Just In
Don't Miss!
- News
ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೂಜಾ ಹೆಗ್ಡೆ ಬಳಿಕ ಅಖಿಲ್ ಅಕ್ಕಿನೇನಿ ಸಿನಿಮಾಗೆ ಎಂಟ್ರಿ ಕೊಟ್ಟ ಕನ್ನಡದ ಮತ್ತೋರ್ವ ನಟಿ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಮಂಗಾರು ಮಳೆ-2' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನೇಹಾ ಶೆಟ್ಟಿ ಇದೀಗ ತೆಲುಗು ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದಲ್ಲಿ ಒಂದು ಸಿನಿಮಾ ಮಾಡಿ ಸ್ಯಾಂಡಲ್ ವುಡ್ ನಿಂದ ಮಾಯವಾಗಿದ್ದ ನೇಹಾ ಶೆಟ್ಟಿ, ಬಳಿಕ ಟಾಲಿವುಡ್ ನಲ್ಲಿ ಪ್ರತ್ಯಕ್ಷರಾಗಿದ್ದರು.
ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಸಿನಿಮಾಗೆ ನಾಯಕಿಯಾಗುವ ಮೂಲಕ ನೇಹಾ ಟಾಲಿವುಡ್ ಗೆ ಕಾಲಿಟ್ಟಿದ್ದರು. 2018ರಲ್ಲಿ ರಿಲೀಸ್ ಆದ ಮೆಹಬೂಬ ಸಿನಿಮಾ ಮೂಲಕ ನೇಹಾ ಶೆಟ್ಟಿ ತೆಲುಗು ಪ್ರೇಕ್ಷಕರಿಗೆ ಪರಿಚಯರಾಗಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ 2 ವರ್ಷಗಳಾದರು ನೇಹಾ ಸದ್ದು, ಸುದ್ದಿಯಲ್ಲಿರಲಿಲ್ಲ. ಇದೀಗ ನೇಹಾ ಕಡೆಯಿಂದ ಅಪ್ ಡೇಟ್ ಸಿಕ್ಕಿದ್ದು, ತೆಲುಗಿನ ಸ್ಟಾರ್ ನಟನ ಪುತ್ರನ ಸಿನಿಮಾಗೆ ಆಯ್ಕೆಯಾಗಿದ್ದಾರೆ.
ಒಂದೇ ಚಿತ್ರದಲ್ಲಿ 'ಕಿಂಗ್' ನಾಗಾರ್ಜುನ ಮತ್ತು ಮಗ ಅಖಿಲ್!
ಹೌದು, ತೆಲುಗಿನ ಖ್ಯಾತ ನಟ ನಾಗಾರ್ಜುನ್ ಎರಡನೇ ಪುತ್ರ ಅಖಿಲ್ ಅಕ್ಕಿನೇನಿ ಸಿನಿಮಾಗೆ ನೇಹಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅಖಿಲ್ ಸದ್ಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಿನಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಇದೀಗ ಮತ್ತೋರ್ವ ನಾಯಕಿಯಾಗಿ ನೇಹಾ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದೀಗ ನೇಹಾ ಶೆಟ್ಟಿ ಎಂಟ್ರಿ ಕೊಟ್ಟಿದ್ದು, ತನ್ನ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರಂತೆ. ಅಂದ್ಹಾಗೆ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಿನಿಮಾ ಈ ವರ್ಷದ ಕೊನೆಯಲ್ಲಿ ಚಿತ್ರೀಕರಣ ಮುಗಿಸಿ ಮುಂದಿನ ವರ್ಷಾರಂಭದಲ್ಲಿ ರಿಲೀಸ್ ಮಾಡುವ ಪ್ಲಾನ್ ಮಾಡಿದೆಯಂತೆ. ಚಿತ್ರಕ್ಕೆ ಬೊಮ್ಮರಿಲ್ಲು ಖ್ಯಾತಿಯ ನಿರ್ದೇಶಕ ಭಾಸ್ಕರ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.