'ಬಾಹುಬಲಿ' ಸಿನಿಮಾ ನಿರ್ಮಾಪಕರ ವೆಬ್ ಸೀರಿಸ್ ನಲ್ಲಿ ಕನ್ನಡದ ನಟ ಇಶಾನ್

By ಪಿಲ್ಮ್ ಡೆಸ್ಕ್

ಸ್ಯಾಂಡಲ್ ವುಡ್ ನಟ ಇಶಾನ್ ಸದ್ಯ ನಿರ್ದೇಶಕ ಪವನ್ ಒಡೆಯರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ರೆಮೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಇಶಾನ್ ಈಗ ವೆಬ್ ಸೀರಿಸ್ ಲೋಕದಲ್ಲೂ ತನ್ನ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಹೌದು, ಇಶಾನ್ ತೆಲುಗು ವೆಬ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ರೋಗ್ ಸಿನಿಮಾ ಮೂಲಕ ಕನ್ನಡ ಮತ್ತು ತೆಲುಗು ಸಿನಿಮಾರಂಗಕ್ಕೆ ಪರಿಚಿತರಾದ ಇಶಾನ್ ಎರಡು ಸಿನಿಮಾ ಮಾಡುತ್ತಿದ್ದಂತೆ ವೆಬ್ ಲೋಕಕ್ಕೆ ಕಾಲಿಟ್ಟಿದ್ದಾರೆ. ಈಗಾಗಲೇ ವೆಬ್ ಸೀರಿಸ್ ನ ಚಿತ್ರೀಕರಣ ಪ್ರಾರರಂಭವಾಗಿದ್ದು, ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ತೆಲುಗಿನ ಸೂಪರ್ ಹಿಟ್ ಸಿನಿಮಾ ಬಾಹುಬಲಿ ಚಿತ್ರ ನಿರ್ಮಾಣ ಮಾಡಿದ್ದ ಆರ್ಕ ಮೀಡಿಯಾ ವರ್ಕ್ಸ ಬ್ಯಾನರ್ ನಲ್ಲಿ ಈ ವೆಬ್ ಸೀರಿಸ್ ನಿರ್ಮಾಣವಾಗುತ್ತಿದೆ. ಈ ವೆಬ್ ಸೀರಿಸ್ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದ್ದು, ಇನ್ನು ಅಧಿಕೃತ ಘೋಷಣೆ ಮಾಡಿಲ್ಲ. ಈ ವೆಬ್ ಸೀರಿಸ್ ನಲ್ಲಿ ದೊಡ್ಡ ತಾರಾಗಣವಿದ್ದು, ಈಗಾಗಲೇ ಖ್ಯಾತ ನಟ ಶರತ್ ಕುಮಾರ್ ಸಹ ಎಂಟ್ರಿ ಕೊಟ್ಟಿದ್ದಾರಂತೆ.

Ishan shooting for a Telugu web-series produced by Arka Media Works

ನಟ ಇಶಾನ್ ಸದ್ಯ ರೆಮೋ ಸಿನಿಮಾದ ಚಿತ್ರೀಕರಣ ಮುಗಿಸಬೇಕಿದೆ. ರೆಮೋ ಕೊನೆಯ ಹಂತದ ಚಿತ್ರೀಕರಣ ಬಾಕಿ ಉಳಿದಿದ್ದು, ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ನಿರ್ದೇಶಕ ಪವನ್ ಒಡೆಯರ್ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದೆ. ವಿಶೇಷ ಎಂದರೆ ಈ ಸಿನಿಮಾ ಕನ್ನಡ ಸೇರಿದಂತೆ ತಮಿಳು ಮತ್ತು ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ.

ರೆಮೋ ಸಿನಿಮಾದಲ್ಲಿ ಇಶಾನ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ ಒಂದಾಗಿರುವ ರೆಮೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಜನವರಿಯಿಂದ ಮತ್ತೆ ಚಿತ್ರೀಕರಣ ಪ್ರಾರಂಭಮಾಡಲಿರುವ ಸಿನಿಮಾತಂಡ ಬೇಸಿಗೆ ಸಮಯದಲ್ಲಿ ಚಿತ್ರ ರಿಲೀಸ್ ಮಾಡುವ ಸಾಧ್ಯತೆ ಇದೆ.

Recommended Video

ಸಮಂತಾ ಜೊತೆ ತನ್ನ ಆಸೆ ಹೇಳಿಕೊಂಡ ತಮನ್ನಾ | Filmibeat Kannada

More from Filmibeat

English summary
Kannada fame Actor Ishan shooting for a Telugu web-series produced by Arka Media Works.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X