Don't Miss!
- News
ವಿಜಯಪುರದ ಆಲಮೇಲದಲ್ಲಿ ನೂರಾರು ಮಕ್ಕಳಿಗೆ ದಡಾರ: ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಮನವಿ
- Sports
ಆಕ್ಯುಪ್ರೆಶರ್ ಚಿಕಿತ್ಸೆ ಪಡೆಯುತ್ತಿರುವ ಚಿತ್ರವನ್ನು ಹಂಚಿಕೊಂಡ ಶ್ರೇಯಸ್ ಅಯ್ಯರ್
- Technology
ಅತಿ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್ವಾಚ್ ಪರಿಚಯಿಸಿದ ಫೈರ್ಬೋಲ್ಟ್ !
- Lifestyle
ನಿಮ್ಮ ಗಂಡ 'ಅಮ್ಮನ ಮಗ'ವಾಗಿರುವುದರಿಂದ ತುಂಬಾನೇ ಸಮಸ್ಯೆ ಆಗುತ್ತಿದೆಯೇ?
- Finance
ಆಧಾರ್ ಕಾರ್ಡ್ ಸುರಕ್ಷತೆಗಾಗಿ ಯುಐಡಿಎಐ ನೂತನ ನಿಯಮ ತಿಳಿಯಿರಿ!
- Automobiles
ಕೈಗೆಟುಕುವ ಬೆಲೆಯಲ್ಲಿ ಮತ್ತೊಂದು ಎಸ್ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮಾರುತಿ ಸುಜುಕಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಸಲಾರ್' ಸಿನಿಮಾ 'ಉಗ್ರಂ' ನ ರೀಮೇಕ್? ಸ್ಪಷ್ಟನೆ ಕೊಟ್ಟ ಪ್ರಶಾಂತ್ ನೀಲ್
ಪ್ರಭಾಸ್ ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾ ಭಾರಿ ಕುತೂಹಲ ಕೆರಳಿಸಿದೆ. ಆದರೆ ಈ ನಡುವೆ 'ಸಲಾರ್' ಸಿನಿಮಾ ಪ್ರಶಾಂತ್ ನೀಲ್ ಅವರ ಮೊದಲ ಸಿನಿಮಾ 'ಉಗ್ರಂ' ನ ರೀಮೇಕ್ ಎಂಬ ಸುದ್ದಿಗಳು ಹರಿದಾಡುತ್ತಿವೆ.
Recommended Video
ಪ್ರಶಾಂತ್ ನೀಲ್ ಕನ್ನಡದಲ್ಲಿ ನಿರ್ದೇಶಿಸಿದ ಮೊದಲ ಕನ್ನಡ ಸಿನಿಮಾ 'ಉಗ್ರಂ' ಶ್ರೀಮುರಳಿ ನಟಿಸಿದ್ದ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಅದೇ ಸಿನಿಮಾವನ್ನು 'ಸಲಾರ್' ಹೆಸರಲ್ಲಿ ತೆಲುಗಿಗೆ ರೀಮೇಕ್ ಮಾಡಲಾಗುತ್ತಿದೆ ಎಂಬ ಸುದ್ದಿಗಳು ತೆಲುಗು ಮಾಧ್ಯಮಗಳಲ್ಲಿ ಕೆಲ ದಿನಗಳಿಂದಲೂ ಹರಿದಾಡುತ್ತಿತ್ತು. ಇದಕ್ಕೆ ಪ್ರಶಾಂತ್ ನೀಲ್ ಸ್ಪಷ್ಟನೆ ನೀಡಿದ್ದಾರೆ.
ತೆಲುಗು ಮಾಧ್ಯಮದೊಟ್ಟಿಗೆ ಮಾತನಾಡಿರುವ ಪ್ರಶಾಂತ್ ನೀಲ್, 'ಪ್ರಭಾಸ್ ಗಾಗಿ ನಿರ್ದೇಶನ ಮಾಡಲಾಗುತ್ತಿರುವ 'ಸಲಾರ್' ಸಿನಿಮಾ ಉಗ್ರಂ ಸಿನಿಮಾದ ರೀಮೇಕ್ ಅಲ್ಲ. ಅಷ್ಟು ಮಾತ್ರವೇ ಅಲ್ಲದೆ, ಯಾವ ಬಾಲಿವುಡ್ ಸಿನಿಮಾದ ರೀಮೇಕ್ ಸಹ ಅಲ್ಲ' ಎಂದಿದ್ದಾರೆ.
'ಸಲಾರ್ ಸಿನಿಮಾದ ಕತೆ ಪ್ರಭಾಸ್ ಗಾಗಿಯೆಂದೇ ಬರೆಯಲಾದ ಕತೆ. ಒರಿಜಿನಲ್ ಐಡಿಯಾವೊಂದನ್ನು ಪ್ರಭಾಸ್ ಗೆ ತಕ್ಕಂತೆ ಚಿತ್ರಕತೆಯಾಗಿ ರೂಪಿಸಿ ಇದೀಗ ಸಿನಿಮಾ ಮಾಡಲಾಗುತ್ತಿದೆ' ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ.
ಸಲಾರ್ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಗೋಧಾವರಿ ಗಣಿ ಯಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣ ಸೆಟ್‌ನ ಕೆಲವು ಚಿತ್ರಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಸಿನಿಮಾದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸುತ್ತಿದ್ದಾರೆ.