ ನಿಖಿಲ್ ಗೆ ನಾಯಕಿಯಾದ 'ನಟಸಾರ್ವಭೌಮ' ನಟಿ ಅನುಪಮಾ ಪರಮೇಶ್ವರನ್
ಮಲಯಾಳಂ ಸಿನಿಮಾರಂಗದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅನುಪಮಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದು, ನಟ ನಿಖಿಲ್ ಜೊತೆ ನಟಿಸಲು ರೆಡಿಯಾಗಿದ್ದಾರೆ. ಅಂದ್ಹಾಗೆ ನಿಖಿಲ್ ಅಂದಮಾತ್ರಕ್ಕೆ ಮತ್ತೆ ಕನ್ನಡಕ್ಕೆ ಬರ್ತಿದ್ದಾರೆ ಎಂದು ಸಂತಸ ಪಡಬೇಡಿ. ಅನುಪಮಾ ತೆಲುಗು ನಟ ನಿಖಿಲ್ ಸಿದ್ಧಾರ್ಥ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಮಲಯಾಳಂನ ಸೂಪರ್ ಹಿಟ್ 'ಪ್ರೇಮಂ' ಸಿನಿಮಾ ಮೂಲಕ ದಕ್ಷಿಣ ಭಾರತೀಯ ಚಿತ್ರಪ್ರಿಯರ ಗಮನ ಸೆಳೆದ ನಟಿ ಅನುಪಮಾ. ಪ್ರೇಮಂ ಸೂಪರ್ ಹಿಟ್ ಆಗುತ್ತಿದ್ದಂತೆ ಅನುಪಮಾಗೆ ಬೇರೆ ಭಾಷೆಯಿಂದಲೂ ಬೇಡಿಕೆ ಹೆಚ್ಚಾಯಿತು. ನಂತರ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲಿ ಹೆಚ್ಚಾಗಿ ಗುರುತಿಸಿಕೊಂಡರು.
ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡಿರುವ ನಟಿ ಅನುಪಮಾ ಅದೇ ಗ್ಯಾಪ್ ನಲ್ಲಿ ಕನ್ನಡಕ್ಕೂ ಬಂದು ಹೋದರು. ಹೌದು, ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಪರಮೇಶ್ವರನ್ ಚಂದನವನದಲ್ಲೂ ಮಿಂಚಿದ್ದಾರೆ.

ಇದೀಗ ಅನುಪಮಾ ಮತ್ತೊಂದು ತೆಲುಗು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಚಿತ್ರಕ್ಕೆ '18 ಪೇಜಸ್' ಎಂದು ಟೈಟಲ್ ಇಡಲಾಗಿದೆ. ಈ ಬಗ್ಗೆ ಚಿತ್ರತಂಡ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತ ಮಾಹಿತಿ ಬಹಿರಂಗಪಡಿಸಿದೆ. ಅಲ್ಲು ಅರವಿಂದ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಚಿತ್ರಕ್ಕೆ ಸೂರ್ಯ ಪ್ರತಾಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಸುಕುಮಾರ್ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡುತ್ತಿದ್ದಾರೆ.
ಇದೇ ಮೊದಲ ಬಾರಿಗೆ ನಿಖಿಲ್ ಸಿದ್ಧಾರ್ಥ್ ಮತ್ತು ಅನುಪಮಾ ಒಂದೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುಪಮಾ ಎಂಟ್ರಿಯಿಂದ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಅಂದ್ಹಾಗೆ ಅನುಪಮಾ ಸದ್ಯ ಥಲ್ಲಿ ಪೊಗಥೆ ಎನ್ನುವ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ತಮಿಳಿನ ಎರಡನೇ ಸಿನಿಮಾವಾಗಿದೆ. ಈ ಮೊದಲು ಧನುಷ್ ಜೊತೆ ಕೋಡಿ ಸಿನಿಮಾದಲ್ಲಿ ನಟಿಸಿದ್ದರು.


Click it and Unblock the Notifications











