ಅಡಿವಿ ಶೇಷ್ ಜೊತೆ ಈ ಬಾರಿ ಗೂಡಚರ್ಯೆಗೆ ಬಂದ ಸುರಸುಂದರಿ ಯಾರು?

5 ವರ್ಷಗಳ ಹಿಂದೆ ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ 'ಗೂಢಚಾರಿ'. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ ಹೀರೊ ಆಗಿ ನಟಿಸಿದ್ದರು. ಯಾವುದೇ ನಿರೀಕ್ಷೆ ಇಲ್ಲದೇ ಬಂದ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಅಂದಾಜು 6 ಕೋಟಿ ರೂ. ಬಜೆಟ್ ಸಿನಿಮಾ 25-30 ಕೋಟಿ ರೂ. ದೋಚಿತ್ತು.

ಟಾಲಿವುಡ್‌ನಲ್ಲಿ ಈಗ 'ಗೂಢಚಾರಿ'-2 ಸಿನಿಮಾ ನಿರ್ಮಾಣವಾಗುತ್ತಿದೆ. ಈಗಾಗಲೇ ರಿಲೀಸ್ ಆಗಿದ್ದ ಚಿತ್ರದ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಚಿತ್ರದಲ್ಲಿ ಜೋಡಿಯಾಗಿ ಆಯ್ಕೆ ಆಗಿದ್ದಾರೆ.

G2: Banita Sandhu joins AdiviSeshs spy sequel Goodachari- 2

ಬನಿತಾ ಸಂಧು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಕುರಿತು ಖುಷಿ ಹಂಚಿಕೊಂಡಿರುವ ಬನಿತಾ, "ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ" ಎಂದು ಹೇಳಿದ್ದಾರೆ.

ಚಿತ್ರದ ನಾಯಕ ನಟ ಅಡಿವಿ ಶೇಷ್ "ಗೂಢಚಾರಿ' ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ. ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದಿದ್ದಾರೆ. 'ಗೂಢಚಾರಿ -2' ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬಿಗ್ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ 'ಮೇಜರ್' ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಸೂಪರ್ ಹಿಟ್ ಸಿನಿಮಾ ಸೀಕ್ವೆಲ್‌ಗೆ ಸ್ವತಃ ಅಡಿವಿ ಶೇಷ್ ಕಥೆ ಬರೆದಿದ್ದು, 'ಕಾರ್ತೀಕೇಯ- 2', 'ಮೇಜರ್' ಹಾಗೂ 'ಕಾಶ್ಮೀರಿ ಫೈಲ್ಸ್'ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು 'ಗೂಢಚಾರಿ- 2'ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

'ಗೂಢಚಾರಿ' ಚಿತ್ರದಲ್ಲಿ ಅಡಿವಿ ಶೇಷ್ ಜೊತೆ ಶೋಬಿತಾ ದುಲಿಪಾಲ, ಜಗಪತಿ ಬಾಬು, ಪ್ರಕಾಶ್ ರಾಜ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದರು. ಸೂಪರ್ ಸಿನಿಮಾ ಸೀಕ್ವೆಲ್‌ನಲ್ಲೇ ನಟಿಸಿ ಮತ್ತೊಮ್ಮೆ ಗೆಲ್ಲುವ ಉತ್ಸಾಹದಲ್ಲಿ ಅಡಿವಿ ಶೇಷ್ ಇದ್ದಾರೆ.

More from Filmibeat

English summary
Banita Sindhu to romance Adivi Sesh in Goodachari- 2;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X