Samantha: ಮತ್ತೆ ಆಸ್ಪತ್ರೆಗೆ ದಾಖಲಾದ್ರಾ ಸಮಂತಾ? ವೈರಲ್ ಫೋಟೊದ ಅಸಲಿಯತ್ತೇನು?
ಸಮಂತಾ ಅನಾರೋಗ್ಯದಿಂದ ಬಳಲುತ್ತಿರುವುದು ಗೊತ್ತೇ ಇದೆ. ಅದಕ್ಕಾಗಿಯೇ ಕೆಲವು ದಿನಗಳು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಸದ್ಯ ಸಮಂತಾ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಹಂಚಿಕೊಂಡಿರುವ ಕೆಲವು ಫೋಟೊಗಳು ವೈರಲ್ ಆಗಿದ್ದು, ಮತ್ತೆ ನಟಿಯ ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.
ಇಂದು (ಅಕ್ಟೋಬರ್ 12) ಸಮಂತಾ ರುಥ್ ಪ್ರಭು ತನ್ನ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಆ ಫೋಟೊಗಳು ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ಈ ಫೋಟೊಗಳಲ್ಲಿ ಸಮಂತಾ ಡ್ರಿಪ್ ಹಾಕಿರುವ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಜೊತೆ ಚಿಕಿತ್ಸೆ ಪಡೆಯುತ್ತಿರುವುದರ ಉಪಯೋಗಗಳನ್ನು ಹೇಳಿಕೊಂಡಿದ್ದಾರೆ.

ಈ ಹಿಂದೆ ಸಮಂತಾ ನಟನೆಯಿಂದ ಕೆಲವು ದಿನಗಳ ಕಾಲ ಬ್ರೇಕ್ ಪಡೆಯುತ್ತಿದ್ದಾರೆಂದು ಸುದ್ದಿಯಾಗಿತ್ತು. ಸದ್ಯ ಸಮಂತಾ ಹೆಚ್ಚಾಗಿ ಪ್ರವಾಸ ಮಾಡುತ್ತಾ ರಿಲ್ಯಾಕ್ಸ್ ಆಗುತ್ತಿದ್ದಾರೆ. ಜೊತೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಹೀಗಾಗಿ ಸಮಂತಾ ಇನ್‌ಸ್ಟಾಗ್ರಾಂ ಫೋಟೊಗಳು ವೈರಲ್ ಆಗುತ್ತಿದ್ದಂತೆ ಮತ್ತೆ ಆಸ್ಪತ್ರೆಗೆ ದಾಖಲಾಗಿರಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಆದರೆ, ಸಮಂತಾ ಇಲ್ಲಿ ಡ್ರಿಪ್ಸ್ ಹಾಕಿಸಿಕೊಳ್ಳುತ್ತಿರುವ ಫೋಟೊ ಹಾಕಿ ಅದರ ಕೆಲವು ಲಾಭಗಳನ್ನು ಶೇರ್ ಮಾಡಿಕೊಳ್ಳಲಾಗಿದೆ. ಆದರೆ ಕೊನೆಯಲ್ಲಿ ಹೈದರಾಬಾದ್‌ನ ಚರ್ಮ ಹಾಗೂ ಕೂದಲಿನ ಚಿಕಿತ್ಸಾಲಯ ಡಿಸೈರ್ ಅಸ್ತೇಟಿಕ್ ಅನ್ನು ಟ್ಯಾಗ್ ಮಾಡಿದ್ದಾರೆ. ಹೀಗಾಗಿ ಸಮಂತಾ ಚಿಕಿತ್ಸೆ ಪಡೆಯುತ್ತಿದ್ದಾರಾ? ಇಲ್ಲಾ ಪ್ರಮೋಷನ್ ಮಾಡಿದ್ದಾರಾ ಅನ್ನೋ ಗೊಂದಲವೂ ಕೂಡ ಇದೆ.
ಕಳೆದ ವರ್ಷ ಸಮಂತಾ ತನಗೆ ಮಯೋಸೈಟಿಸ್ ಅನ್ನುವ ಅಪರೂಪ ಖಾಯಿಲೆ ಇರುವುದಾಗಿ ಹೇಳಿದ್ದರು. ಅದಕ್ಕಾಗಿಯೇ ಕೆಲವು ದಿನಗಳು ಚಿಕಿತ್ಸೆಯನ್ನೂ ಪಡೆದಿದ್ದರು. ಬಳಿಕ ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದರು. ವಿಜಯ್ ದೇವರಕೊಂಡ ಜೊತೆ ನಟಿಸಿದ 'ಖುಷಿ' ಸಿನಿಮಾ ರಿಲೀಸ್ ಆಗಿದೆ. ಹಾಗೇ ವರುಣ್ ಧವನ್ ಜೊತೆ ನಟಿಸಿದ 'ಸಿಟಾಡೆಲ್' ವೆವ್ ಸೀರಿಸ್ ಕೂಡ ಕಂಪ್ಲೀಟ್ ಮಾಡಿದ್ದಾರೆ. ಒಪ್ಪಿಕೊಂಡ ಎರಡು ಪ್ರಾಜೆಕ್ಟ್‌ಗಳನ್ನು ಮುಗಿಸುತ್ತಿದ್ದಂತೆ ಕೆಲವು ದಿನಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಸಮಂತಾ ಮತ್ತು ನಾಗ ಚೈತನ್ಯ ಮತ್ತೆ ಒಂದಾಗುತ್ತಾರೆ ಅನ್ನೋ ಸುದ್ದಿ ಹಬ್ಬಿತ್ತು. ಆದರೆ, ಸಮಂತಾ ಈ ಎಲ್ಲಾ ಗಾಳಿ ಸುದ್ದಿಗಳಿಗೆ ಬ್ರೇಕ್ ಹಾಕಿದ್ದರು. ತನ್ನ ಪಕ್ಕೆಲುಬಿನ ಕೆಳಗೆ 'ಚೈ' ಅಂತ ಮಾಜಿ ಪತಿ ಹೆಸರಿನ ಟ್ಯಾಟು ಹಾಕಿಸಿಕೊಂಡಿದ್ದರು. ಕೆಲವು ದಿನಗಳ ಹಿಂದಷ್ಟೇ ಆ ಟ್ಯಾಟುವನ್ನು ತೆಗೆದಿರುವ ಫೋಟೊವನ್ನು ಶೇರ್ ಮಾಡಿದ್ದರು. ಈ ಮೂಲಕ ಮತ್ತೆ ಒಂದಾಗುವ ಸುದ್ದಿಗೆ ಬ್ರೇಕ್ ಹಾಕಿದ್ದರು.
ಸಮಂತಾ ಸದ್ಯ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಸದ್ಯ ಸಿನಿಮಾದಿಂದ ಕಂಪ್ಲೀಟ್ ಬ್ರೇಕ್ ತೆಗೆದುಕೊಂಡಿದ್ದಾರೆ. ದೇಶ ವಿದೇಶವನ್ನು ಸುತ್ತುತ್ತಾ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಹೀಗಾಗಿ ಇನ್ನು ಕೆಲವು ದಿನಗಳು ಸಿನಿಮಾಗಳಲ್ಲಿ ಸಮಂತಾ ನಟಿಸೋದು ಅನುಮಾನ ಅನ್ನೋದು ಈ ಮೂಲಕ ಸಾಬೀತಾಗಿದೆ.


Click it and Unblock the Notifications











