ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಲು ಇಷ್ಟೊಂದು ಸಂಭಾವನೆ ಬೇಡಿಕೆ ಇಟ್ರಾ ದಿಶಾ ಪಟಾಣಿ?
ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ನಡುವೆ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಚಿತ್ರದಲ್ಲಿ ಬಾಲಿವುಡ್ ಸ್ಟಾರ್ ನಟಿ ದಿಶಾ ಪಟಾಣಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪುಷ್ಪ ಸಿನಿಮಾದ ಪ್ರಮುಖ ಹಾಡಿನಲ್ಲಿ ದಿಶಾ ಹೆಜ್ಜೆ ಹಾಕಲಿದ್ದಾರೆ ಎನ್ನುವ ಮಾತು ಅನೇಕ ದಿನಗಳಿಂದ ಕೇಳಿಬರುತ್ತಿದೆ. ಇದೀಗ ಕೇಳಿಬರುತ್ತಿರುವ ಸುದ್ದಿ ಎಂದರೆ ದಿಶಾ ಪಟಾನಿ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಕೇಳಿದ್ದಾರಂತೆ. ಹೌದು, ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಲು ದಿಶಾ ಪಟಾಣಿ ಬರೋಬ್ಬರಿ 1.5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ದಿಶಾ ಪಟಾಣಿ ಬೇಡಿಕೆ ಕೇಳಿ ಸಿನಿಮಾ ತಂಡ ಶಾಕ್ ಆಗಿದೆ ಎನ್ನಲಾಗುತ್ತಿದೆ. ಒಂದು ಹಾಡಿಗಾಗಿ ಪುಷ್ಪ ತಂಡ ಇಷ್ಟೊಂದು ಮೊತ್ತದ ಹಣ ನೀಡಲು ತಯಾರಿಲ್ಲ ಎನ್ನಲಾಗುತ್ತಿದೆ. ದಿಶಾ ಪಟಾಣಿಯನ್ನು ಆಯ್ಕೆ ಮಾಡಲು ಕಾರಣ ಕಾರಣ, ಪುಷ್ಪ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಹಾಗಾಗಿ ದಿಶಾ ಅವರನ್ನು ಆಯ್ಕೆ ಮಾಡಿದೆ ಸಿನಿಮಾತಂಡ. ಆದರೆ ಈಗ ದಿಶಾ ಸಂಭಾವನೆ ಕೇಳಿ ಹಿಂದೇಟು ಹಾಕುತ್ತಿದೆ ಎನ್ನಲಾಗುತ್ತಿದೆ.

ಅಂದುಕೊಂಡಂತೆ ಆಗಿದ್ದರೆ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಬೇಕಿತ್ತು. ಆದಕೆ ಕೊರೊನಾದಿಂದ ತಡವಾಗಿದ್ದು, ಇತ್ತೀಚಿಗಷ್ಟೆ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನೂ ಸಿನಿಮಾದಲ್ಲಿ ವಿಲನ್ ಆಗಿ ವಿಜಯ್ ಸೇತುಪತಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಜಯ್ ಸೇತುಪತಿ ಸಿನಿಮಾದಿಂದ ಹೊರನಡೆದಿದ್ದು, ಅವರ ಜಾಗಕ್ಕೆ ತಮಿಳು ನಟ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಹೌದು, ತಮಿಳು ನಟ ಆರ್ಯ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಕನ್ನಡ ನಟ ಧನಂಜಯ್ ಕಾಣಿಸಿಕೊಳ್ಳುತ್ತಿದ್ದಾರೆ.


Click it and Unblock the Notifications











