For Quick Alerts
  ALLOW NOTIFICATIONS  
  For Daily Alerts

  ಪವನ್ ಕಲ್ಯಾಣ್ ಕ್ವಾರಂಟೈನ್, ಖುಷ್ಬೂ ಪತಿಗೆ ಕೊರೊನಾ ಪಾಸಿಟಿವ್

  |

  ನಟ, ರಾಜಕಾರಣಿ ಪವನ್ ಕಲ್ಯಾಣ್‌ ಕೊರೊನಾ ವೈರಸ್ ಆತಂಕದಿಂದ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸಿಬ್ಬಂದಿಯೊಬ್ಬರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆ ಪವನ್ ಕಲ್ಯಾಣ್ ಕ್ವಾರಂಟೈನ್‌ಗೆ ಮೊರೆ ಹೋಗಿದ್ದಾರೆ.

  ಸದ್ಯಕ್ಕೆ ಪವನ್ ಕಲ್ಯಾಣ್ ಅವರಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ. ಮುನ್ನೆಚ್ಚರಿಕೆಯಿಂದ ಕ್ವಾರಂಟೈನ್‌ಗೆ ಒಳಗಾಗಲು ವೈದ್ಯರು ಸೂಚಿಸಿದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  ಕೊರೊನಾ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡಿದ ಪವನ್ ಕಲ್ಯಾಣ್ 'ವಕೀಲ್ ಸಾಬ್'

  ಸ್ವಲ್ಪ ದಿನಗಳ ಕಾಲ ವಿಡಿಯೋ ಕಾನ್ಫೆರೆನ್ಸ್ ಮೂಲಕ ತಮ್ಮ ಪಕ್ಷದ ಮುಖಂಡರ ಜೊತೆ ಸಂಪರ್ಕದಲ್ಲಿರಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

  ಪವನ್ ಕಲ್ಯಾಣ್ ಅಭಿನಯದ 'ವಕೀಲ್ ಸಾಬ್' ಚಿತ್ರ ಇತ್ತೀಚಿಗಷ್ಟೆ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು ಮೂರುವರೆ ವರ್ಷದ ನಂತರ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಿದ್ದ ನಟನಿಗೆ ಭರ್ಜರಿ ಸ್ವಾಗತ ಸಿಕ್ಕಿದ್ದು, ಬಾಕ್ಸ್ ಆಫೀಸ್‌ನಲ್ಲೂ ದಾಖಲೆ ಗಳಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.

  ಥಿಯೇಟರ್‌ನಲ್ಲಿ 100ರಷ್ಟು ಅನುಮತಿ: ನಟಿ ಖುಷ್ಬೂ ಟ್ವೀಟ್ ವಿರುದ್ಧ ಟೀಕೆ

  ಖುಷ್ಬೂ ಪತಿಗೆ ಕೊರೊನಾ

  ನಟ, ನಿರ್ದೇಶಕ ಸುಂದರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಪತ್ನಿ ಖುಷ್ಬೂ ಸುಂದರ್ ತಿಳಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಖುಷ್ಬೂ, ''ಸುಂದರ್ ಆರೋಗ್ಯವಾಗಿದ್ದಾರೆ, ವೈದ್ಯರು ಸಲಹೆಯಂತೆ ಆಸ್ಪತ್ರೆಗೆ ಸೇರಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷಿಸಿಕೊಳ್ಳಿ ಹಾಗೂ ಅಗತ್ಯ ಕ್ರಮ ವಹಿಸಿ'' ಎಂದು ಮನವಿ ಮಾಡಿದ್ದಾರೆ.

  ಇತ್ತೀಚಿಗಷ್ಟೆ ನಡೆದ ತಮಿಳು ನಾಡು ಚುನಾವಣೆಯಲ್ಲಿ ಪತ್ನಿ ಖುಷ್ಬೂ ಅವರ ಪರವಾಗಿ ಸುಂದರ್ ಪ್ರಚಾರ ಕೈಗೊಂಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಸೋಂಕು ತಗುಲಿರುವುದು ಖಚಿತವಾಗಿದೆ.

  ಕರ್ನಾಟಕ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟ ರಾಬರ್ಟ್ ಮಂಗ್ಲಿ | Filmibeat Kannada

  ಅಂದ್ಹಾಗೆ, ಖುಷ್ಬೂ ಅವರು ರಜನಿಕಾಂತ್ ನಟಿಸುತ್ತಿರುವ 'ಅಣ್ಣಾತ್ತೆ' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ, ಹೈದರಾಬಾದ್‌ನಲ್ಲಿ ಚಿತ್ರೀಕರಣ ಸಾಗ್ತಿದೆ. ಸಿರುತೈ ಶಿವ ನಿರ್ದೇಶನದ ಈ ಚಿತ್ರದಲ್ಲಿ ಕೀರ್ತಿ ಸುರೇಶ್, ನಯನತಾರ, ಮೀನಾ ಸೇರಿದಂತೆ ಹಲವು ಅಭಿನಯಿಸುತ್ತಿದ್ದಾರೆ.

  English summary
  Janasena Chief Pawan Kalyan goes into quarantine, After one of the his staff tested Coronavirus Positive.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X