ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ನಿರ್ದೇಶಕ ಪುರಿ ಜಗನ್ನಾಥ್

ಡ್ರಗ್ಸ್ ಪ್ರಕರಣ ಸಂಬಂಧ ತೆಲುಗಿನ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಜಾರಿ ನಿರ್ದೇಶನಾಲಯ (ED-Enforcement Directorate) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ತೆಲುಗು ಕೆಲವು ಸ್ಟಾರ್ ಕಲಾವಿದರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಇಂದು (ಆಗಸ್ಟ್ 31) ಪುರಿ ಜಗನ್ನಾಥ್ ಹೈದರಾಬಾದ್ ನಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದರು.

ನಾಲ್ಕು ವರ್ಷಗಳ ಹಿಂದೆ ದಕ್ಷಿಣ ಭಾರತೀಯ ಸಿನಿಮಾರಂಗವನ್ನು ತಲ್ಲಣಗೊಳಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪುರಿ ಜಗನ್ನಾಥ್, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 13 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಬುಧವಾರ ಸಮನ್ಸ್ ಜಾರಿ ಮಾಡಿತ್ತು.

ಆಗಸ್ಟ್ 31ರಂದು ಪುರಿ ಜಗನ್ನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆ ಇಂದು ಬೆಳಗ್ಗೆ ಪುರಿ ಜಗನ್ನಾಥ್ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಇನ್ನು ನಟಿ ರಕುಲ್ ಪ್ರೀತ್ ಸಿಂಗ್‌ಗೆ ಸೆಪ್ಟೆಂಬರ್ 6, ರಾಣಾ ದಗ್ಗುಬಾಟಿಗೆ ಸೆಪ್ಟೆಂಬರ್ 8, ರವಿತೇಜಗೆ ಸೆಪ್ಟೆಂಬರ್ 9, ಮುಮೈತ್ ಖಾನ್‌ಗೆ ನವೆಂಬರ್ 15 ರಂದು ಹಾಗೂ ಚಾರ್ಮಿ ಕೌರ್ ಗೆ ಹಾಜರಾಗಲು ಸೂಚಿಸಲಾಗಿದೆ.

Drugs Case: Director Puri Jagannath arrives ed office in Hyderabad

ಡ್ರಗ್ಸ್ ಪ್ರಕರಣ ಸಂಬಂಧ 2017ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಟಾಲಿವುಡ್ ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು. ಮಿನಿ ಲಾಂಡರಿಂಗ್ ಸಂಬಂಧಿಸಿದಂತೆ ಪುರಿ ಜಗನ್ನಾಥ್ ಪ್ರಶ್ನಿಸಲ್ಪಡಲಿದ್ದಾರೆ.

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಪುರಿ ಜಗನ್ನಾಥ್ ಲೈಗರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾಗೆ ಕರಣ್ ಜೋಹರ್ ಧರ್ಮ ಪ್ರೊಡಕ್ಷನ್ ಬಂಡವಾಳ ಹೂಡಿದೆ.

ನಿರ್ದೇಶಕ ಪುರಿ ಜಗನ್ನಾಥ್ ಕೊನೆಯದಾಗಿ ಇಸ್ಮಾರ್ಟ್ ಶಂಕರ್ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇನ್ನು ಪೋಕಿರಿ, ಟೆಂಪರ್, ಹಾರ್ಟ್ ಅಟ್ಯಾಕ್, ಬ್ಯುಸಿನೆಸ್ ಮನ್, ಗೋಲಿಮಾರ್ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. 2004ರಲ್ಲಿ ಶಾರ್ಟ್ ದಿ ಚಾಲೆಂಜ್ ಸಿನಿಮಾ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದರು. 2011ರಲ್ಲಿ ಅಮಿತಾಬ್ ಬಚ್ಚನ್ ಅವರಿಗೆ ಮೊದಲ ಸಿನಿಮಾ ನಿರ್ದೇಶನ ಮಾಡಿದರು.

More from Filmibeat

English summary
Drugs Case: Director Puri Jagannath arrives ed office in Hyderabad.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X