ಮಹೇಶ್ ಬಾಬು 'ಸರ್ಕಾರು ವಾರಿ ಪಾಟ' ಸಿನಿಮಾದ ಕೀರ್ತಿ ಸುರೇಶ್ ಲುಕ್ ಲೀಕ್
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ಸರ್ಕಾರು ವಾರಿ ಪಾಟ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಲಾಕ್ ಡೌನ್ ಬಳಿಕ ಮಹೇಶ್ ಬಾಬು ಮೊದಲ ಬಾರಿಗೆ ಚಿತ್ರೀಕರಣ ಪ್ರಾರಂಭಮಾಡಿದ್ದಾರೆ. ಅಂದಹಾಗೆ ಸರ್ಕಾರು ವಾರಿ ಪಾಟ ಸಿನಿಮಾದ ಚಿತ್ರೀಕರಣ ಸದ್ಯ ದುಬೈನಲ್ಲಿ ನಡೆಯುತ್ತಿದೆ.
ಈಗಾಗಲೇ ಇಡೀ ಸಿನಿಮಾತಂಡ ದುಬೈಗೆ ಪಯಣ ಬೆಳೆಸಿದ್ದು, ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರದಲ್ಲಿ ಮಹೇಶ್ ಬಾಬುಗೆ ಜೋಡಿಯಾಗಿ 'ಮಹಾನಟಿ' ಖ್ಯಾತಿಯ ನಟಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳುತ್ತಿದ್ದಾರೆ.
ಮೊದಲ ಬಾರಿಗೆ ಕೀರ್ತಿ, ಮಹೇಶ್ ಬಾಬು ಜತೆ ನಟಿಸುತ್ತಿದ್ದು ಇಬ್ಬರನ್ನು ಒಟ್ಟಿಗೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಅಂದಹಾಗೆ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ಕೀರ್ತಿ ಸುರೇಶ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಕೀರ್ತಿ ಸುರೇಶ್ ಫೋಟೋ ಲೀಕ್ ಆಗುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ.

ಕೀರ್ತಿ ಸುರೇಶ್ ಚಿತ್ರೀಕರಣ ಸೆಟ್ ನಲ್ಲಿರುವ ಫೋಟೋ ಇದಾಗಿದೆ. ಸೀರೆ ಧರಿಸಿರುವ ಕೀರ್ತಿ ಮಲ್ಲಿಗೆ ಹೂ ಮುಡಿದಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿರುವ ಕೀರ್ತಿ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೂಲಗಳ ಪ್ರಕಾರ ಚಿತ್ರದಲ್ಲಿ ಕೀರ್ತಿ ಬ್ಯಾಂಕ್ ಉದ್ಯೋಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಚಿತ್ರತಂಡ ಬಹಿರಂಗ ಪಡಿಸಿಲ್ಲ. ಚಿತ್ರಕ್ಕೆ ಗೀತಾ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಶುರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಎಸ್ ಎಸ್ ತಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.


Click it and Unblock the Notifications











