ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾನಿ ಮಾಸ್ಟರ್ ಬಂಧನ; ಸೈಬರಾಬಾದ್ ಪೊಲೀಸರಿಂದ ಗೋವಾದಲ್ಲಿ ಅರೆಸ್ಟ್

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅನ್ನು ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಯುವತಿಯೊಬ್ಬರು ಜಾನಿ ಮಾಸ್ಟರ್ ತನ್ನ ಮೇಲೆ ಜಾನಿ ಮಾಸ್ಟರ್ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಳು.

ಯುವತಿಯ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು.

Choreographer jani master arrested in sexual harassment case in Bengaluru

ಜಾನಿ ಮಾಸ್ಟರ್ ಉತ್ತರ ಭಾರತದಲ್ಲಿ ಅಡಗಿ ಕೂತಿದ್ದಾರೆಂಬ ಸುದ್ದಿ ಹರಿದಾಡಿದ್ದರೂ, ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ.

ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ. ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು.

ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಚಿತ್ರೀಕರಣದ ವೇಳೆ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಒಂದು ವೇಳೆ ವಿರೋಧಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ವಿಚಾರಣೆ ವೇಳೆ ಸಂತ್ರಸ್ತ ಯುವತಿ ತಿಳಿಸಿದ್ದಾಗಿ ವರದಿಯಾಗಿದೆ.

Choreographer jani master arrested in sexual harassment case in Bengaluru

ಇದೇ ವಿಚಾರಣೆ ವೇಳೆ ಸಂತ್ರಸ್ತೆ ಮತ್ತೊಂದು ಗಂಭೀರ ಆರೋಪ ಮಾಡಿ, ತನ್ನ ಧರ್ಮಕ್ಕೆ ಮತಾಂತರಗೊಂಡು ಮದುವೆ ಆಗುವಂತೆ ಪೀಡಿಸುತ್ತಿದ್ದ. ಜಾನಿ ಮಾಸ್ಟರ್ ಹಾಗೂ ಆತನ ಪತ್ನಿ ಇಬ್ಬರೂ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ. ಈ ಪ್ರಕರಣವನ್ನು ತೆಲುಗಿನ ನೃತ್ಯ ನಿರ್ದೇಶಕ ಸಂಘ ಗಂಭೀರವಾಗಿ ಪರಿಗಣಿಸಿದೆ. ಜನಸೇನಾ ಪಕ್ಷದ ಸದಸ್ಯತ್ವವನ್ನು ಜಾನಿ ಮಾಸ್ಟರ್‌ನಿಂದ ಹಿಂಪಡೆಯಲಾಗಿದೆ.

ಈ ಸಂತ್ರಸ್ತ ಯುವತಿ 2019ರಲ್ಲಿ ಜಾನಿ ಮಾಸ್ಟರ್ ತಂಡವನ್ನು ಸೇರಿಕೊಂಡಿದ್ದರು. ಅಂದಿನಿಂದ ಆತನದ ತಂಡದಲ್ಲಿ ಕೆಲಸ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಈ ಯುವತಿ ಹೇಳಿಕೊಂಡಿದ್ದಾಳೆ. ಔಟ್ ಡೋರ್ ಶೂಟಿಂಗ್ ಹೋಗಿದ್ದಾಗ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿದ್ದು, ಹೈದರಾಬಾದ್‌ನ ನರಸಿಂಗಿಯಲ್ಲಿರುವ ತನ್ನ ಮನೆಯಲ್ಲಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆ ಯುವತಿ ದೂರಿನಲ್ಲಿ ಆರೋಪ ಮಾಡಿದ್ದಾರೆ.

More from Filmibeat

English summary
Choreographer jani master arrested in sexual harassment case in Bengaluru
Read more about: tollywood filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X