For Quick Alerts
  ALLOW NOTIFICATIONS  
  For Daily Alerts

  ಪ್ರಶಾಂತ್ ನೀಲ್-ಪ್ರಭಾಸ್ 'ಸಲಾರ್'ಗೆ ಎಂಟ್ರಿ ಕೊಟ್ಟ ದಕ್ಷಿಣದ ಖ್ಯಾತ ವಿಲನ್

  |

  ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮತ್ತು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಲಾರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಇತ್ತೀಚಿಗಷ್ಟೆ ಚಿತ್ರೀಕರಣ ಪ್ರಾರಂಭ ಮಾಡಿದ ಸಲಾರ್ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಚಿತ್ರಕ್ಕೆ ದಕ್ಷಣ ಭಾರತದ ಖ್ಯಾತ ವಿಲನ್ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ.

  Recommended Video

  ಪ್ರಶಾಂತ್ ನೀಲ್ ಸಲಾರ್ ಗೂ ಇವರೇ ವಿಲನ್

  ಇತ್ತೀಚಿಗಷ್ಟೆ ಸಲಾರ್ ತಂಡಕ್ಕೆ ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಕೇಳಿದ್ದೀರಿ, ಇದರ ಬೆನ್ನಲ್ಲೆ ಮತ್ತೋರ್ವ ಖ್ಯಾತ ನಟನ ಎಂಟ್ರಿಯಾಗಿದೆ. ಅದು ಮತ್ಯಾರು ಅಲ್ಲ ದಕ್ಷಿಣ ಭಾರತದ ಖ್ಯಾತ ವಿಲನ್ ಜಗಪತಿ ಬಾಬು ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸಲಾರ್ ಸಿನಿಮಾದ ಪ್ರಮುಖ ಪಾತ್ರದಲ್ಲಿ ಜಗಪತಿ ಬಾಬು ಕಾಣಿಸಿಕೊಳ್ಳುತ್ತಿದ್ದಾರಂತೆ. ಸದ್ಯ ನಡೆಯುತ್ತಿರುವ ಚಿತ್ರೀಕರಣದಲ್ಲಿ ಜಗಪತಿ ಬಾಬು ಭಾಗಿಯಾಗಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

  ಆದರೆ ಯಾವ ಪಾತ್ರದಲ್ಲಿ ಎನ್ನುವ ಮಾಹಿತಿ ರಿವೀಲ್ ಆಗಿಲ್ಲ. ಸದ್ಯ ಜಗಪತಿ ಬಾಬು ಎಂಟ್ರಿ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಜಗಪತಿ ಬಾಬು ಸದ್ಯ ಬಾಲಕೃಷ್ಣ ನಟನೆಯ ಅಖಂಡ ಮತ್ತು ರಜನಿಕಾಂತ್ ನಟನೆಯ ಅಣ್ಣಾತೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಲಾರ್‌ಗೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ.

  ಇನ್ನು ಜಗಪತಿ ಬಾಬು ಕನ್ನಡ ಸಿನಿಮಾದಲ್ಲೂ ನಟಿಸುವ ಮೂಲಕ ಕನ್ನಡ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಚ್ಚ ಸುದೀಪ್ ನಟನೆಯ ಬಚ್ಚನ್ ಸಿನಿಮಾ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಕಿಚ್ಚ ಬಳಿಕ ನಿಖಿಲ್ ಕುಮಾರ್ ನಟನೆಯ ಜಾಗ್ವಾರ್ ಸಿನಿಮಾದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ದರ್ಶನ್ ನಟನೆಯ ರಾಬರ್ಟ್ ಸಿನಿಮಾದಲ್ಲೂ ಜಗಪತಿ ನಟಿಸಿದ್ದಾರೆ. ಇನ್ನು ಶ್ರೀಮುರಳಿ ನಟನೆಯ ಮದಗಜ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  ಸಲಾರ್ ಸಿನಿಮಾದಲ್ಲಿ ಜಗಪತಿ ಬಾಬು ಪಾತ್ರ ಹೇಗಿರಲಿದೆ ಎನ್ನುವುದು ಈಗ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇನ್ನು ನಟಿ ಕತ್ರಿನಾ ಕೈಫ್ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಈ ಮೊದಲು ಸಲಾರ್‌ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ಐಟಂ ಹಾಡಿನ ಮೂಲಕ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

  ಸಲಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಸದ್ಯ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಸಾಹಸ ದೃಶ್ಯಗಳ ಶೂಟಿಂಗ್ ನಡೆಯುತ್ತಿದ್ದು, ಸಾಹಸ ನಿರ್ದೇಶಕ ಅನ್ಬು-ಅರಿವ್ ಆಕ್ಷನ್ ಡೈರೆಕ್ಟ್ ಮಾಡುತ್ತಿದ್ದಾರೆ. ಸಲಾರ್ ಚಿತ್ರೀಕರಣ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

   Jagapathi Babu playing a key role in Prashant Neel Directional Prabhas’s Salaar Movie

  ಸಲಾರ್ ಚಿತ್ರದಲ್ಲಿ ಪ್ರಭಾಸ್ ಜೊತೆ ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದ ಶ್ರುತಿ ಹಾಸನ್, ಈಗ ಎರಡನೇ ಶೆಡ್ಯೂಲ್‌ನಲ್ಲೂ ಭಾಗಿಯಾಗಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪ್ರಶಾಂತ್ ನೀಲ್ ಅವರನ್ನು ನಗಿಸಿದ್ದೀನಿ ಎಂದು ಸಂತಸ ಹಂಚಿಕೊಂಡಿದ್ದಾರೆ.

  ಇನ್ನು ಸಲಾರ್ ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ವರದಿಗಳ ಪ್ರಕಾರ, ಸಲಾರ್ ಚಿತ್ರದಲ್ಲಿ ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ ನಟ ಮಧು ಗುರುಸ್ವಾಮಿ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭುವನ್ ಗೌಡ ಛಾಯಾಗ್ರಹಣ ಹಾಗೂ ರವಿ ಬಸ್ರೂರು ಹಿನ್ನೆಲೆ ಸಂಗೀತವಿದೆ. ಚಿತ್ರತಂಡದ ಯೋಜನೆಯಂತೆ ಶೂಟಿಂಗ್ ಮುಗಿದರೆ 2022ರ ಏಪ್ರಿಲ್ ತಿಂಗಳಲ್ಲಿ ಚಿತ್ರಮಂದಿರಕ್ಕೆ ಬರುವ ಸಾಧ್ಯತೆ ಇದೆ.

  English summary
  South Famous villain Jagapathi Babu playing a key role in Prashant Neel Directional Prabhas’s Salaar Movie.
  Monday, August 9, 2021, 16:35
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X