For Quick Alerts
  ALLOW NOTIFICATIONS  
  For Daily Alerts

  ಕನ್ನಡಿಗರಿಗೆ ಕನ್ನಡದಲ್ಲಿಯೇ ಧನ್ಯವಾದ ಹೇಳಿದ್ದೇಕೆ ರಾಜಮೌಳಿ?

  |

  ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ, ಬಾಹುಬಲಿ ಮಾಂತ್ರಿಕ ರಾಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಜಮೌಳಿ ಸಿನಿಮಾ ಅಂದ್ಮೇಲೆ ಚಿತ್ರಪ್ರಿಯರ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ಆರ್ ಆರ್ ಆರ್ ಸಿನಿಮಾದ ಮೇಲು ಸಿನಿರಸಿಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

  ಚಿತ್ರ ಸೆಟ್ಟೇರಿ ವರ್ಷವೆ ಆಗಿದೆ. ಆದರೂ ಸಿನಿಮಾದಿಂದ ಯಾವುದೆ ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಇತ್ತೀಚಿಗೆ ಅಂದ್ರೆ ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದಿಂದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರಿದಿಂದ ಬಂದ ಮೊದಲ ಮೋಷನ್ ಪೋಸ್ಟರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೆ, RRR ಮೇಲಿನ ನಿರೀಕ್ಷೆ, ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

  ಅಂದ್ಹಾಗೆ ಆರ್ ಆರ್ ಆರ್ ಸಿನಿಮಾ 5 ಭಾಷೆಯಲ್ಲಿ ತಯಾರಾಗುತ್ತಿದೆ. ವಿಶೇಷ ಅಂದರೆ ರಾಜಮೌಳಿ ಮೊದಲ ಸಿನಿಮಾ ಕನ್ನಡದಲ್ಲೂ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಕನ್ನಡದಲ್ಲಿಯೂ ಬಂದಿದೆ. ಕನ್ನಡದಲ್ಲಿ ಬಂದ ರಾಜಮೌಳಿ ಸಿನಿಮಾದ ಮೋಷನ್ ಪೋಸ್ಟರ್ ಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

  ಇದರಿಂದ ಸಂತಸಗೊಂಡಿರುವ ರಾಜಮೌಳಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ವಿಶೇಷ ಅಂದರೆ ಕನ್ನಡದಲ್ಲಿಯೆ ಪೋಸ್ಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. "ನಿಮ್ಮ ಉತ್ತಮ ಪ್ರತಿಕ್ರಿಯೆಗೆ ತುಂಬು ಹೃದಯದ ಧನ್ಯವಾದಗಳು" ಎಂದು ಹೇಳಿದ್ದಾರೆ.

  ಆರ್ ಆರ್ ಆರ್ ಸಿನಿಮಾದಲ್ಲಿ ನಾಯಕನಾಗಿ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಬಾಲಿವುಡ್ ಸುಂದರಿ ಅಲಿಯಾ ಭಟ್ ಬಣ್ಣ ಹಚ್ಚುತ್ತಿದ್ದಾರೆ. ಮೊದಲ ಬಾರಿಗೆ ಅಲಿಯಾ ದಕ್ಷಿಣ ಭಾರತೀಯ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೆ ಸಾಕಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ವರ್ಷಾರಂಭದಲ್ಲಿ ರಿಲೀಸ್ ಮಾಡುವ ಪ್ಲಾನ್ ಮಾಡಿದೆ.

  English summary
  Telugu famous Director SS Rajamouli Thanks to Kannada people to got good response for RRR Kannada motion poster.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X