'ಆದಿಪುರುಷ್' ಸಿನಿಮಾ; ಪ್ರಭಾಸ್ ತಾಯಿ ಪಾತ್ರಕ್ಕೆ ಆಯ್ಕೆಯಾದ ಸ್ಟಾರ್ ನಟಿ
ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಆದಿಪುರುಷ ಕೂಡ ಒಂದು. ಈಗಾಗಲೇ ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದು, ಕಲಾವಿದರ ಆಯ್ಕೆ ನಡೆಯುತ್ತಿದೆ. ಪ್ರಭಾಸ್ ಜೊತೆ ಯಾರು ನಟಿಸಲಿದ್ದಾರೆ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ.
Recommended Video
ಮುಖ್ಯವಾಗಿ ಪ್ರಭಾಸ್ ಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈ ನಡುವೆ ಈಗ ಚಿತ್ರಕ್ಕೆ ಮತ್ತೋರ್ವ ಸ್ಟಾರ್ ನಟಿಯ ಎಂಟ್ರಿಯಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೌದು ಖ್ಯಾತ ನಟಿ ಹೇಮಾ ಮಾಲಿನಿ ನಾಯಕಿಯಾಗಿ ನಟಿಸಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಇಂದು ಪ್ರಭಾಸ್ ಆದಿಪುರುಷ್ ಸಿನಿಮಾದ ಮುಹೂರ್ತ ನಡೆಯುತ್ತಿದೆ ಎನ್ನಲಾಗುತ್ತಿದೆ. ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆದಿಪುರುಷ್ ಸಿನಿಮಾದ ಹೊಸ ಅಪ್ ಡೇಟ್ ಇಲ್ಲಿದೆ.

ಪ್ರಭಾಸ್ ತಾಯಿಯ ಪಾತ್ರದಲ್ಲಿ ಹೇಮಾ ಮಾಲಿನಿ
ಆದಿಪುರುಷ ಸಿನಿಮಾದಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮನಿಗೆ ಅಂದರೆ ಪ್ರಭಾಸ್ ಗೆ ತಾಯಿಯಾಗಿ ಹೇಮಾ ಮಾಲಿನಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ವೈರಲ್ ಆಗಿದೆ. ಕೌಸಲ್ಯ ಪಾತ್ರದಲ್ಲಿ ಹೇಮಾ ಮಾಲಿನಿ ನಟಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಹೇಮಾ ಮಾಲಿನಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ
ಈಗಾಗಲೇ ಹಿರಿಯ ನಟಿ ಹೇಮಾ ಮಾಲಿನಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೇಮಾ ಮಾಲಿನಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುವುದೊಂದೆ ಬಾಕಿ ಇದೆಯಂತೆ. ಹೇಮಾ ಮಾಲಿನಿ ಸದ್ಯ ಅಪರೂಪಕ್ಕೆ ಒಂದಂತೆ ಸಿನಿಮಾ ಮಾಡುತ್ತಿದ್ದಾರೆ.

ಕೃತಿ ಸನೂನ್ ನಾಯಕಿ
ಇನ್ನು ಪ್ರಭಾಸ್ ಗೆ ನಾಯಕಿಯಾಗಿ ಬಾಲಿವುಡ್ ನಟಿ ಕೃತಿ ಸನೂನ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಕೃತಿ, ಸೀತೆ ಪಾತ್ರದಲ್ಲಿ ಬಣ್ಣ ಹಚ್ಚುವುದು ಬಹುತೇಕ ಖಚಿತವಾಗಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

ಸೈಫ್ ಅಲಿ ಖಾನ್ ರಾವಣ
ರಾವಣ ಪಾತ್ರದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ಅಂಗದ್ ಬೇಡಿ ರಾವಣ ಮಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಗ್ರಾಫಿಕ್ಸ್ ಕೆಲಸವೂ ಜಾಸ್ತಿ ಇದ್ದು, ವಿಶ್ವದ ಪ್ರಸಿದ್ಧ ಗ್ರಾಫಿಕ್ಸ್ ಡಿಸೈನರ್ ಬಳಿ ಕೆಲಸ ಮಾಡಿಸಲು ಸಿನಿಮಾತಂಡ ನಿರ್ಧರಿಸಿದೆ.

ಸಲಾರ್ ಸಿನಿಮಾದಲ್ಲಿ ಪ್ರಭಾಸ್ ಬ್ಯುಸಿ
ಪ್ರಭಾಸ್ ಸದ್ಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭ ಮಾಡಿದ್ದು, ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ.


Click it and Unblock the Notifications











