Salaar: ದೀಪಾವಳಿಗೆ 'ಸಲಾರ್' ರಿಲೀಸ್ ಪೋಸ್ಟ್‌ಪೋನ್? ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಪಟ್ಟು

ಪ್ರಭಾಸ್ ನಟನೆಯ 'ಸಲಾರ್' ರಿಲೀಸ್ ಡೇಟ್ ಬಗ್ಗೆ ದಿನಕ್ಕೊಂದು ಸುದ್ದಿ ವೈರಲ್ ಆಗುತ್ತಿದೆ. ಚಿತ್ರತಂಡ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸದೇ ಸೈಲೆಂಟ್ ಆಗಿದೆ. ಸೆಪ್ಟೆಂಬರ್ 28ಕ್ಕೆ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಪೋಸ್ಟ್ ಪ್ರೊಡಕ್ಷನ್ ತಡವಾಗುತ್ತಿರುವುದೇ ಇದಕ್ಕೆಲ್ಲಾ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದ ಅಧಿಕೃತ ಮಾಹಿತಿ ನೀಡಲಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಹೈವೋಲ್ಟೇಜ್ ಆಕ್ಷನ್ ಎಂಟರ್‌ಟೈನರ್ 'ಸಲಾರ್' ಬೇಜಾನ್ ಹೈಪ್ ಕ್ರಿಯೇಟ್ ಮಾಡಿದೆ. 'KGF' ಸರಣಿಗೆ ಕೆಲಸ ಮಾಡಿದ ಬಹುತೇಕ ತಂಡ ಈ ಚಿತ್ರವನ್ನು ಕಟ್ಟಿಕೊಡುತ್ತಿದೆ. ಬಹುತೇಕ ಸಿನಿಮಾ ಶೂಟಿಂಗ್ ಕೂಡ ಮುಕ್ತಾಯವಾಗಿದೆ. ಆದರೆ ಗ್ರಾಫಿಕ್ಸ್ ವರ್ಕ್‌ ತಡವಾಗುತ್ತಿರುವುದು ಈಗ ಸಮಸ್ಯೆಗೆ ಕಾರಣವಾಗಿದೆ. ಹೊರ ದೇಶಗಳಲ್ಲಿ ತಿಂಗಳ ಮೊದಲೇ ಅಡ್ವಾನ್ಸ್ ಬುಕ್ಕಿಂಗ್ ಕೂಡ ಶುರುವಾಗಿತ್ತು. ಟ್ರೈಲರ್‌ಗಾಗಿ ಕಾಯ್ತಿದ್ದ ಅಭಿಮಾನಿಗಳಿಗೆ ಈಗ ಭಾರೀ ನಿರಾಸೆಯಾಗಿದೆ. ಕೆಲವರು ಚಿತ್ರತಂಡ ಕ್ಷಮೆ ಕೇಳಬೇಕು ಎನ್ನುತ್ತಿದ್ದಾರೆ.

Buzz: Prabhas starrer Salaar to release most likely in November

'ಸಲಾರ್' ಸಿನಿಮಾ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ನವೆಂಬರ್, ಡಿಸೆಂಬರ್ ಅಥವಾ ಜನವರಿಯಲ್ಲಿ ಸಿನಿಮಾ ರಿಲೀಸ್‌ ಆಗುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಕ್ರಿಸ್‌ಮಸ್ ಅಥವಾ ಸಂಕ್ರಾಂತಿ ಸಂಭ್ರಮದಲ್ಲಿ ಹೊಂಬಾಳೆ ಸಂಸ್ಥೆ ಸಿನಿಮಾ ರಿಲೀಸ್ ಮಾಡಲು ಆಲೋಚಿಸುತ್ತಿದೆ ಎನ್ನುವ ಗುಸುಗುಸು ಶುರುವಾಗಿದೆ. ಆದರೆ ಸದ್ಯಕ್ಕೆ ಸಿಗುತ್ತಿರುವ ಮಾಹಿತಿ ಪ್ರಕಾರ ನವೆಂಬರ್‌ನಲ್ಲಿ ಸಿನಿಮಾ ರಿಲೀಸ್ ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.

'ಸಲಾರ್' ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. 3 ಭಾಗಗಳಾಗಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ದೇವರಾಜ್, ಈಶ್ವರಿ ರಾವ್, ಭಜರಂಗಿ ಲೋಕಿ ಸೇರಿದಂತೆ ಘಟನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅಂದಾಜು 300 ಕೋಟಿ ರೂ. ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಪ್ರಭಾಸ್ ಡಬಲ್ ರೋಲ್‌ ಪ್ಲೇ ಮಾಡುತ್ತಿದ್ದಾರೆ ಎನ್ನುವ ಊಹಾಪೋಹ ಕೂಡ ಇದೆ. ದೀಪಾವಳಿ ಸಂಭ್ರಮದಲ್ಲಿ ಥಿಯೇಟರ್‌ಗಳಲ್ಲಿ 'ಸಲಾರ್' ಪ್ರಭಾಸ್ ಅಬ್ಬರಿಸುವ ಸಾಧ್ಯತೆಯಿದೆ.

ಈ ವರ್ಷ ಸೆಪ್ಟೆಂಬರ್ 28ಕ್ಕೆ 'ಸಲಾರ್' ಸಿನಿಮಾ ರಿಲೀಸ್ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಘೋಷಿಸಿತ್ತು. ಇದೇ ಕಾರಣಕ್ಕೆ ಬಾಕ್ಸಾಫೀಸ್ ಕ್ಲ್ಯಾಶ್ ಬೇಡ ಎಂದು 'ಜವಾನ್', 'ಅನಿಮಲ್' ಚಿತ್ರತಂಡಗಳು ರಿಲೀಸ್ ಡೇಟ್ ಬದಲಿಸಿಕೊಂಡಿದ್ದವು. ಆದರೆ ಕೊನೆ ಕ್ಷಣದಲ್ಲಿ ಈಗ ರಿಲೀಸ್ ಡೇಟ್ ಬದಲಿಸೋದು ಸರಿಯಲ್ಲ. ಅಭಿಮಾನಿಗಳಖಿಗೆ ನಿರಾಸೆ ಕೂಡ ಮಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಕ್ಷಮೆ ಕೇಳಬೇಕು ಎನ್ನುವ ಚರ್ಚೆ ಕೂಡ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಆದರೆ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗಿರುವ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

ಅಮೇರಿಕಾದಲ್ಲಿ ದಿಢೀರನೆ 'ಸಲಾರ್' ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ನಿಲ್ಲಿಸಲಾಗಿದೆಯಂತೆ. ಈಗಾಗಲೇ ಟಿಕೆಟ್ ಬುಕ್ ಮಾಡಿಕೊಂಡವರಿಗೆ ರೀಫಂಡ್ ಮಾಡುತ್ತಿದ್ದಾರೆ ಎನ್ನಲಾಗ್ತಿದೆ. ಇದನ್ನೆಲ್ಲಾ ನೋಡಿದರೆ ಸಿನಿಮಾ ಸೆಪ್ಟೆಂಬರ್ 28ಕ್ಕೆ ಬಿಡುಗಡೆ ಆಗುವುದು ಅನುಮಾನ ಎನ್ನಲಾಗುತ್ತಿದೆ. ಗ್ರಾಫಿಕ್ಸ್‌ ವಿಚಾರದಲ್ಲಿ ಬಂದಿರುವ ಔಟ್‌ಫುಟ್ ಇಷ್ಟವಾಗದೇ ರೀ ವರ್ಕ್‌ ಮಾಡುವಂತೆ ಪ್ರಶಾಂತ್ ನೀಲ್ ಹೇಳಿದ್ದಾರಂತೆ. ಅದೇ ಕಾರಣ 'ಸಲಾರ್' ತಡವಾಗುತ್ತಿದೆ ಎನ್ನುವ ಚರ್ಚೆ ನಡೀತಿದೆ.

ಚಿತ್ರದ ಸ್ಪೆಷಲ್ ಸಾಂಗ್ ಶೂಟಿಂಗ್ ಕೂಡ ಬಾಕಿಯಿದೆ. ಗುಣಮಟ್ಟದ ವಿಚಾರದಲ್ಲೂ ರಾಜಿಯಾಗುವುದು ಬೇಡ ಎನ್ನುವ ಕಾರಣಕ್ಕೆ ಚಿತ್ರತಂಡ ರಿಲೀಸ್ ಡೇಟ್ ಬದಲಿಸುವ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇನ್ನು ಟ್ರೈಲರ್ ರಿಲೀಸ್ ಆಗಿಲ್ಲ. ಪ್ರಮೋಷನ್ ಶುರು ಮಾಡಿಲ್ಲ. ಇದನ್ನೆಲ್ಲಾ ನೋಡುತ್ತಿದ್ದರೆ 'ಸಲಾರ್' ರಿಲೀಸ್ ಪೋಸ್ಟ್‌ಪೋನ್ ನಿಜ ಎನಿಸುತ್ತಿದೆ.

More from Filmibeat

English summary
Prabhas and Prashanth neels's Salaar release on November 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X