ಮದುವೆ ನಂತರ ಕಾಜಲ್ ಅವರ ಮೇಕಪ್ ಇಲ್ಲದ ಫೋಟೋ ಶೇರ್ ಮಾಡಿದ ಪತಿ ಗೌತಮ್
ನಟಿ ಕಾಜಲ್ ಅಗರ್ವಾಲ್ ಇತ್ತೀಚಿಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಗೌತಮ್ ಕಿಚಲು ಜೊತೆ ಕಾಜಲ್ ಸರಳವಾಗಿ ಹಸೆಮಣೆ ಏರಿದ್ದಾರೆ. ಮದುವೆ ಬಳಿಕ ಕಾಜಲ್ ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗ ಪತಿ ಗೌತಮ್ ಕಿಚಲು, ಕಾಜಲ್ ಅವರ ಅಪರೂಪದ ಫೋಟೋ ಹಂಚಿಕೊಂಡಿದ್ದಾರೆ.
ವಿಶೇಷ ಎಂದರೆ ಮೇಕಪ್ ಇಲ್ಲದ ಪತ್ನಿಯ ಫೋಟೋವನ್ನು ಗೌತಮ್ ಶೇರ್ ಮಾಡಿದ್ದಾರೆ. ಸಾಮಾನ್ಯವಾಗಿ ನಟಿಮಣಿಯರು ಮೇಕಪ್ ಇಲ್ಲದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದು ತುಂಬಾ ವಿರಳ. ಮೇಕಪ್ ಇಲ್ಲದೆ ಎಲ್ಲೂ ಕಾಣಿಸಿಕೊಳ್ಳುವುದೂ ಇಲ್ಲ. ಆದರೆ ಗೌತಮ್ ಕಿಚಲು ಪತ್ನಿಯ ಮೇಕಪ್ ಇಲ್ಲದ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಅಂದ್ಹಾಗೆ ಫೋಟೋದಲ್ಲಿ ಕಾಜಲ್ ಬೆಳಗ್ಗೆ ಎದ್ದು ಕುಳಿತಿರುವ ಫೋಟೋವನ್ನು ಗೌತಮ್ ಶೇರ್ ಮಾಡಿದ್ದಾರೆ. ಫೋಟೋ ಜೊತೆಗೆ 'Waking up as Mrs Kitchlu' ಎಂದು ಕ್ಯಾಪ್ಷನ್ ನೀಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಕಾಜಲ್ ಪತಿಯ ಜೊತೆ ಮುಂಬೈನಲ್ಲಿ ನೆಲೆಸಿದ್ದಾರೆ. ಮದುವೆ ಫಿಕ್ಸ್ ಆಗುತ್ತಿದ್ದಂತೆ ಕಾಜಲ್ ಮತ್ತು ಗೌತಮ್ ಹೊಸ ಮನೆಯನ್ನು ಖರೀದಿಸಿದ್ದಾರೆ. ಇತ್ತೀಚಿಗೆ ಮನೆಯ ಫೋಟೋವನ್ನು ಹಂಚಿಕೊಂಡಿದ್ದರು. ಇದೀಗ ಮದುವೆ ಬಳಿಕ ಅದೇ ಮನೆಯಲ್ಲಿ ನೆಲೆಸಿದ್ದಾರೆ.
ಅಕ್ಟೋಬರ್ 30ರಂದು ಕಾಜಲ್ ಮತ್ತು ಗೌತಮ್ ಇಬ್ಬರು ಸಪ್ತಪದಿ ತುಳಿದಿದ್ದಾರೆ. ಮುಂಬೈನ ತಾಜ್ ಮಹಲ್ ಪ್ಯಾಲೆಸ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕೆಲವೇ ಕೆಲವು ಮಂದಿ ಭಾಗಿಯಾಗಿದ್ದರು. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ಇಬ್ಬರು ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.


Click it and Unblock the Notifications











