For Quick Alerts
  ALLOW NOTIFICATIONS  
  For Daily Alerts

  ತೆರೆಮೇಲೆ ಯೋಧನ ಕಥೆ: ಮೇಜರ್ ಫಸ್ಟ್ ಲುಕ್ ರಿಲೀಸ್

  |

  ಸೂಪರ್ ಸ್ಟಾರ್ ಮಹೇಶ್ ಬಾಬು 'ಮೇಜರ್' ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಚಿತ್ರದ ನಾಯಕ ನಟ ಅದ್ವಿ ಶೇಶಾ ಅವರ ಬರ್ತಡೇ ಪ್ರಯುಕ್ತ ಮೇಜರ್ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಳಿಸಲಾಗಿದೆ.

  ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಜೀವನವನ್ನ ಸ್ಫೂರ್ತಿಯಾಗಿಸಿಕೊಂಡು ಈ ಸಿನಿಮಾ ತಯಾರಾಗುತ್ತಿದ್ದು, ಸಂದೀಪ್ ಪಾತ್ರದಲ್ಲಿ ಅದ್ವಿ ಶೇಶಾ ನಟಿಸುತ್ತಿದ್ದಾರೆ.

  ಹುತಾತ್ಮ ಯೋಧ ಸಂದೀಪ್ ಉನ್ನಿಕೃಷ್ಣನ್ ಸ್ಮರಿಸಿದ 'ಮೇಜರ್' ಚಿತ್ರತಂಡ

  ಶಶಿ ಕಿರಣ್ ಟಿಕ್ಕ ಈ ಚಿತ್ರ ನಿರ್ದೇಶನ ಮಾಡ್ತಿದ್ದು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಸೋನಿ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಜೊತೆಗೆ ತೆಲುಗು ನಟ ಮಹೇಶ್ ಬಾಬು ಸಹ ನಿರ್ಮಾಪಕರಾಗಿ ಹಣ ಹೂಡುತ್ತಿದ್ದಾರೆ.

  2008ರಲ್ಲಿ ನಡೆದ ಮುಂಬೈ ದಾಳಿಯಲ್ಲಿ ಎನ್ ಎಸ್ ಜಿ ಕಮಾಂಡೋ ಆಗಿದ್ದ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾಗಿದ್ದರು. ವೀರ ಯೋಧ ಸಂದೀಪ್ ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹನ್ನೆರಡು ವರ್ಷ ಆಗಿವೆ.

  'BHAGEERA' Motion Poster | Srii Murali | Prashanth Neel | Dr Suri | Hombale Films |Filmibeat Kannada

  ಕೋಲ್ಕತ್ತಾದಲ್ಲಿ 1977 ಮಾರ್ಚ್ 15 ರಂದು ಜನಿಸಿದ ಸಂದೀಪ್ ಬೆಂಗಳೂರಿನ ಹೆಬ್ಬಾಳ ಸೇನಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದರು. 31ನೇ ವಯಸ್ಸಿನಲ್ಲಿ ಪ್ರಾಣ ತ್ಯಾಗ ಮಾಡಿದ ಸಂದೀಪ್ 9 ವರ್ಷಗಳ ಕಾಲ ಭಾರತದ ಸೇನೆಯ ಭಾಗವಾಗಿ ದುಡಿದಿದ್ದರು. ಅವರ ಸೇವೆಗೆ ಅಶೋಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  English summary
  Telugu actor Adivi Sesh starrer Major movie First look release. the will release in Hindi and Telugu bilingual. Directed by Sashi Kiran Tikka.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X