ಫೋಟೋ ವೈರಲ್: ಪತಿಯ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿದ ಕಾಜಲ್
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಮತ್ತು ಪತಿ ಗೌತಮ್ ಕಿಚಲು ಹನಿಮೂನ್ ಪ್ರವಾಸದಲ್ಲಿದ್ದಾರೆ. ಮಾಲ್ಡೀವ್ಸ್ ನಲ್ಲಿರುವ ಕಾಜಲ್ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಮದುವೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಕಾಜಲ್ ತರಹೇವಾರಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಾಜಲ್ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಮಾಲ್ಡೇವ್ಸ್ ಪ್ರವಾಸ ಆನಂದಿಸುತ್ತಿರುವ ಕಾಜಲ್, ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಕಡಲ ತೀರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಜಲ್ ಕೈ ಹಿಡಿದು ನಿಂತಿರುವ ಪತಿಯ ಫೋಟೋವನ್ನು ಶೇರ್ ಮಾಡಿದ್ದಾರೆ. ಫೋಟೋಗೆ ಪಾರ್ಟನರ್ ಇನ್ ಎವರಿಥಿಂಗ್ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಅನೇಕ ಪೋಟೋಗಳನ್ನು ಕಾಜಲ್ ಹಂಚಿಕೊಂಡಿದ್ದಾರೆ. ಪ್ರತಿಯೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ದಕ್ಷಿಣ ಭಾರತದ ಈ ಸುಂದರಿ ಇತ್ತೀಚಿಗಷ್ಟೆ ಬಹುಕಾಲದ ಗೌತಮ್ ಕಿಚಲು ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ತೀರ ಆಪ್ತರ ನಡುವೆ ಕಾಜಲ್ ಮತ್ತು ಗೌತಮ್ ಹಸೆಮಣೆ ಏರಿದ್ದಾರೆ.
ಕಾಜಲ್ ಸದ್ಯ ಮದುವೆ ಜೀವನವನ್ನು ಎಂಜಾಯ್ ಮಾಡುತ್ತಿರುವ ಕಾಜಲ್ ಸಿನಿಮಾ ವಿಚಾರಕ್ಕೆ ಬರುವುದಾರೆ, ತಮಿಳು ಮತ್ತು ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಮಲ್ ಹಾಸನ್ ಅಭಿನಯದ ಇಂಡಿಯನ್-2, ಮುಂಬೈ ಸಾಗಾ, ಸೇರಿದಂತೆ ಸಾಕಷ್ಟು ಸಿನಿಮಾಗಳು ಕಾಜಲ್ ಬಳಿ ಇವೆ. ಇನ್ನೂ ಸಿನಿಮಾ ಜೊತೆಗೆ ವೆಬ್ ಸೀರಿಸ್ ಲೋಕಕ್ಕು ಕಾಲಿಟ್ಟಿದ್ದಾರೆ. ಲೈವ್ ಟೆಲಿಕಾಸ್ಟ್ ಎಂಬ ವೆಬ್ ಸೀರಿಸ್ ನಲ್ಲಿ ಕಾಜಲ್ ನಟಿಸುತ್ತಿದ್ದಾರೆ.


Click it and Unblock the Notifications











