ಶಾರುಖ್ ಖಾನ್ ಹುಟ್ಟುಹಬ್ಬ: ನಟ ಮಹೇಶ್ ಬಾಬು ಮತ್ತು ಧನುಷ್ ವಿಶ್
ಬಾಲಿವುಡ್ ನ ಕಿಂಗ್ ಖಾನ್ ಶಾರುಖ್ ಖಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 55ನೇ ವಸಂತಕ್ಕೆ ಕಾಲಿಟ್ಟ ನಟ ಶಾರುಖ್ ಖಾನ್ ಈ ಬಾರಿಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್ ಹುಟ್ಟುಹಬ್ಬಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.
ಅಭಿಮಾನಿಗಳ ಜೊತೆಗೆ ಚಿತ್ರರಂಗದ ಗಣ್ಯರು ಸಹ ಪ್ರೀತಿಯ ಸಂದೇಶ ಕಳುಹಿಸುತ್ತಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳಾದ ನಟಿ ಅನುಷ್ಕಾ ಶರ್ಮಾ, ಕರೀನಾ ಕಪೂರ್, ಮಾಧುರಿ ದೀಕ್ಷಿತ್, ರಿತೇಶ್ ದೇಶಮುಖ್ ಸೇರಿದಂತೆ ಅನೇಕರು ಲೆಜೆಂಡರಿ ನಟನಿಗೆ ಶುಭಹಾರೈಸುತ್ತಿದ್ದಾರೆ.
ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಕಲಾವಿದರು ಸಹ ವಿಶ್ ಮಾಡಿ ಪ್ರೀತಿಯ ಸಂದೇಶ ರವಾನಿಸಿದ್ದಾರೆ. ಮಹೇಶ್ ಬಾಬು ಮತ್ತು ಪತ್ನಿ ನಮ್ರತಾ ಶಿರೋಡ್ಕರ್ ಅನ್ನು ಶೂಟಿಂಗ್ ಸೆಟ್ ನಲ್ಲಿರುವ ನಟ ಶಾರುಖ್ ಖಾನ್ ಭೇಟಿಯಾಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

ಫೋಟೋ ಜೊತೆಗೆ ಮಹೇಶ್ ಬಾಬು, 'ನಾನು ನೋಡಿದ ಅತೀ ವಿನಮ್ರ ವ್ಯಕ್ತಿಗಳಲ್ಲಿ ಒಬ್ಬರಾದ ಶಾರುಖ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಗಳು. ಯಾವಾಗಲು ಉತ್ತಮ ಆರೋಗ್ಯ, ಸಂತೋಷ ಮತ್ತು ಆರೋಗ್ಯವನ್ನು ಬಯಸುತ್ತೇನೆ' ಎಂದು ಪ್ರೀತಿಯ ಶುಭಾಶಯ ಕಳುಹಿಸಿದ್ದಾರೆ.
ಇನ್ನೂ ತಮಿಳು ನಟ ಧನುಷ್ ಸಹ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಶಾರುಖ್ ಖಾನ್ ಸಹೋದರ. ತುಂಬಾ ಪ್ರೀತಿ, ಶಾಂತಿ ಮತ್ತು ಸಂತೋಷ ಬಯಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ನಟ ಶಾರುಖ್ ಖಾನ್ ಮುಂದಿನ ಸಿನಿಮಾಗೆ ತಮಿಳು ನಿರ್ದೇಶಕ ಅಟ್ಲೀ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈಗಾಗಲೇ ಅಟ್ಲೀ ಜೊತೆ ಮಾತುಕತೆ ನಡೆಸಿರುವ ಶಾರುಖ್ ಸದ್ಯದಲ್ಲೇ ಈ ಪ್ರಾಜೆಕ್ಟ್ ಪ್ರಾರಂಭವಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಶಾರುಖ್ ಸದ್ಯ ಐಪಿಎಲ್ ನಿಮಿತ್ತ ದುಬೈನಲ್ಲಿ ನೆಲೆಸಿದ್ದಾರೆ.


Click it and Unblock the Notifications











