'ಗೇಮ್‌ ಚೇಂಜರ್' ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್; ಬೆಂಗಳೂರಿನಲ್ಲಿ ಟಿಕೆಟ್ ದರ ದುಪ್ಪಟ್ಟು

ಪರಭಾಷೆಯ ದೊಡ್ಡ ಸಿನಿಮಾಗಳು ಕರ್ನಾಟಕದಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗುತ್ತಿವೆ. ಇಲ್ಲಿ ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾಗಳು ದೊಡ್ಡದಾಗಿ ತೆರೆಗೆ ಬಂದು ಬಾಕ್ಸಾಫೀಸ್ ಶೇಕ್ ಮಾಡುತ್ತಿವೆ. 'ಪುಷ್ಪ'-2 ಬಳಿಕ 'ಗೇಮ್‌ಚೇಂಜರ್' ಸಿನಿಮಾ ಈ ವಾರ ತೆರೆಗೆ ಬರ್ತಿದೆ.

ಸಂಕ್ರಾಂತಿ ಸಂಭ್ರಮದಲ್ಲಿ ರಾಮ್‌ಚರಣ್ ನಟನೆಯ 'ಗೇಮ್‌ ಚೇಂಜರ್' ಚಿತ್ರ ಪ್ರೇಕ್ಷಕರ ಮುಂದೆ ಬರ್ತಿದೆ. ಈ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ದಿಲ್ ರಾಜು ಚಿತ್ರಕ್ಕೆ ಹಣ ಹೂಡಿದ್ದಾರೆ. 5 ಭಾಷೆಗಳಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಗುತ್ತಿದೆ. ಈಗಾಗಲೇ ಕರ್ನಾಟಕದಲ್ಲೂ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದೆ.

Game changer Advance Booking open Price Hike For Ramcharan s Film in karnataka

ಕನ್ನಡ ಸಿನಿಮಾಗಳನ್ನೇ ಬೆಳ್ಳಂಬೆಳಗ್ಗೆ ಬಿಡುಗಡೆ ಮಾಡಲು ನಿರ್ಮಾಪಕರು ಹಿಂದು ಮುಂದು ನೋಡುತ್ತಾರೆ. ಆದರೆ 'ಗೇಮ್‌ ಚೇಂಜರ್' ಚಿತ್ರದ ಮೊದಲ ಪ್ರದರ್ಶನ ಬೆಳಗ್ಗೆ 6 ಗಂಟೆಗೆ ಶುರುವಾಗಲಿದೆ. ಈಗಾಗಲೇ ಶುಕ್ರವಾರ ಬೆಳಗಿನ ಜಾವದ ಶೋಗಳ ಟಿಕೆಟ್ ಬುಕ್ಕಿಂಗ್ ಓಪನ್ ಆಗಿದೆ. ಮೆಗಾ ಫ್ಯಾನ್ಸ್ ಟಿಕೆಟ್ ಬುಕ್ ಮಾಡಲು ಮುಗಿಬಿದ್ದಾರೆ. ಕನ್ನಡಕ್ಕೂ ಸಿನಿಮಾ ಡಬ್ ಆಗಿ ರಿಲೀಸ್ ಆಗುತ್ತಿದೆ. ಆದರೆ ಸದ್ಯ ತೆಲುಗು, ತಮಿಳು ಶೋ ಬುಕ್ಕಿಂಗ್ ಮಾತ್ರ ಓಪನ್ ಆಗಿದೆ.

ತಮಿಳು ನಿರ್ದೇಶಕ ಶಂಕರ್ 'ಗೇಮ್‌ ಚೇಂಜರ್' ಕಥೆ ಹೇಳುತ್ತಿದ್ದಾರೆ. ಒಂದ್ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ಕಟ್ಟಿಕೊಟ್ಟಿದ್ದ ಅವರು ಇತ್ತೀಚೆಗೆ ಸೈಲೆಂಟ್ ಆಗಿಬಿಟ್ಟಿದ್ದಾರೆ. 'ಇಂಡಿಯನ್- 2' ಸಿನಿಮಾ ಹೀನಾಯವಾಗಿ ಸೋತು ಸುಣ್ಣವಾಗಿತ್ತು. ಹಾಗಾಗಿ ಗೇಮ್‌ ಚೇಂಜರ್' ಬಗ್ಗೆ ನಿರೀಕ್ಷೆ ಕಮ್ಮಿ ಆಗಿದೆ. ಆದರೂ ಟ್ರೈಲರ್ ನೋಡಿ ಅಭಿಮಾನಿಗಳು ಸಿನಿಮಾ ನೋಡಲು ಕಾಯುವಂತಾಗಿದೆ.

ತಂದೆ ಮಗನಾಗಿ ಚಿತ್ರದಲ್ಲಿ ರಾಮ್‌ಚರಣ್ ಅಬ್ಬರಿಸಿದ್ದಾರೆ. ಸರ್ಕಾರಿ ಉದ್ಯೋಗಿ ಹಾಗೂ ಭ್ರಷ್ಟ ರಾಜಕಾರಣಿಯ ನಡುವಿನ ಹೋರಾಟದ ಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾನಿ ಹಾಗೂ ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಎಸ್‌. ಜೆ ಸೂರ್ಯ ವಿಲನ್ ಆಗಿ ಅಬ್ಬರಿಸಿದ್ದಾರೆ. ಎಸ್. ತಮನ್ ಸಂಗೀತ ಚಿತ್ರಕ್ಕಿದ್ದು ತಮಿಳಿನಲ್ಲೂ ದೊಡ್ಡದಾಗಿ ಸಿನಿಮಾ ತೆರೆಗೆ ಬರಲಿದೆ.

Game changer Advance Booking open Price Hike For Ramcharan s Film in karnataka

ಆಂಧ್ರದಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಹಾಗೂ ಟಿಕೆಟ್ ದರ ಹೆಚ್ಚಳಕ್ಕೆ ಅವಕಾಶ ಸಿಕ್ಕಿದೆ. ಇತ್ತ ಕರ್ನಾಟಕದಲ್ಲೂ ಮೊದಲ ದಿನ ಟಿಕೆಟ್‌ ದರ ದುಪ್ಪಟ್ಟು ಮಾಡಲಾಗಿದೆ. ಸಿಂಗಲ್ ಸ್ಕ್ರೀನ್‌ ಥಿಯೇಟರ್‌ಗಳಲ್ಲಿ ಶುಕ್ರವಾರ(ಜನವರಿ 10) ಬೆಳಗಿನ 6 ಗಂಟೆ ಶೋ ಟಿಕೆಟ್ ದರ 500 ರೂಪಾಯಿಂದ 600 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಕರ್ನಾಟಕದಲ್ಲಿ ತೆಲುಗು ಚಿತ್ರಕ್ಕೆ ಟಿಕೆಟ್ ದರ ಹೆಚ್ಚಿಸಿರುವ ಬಗ್ಗೆ ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ನಿರೀಕ್ಷಿತ ಮಟ್ಟದಲ್ಲಿ 'ಗೇಮ್‌ ಚೇಂಜರ್' ಸಿನಿಮಾ ಟಿಕೆಟ್ ಬುಕ್ಕಿಂಗ್ ನಡೆಯುತ್ತಿಲ್ಲ. ಚರಣ್ ಹಾಗೂ ಶಂಕರ್ ಹಿಂದಿನ ಚಿತ್ರಗಳು ಅಷ್ಟಾಗಿ ಸದ್ದು ಮಾಡಿಲ್ಲ. ಅದೇ ಕಾರಣಕ್ಕೆ ಈ ರೀತಿ ಆಗುತ್ತಿದೆ ಎನ್ನಲಾಗ್ತಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ'-2 ಚಿತ್ರದ ಟಿಕೆಟ್ ದರ 1000 ರೂಪಾಯಿ ದಾಟಿದರೂ ಪ್ರೇಕ್ಷಕರ ಸಿನಿಮಾ ನೋಡಲು ಮುಗಿಬಿದ್ದಿದ್ದರು. ಆದರೆ 'ಗೇಮ್‌ ಚೇಂಜರ್' ವಿಚಾರದಲ್ಲಿ ಅಂತಹ ದಾವಂತ ಕಾಣುತ್ತಿಲ್ಲ.

ಅಡ್ವಾನ್ಸ್ ಬುಕ್ಕಿಂಗ್‌ಗೆ ಸಿಗುತ್ತಿರುವ ರೆಸ್ಪಾನ್ಸ್ ನೋಡುತ್ತಿದ್ದರೆ ಇನ್ನೆರಡು ದಿನಗಳಲ್ಲಿ ಟಿಕೆಟ್ ದರ ಇಳಿಸುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಸಿನಿಮಾ ಬಿಡುಗಡೆಗೆ ಸಮಸ್ಯೆ ಎದುರಾಗಿದೆ. ಶಂಕರ್ 'ಇಂಡಿಯನ್-3' ಸಿನಿಮಾ ಮುಗಿಸದ ಹೊರತು 'ಗೇಮ್‌ ಚೇಂಜರ್' ಬಿಡುಗಡೆ ಅವಕಾಶ ಕೊಡಬಾರದು ಎಂದು ಲೈಕಾ ಸಂಸ್ಥೆ ಪಟ್ಟು ಹಿಡಿದಿದೆ. ಈ ಸಂಬಂಧ ಅಲ್ಲಿ ಚಿತ್ರ ನಿರ್ಮಾಪಕರ ಸಂಘಕ್ಕೆ ಮನವಿ ಮಾಡಿದೆ. ಇನ್ನು ಚೆನ್ನೈನಲ್ಲಿ ನಡೆಯಬೇಕಿದ್ದ ಚಿತ್ರದ ಪ್ರೀ ರಿಲೀಸ್ ಈವೆಂಟ್ ಸಹ ರದ್ದಾಗಿದೆ.

More from Filmibeat

English summary
Ramcharan starrer Game changer Ticket Price Hike Sparks Outrage in Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X