ಸೆನ್ಸೇಷನ್ ಸ್ಟಾರ್ ಜೊತೆ ನಟಿ ಅನುಷ್ಕಾ ಶೆಟ್ಟಿ ಸಿನಿಮಾ: ಇಲ್ಲಿದೆ ಮಾಹಿತಿ
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇತ್ತೀಚಿಗೆ 'ನಿಶಬ್ದಂ' ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದ್ದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ನಿಶಬ್ದಂ' ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಬಳಿಕ ಈಗ ಅನುಷ್ಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ವಿಶೇಷ ಅಂದರೆ ಅನುಷ್ಕಾ ದಕ್ಷಿಣ ಭಾರತದ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಅವರ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನುಷ್ಕಾ ಮತ್ತು ವಿಜಯ್ ದೇವರಕೊಂಡ ಸಿನಿಮಾಗೆ ಯುವ ನಿರ್ದೇಶಕರೊಬ್ಬರು ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಆದರೆ ಯಾರು ಆ ನಿರ್ದೇಶಕ ಎನ್ನುವುದು ಬಹಿರಂಗವಾಗಿಲ್ಲ. ಚಿತ್ರದ ಕಥೆ ಕೇಳಿ ಅನುಷ್ಕಾ ಮತ್ತು ವಿಜಯ್ ದೇವರಕೊಂಡ ಇಬ್ಬರು ಇಂಪ್ರೆಸ್ ಆಗಿ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಸದ್ಯದಲ್ಲೇ ಸಿನಿಮಾತಂಡ ಅಧಿಕೃತ ಮಾಹಿತಿ ಬಹಿರಂಗಪಡಿಸಲಿದೆ ಎಂದು ಹೇಳಲಾಗುತ್ತಿದೆ.
ನಟ ವಿಜಯ್ ದೇವರಕೊಂಡ ಈಗಾಗಲೇ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಜೊತೆ ಸಿನಿಮಾ ಮಾಡಿ ಸಕ್ಸಸ್ ಆಗಿದ್ದಾರೆ. ದಕ್ಷಿಣ ಭಾರತೀಯ ಸಿನಿಮಾದಲ್ಲಿ ಸೂಪರ್ ಹಿಟ್ ಜೋಡಿ ಎನಿಸಿಕೊಂಡಿದೆ. ಇದೀಗ ದೇವರಕೊಂಡ ಮತ್ತೋರ್ವ ಕನ್ನಡದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಜೊತೆ ಸಿನಿಮಾ ಮಾಡುತ್ತಿರುವುದು ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಅನುಷ್ಕಾ ಮತ್ತು ವಿಜಯ್ ದೇವರಕೊಂಡ ಸಿನಿಮಾ ಮುಂದಿನ ವರ್ಷ 2021ಕ್ಕೆ ಸೆಟ್ಟೇರಲಿದೆ. ಅನುಷ್ಕಾ ಮತ್ತು ವಿಜಯ್ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಅನುಷ್ಕಾ, ಕಮಲ್ ಹಾಸನ್ ಅಭಿನಯದ ಮುಂದಿನ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ದ್ವಿಭಾಷಾ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇನ್ನು ನಟ ವಿಜಯ್ ದೇವರಕೊಂಡ ಬಹುನಿರೀಕ್ಷೆಯ ಫೈಟರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ತೆಲುಗು ಮತ್ತು ಹಿಂದಿಯಲ್ಲಿ ತಯಾಗಾರುತ್ತಿದೆ. ಪೂರಿ ಜಗನ್ನಾಥ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ವಿಜಯ್ ಗೆ ನಾಯಕಿಯಾಗಿ ಅನನ್ಯಾ ಪಾಂಡೆ ಕಾಣಿಸಿಕೊಳ್ಳುತ್ತಿದ್ದಾರೆ.


Click it and Unblock the Notifications











