Don't Miss!
- Sports
ಐಪಿಎಲ್ 2021: ಪಂಜಾಬ್ vs ಚೆನ್ನೈ, ಪ್ಲೇಯಿಂಗ್ XI, ಅಪ್ಡೇಟ್ಸ್
- News
ಕರ್ನಾಟಕ ಕಾರಾಗೃಹಗಳ ಸ್ಥಿತಿಗತಿ ಕುರಿತು ವರದಿ ನೀಡಲು ಹೈಕೋರ್ಟ್ ಸೂಚನೆ
- Automobiles
ಇ ಕಾಮರ್ಸ್ ಸೇವಾ ಕಂಪನಿಗೆ ಎಲೆಕ್ಟ್ರಿಕ್ ಸ್ಕೂಟರ್ ಒದಗಿಸಲಿದೆ ಒಕಿನಾವ
- Finance
Alert: ವಾಹನಗಳ ಖರೀದಿ ಮತ್ತಷ್ಟು ದುಬಾರಿ, 2ನೇ ತ್ರೈಮಾಸಿಕದಲ್ಲಿ ಬೆಲೆ ಹೆಚ್ಚಳ ಸಾಧ್ಯತೆ
- Education
Bangalore University Exams 2021: ಸ್ನಾತಕ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳು ಮುಂದೂಡಿಕೆ
- Lifestyle
ರಾಮನವಮಿ 2021: ರಾಮನ ಕುರಿತಾದ ಅಚ್ಚರಿಯ ಸಂಗತಿಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟ ನಾಗ ಚೈತನ್ಯಗೆ ಜೋಡಿಯಾದ ಮತ್ತೋರ್ವ ಕನ್ನಡತಿ: 'Thank You' ಎಂದ ನಟಿ ಯಾರು?
ಟಾಲಿವುಡ್‌ನಲ್ಲಿ ಕನ್ನಡ ನಟಿಯರದ್ದೇ ಹವಾ. ತೆಲುಗು ಚಿತ್ರರಂಗದಲ್ಲಿ ಕನ್ನಡದ ಅನೇಕ ನಟಿಮಣಿಯರು ಮಿಂಚುತ್ತಿದ್ದಾರೆ. ಇದೀಗ ತೆಲುಗು ಸ್ಟಾರ್ ನಟ ನಾಗ ಚೈತನ್ಯ ಹೊಸ ಸಿನಿಮಾಗೆ ಕನ್ನಡದ ಮತ್ತೋರ್ವ ನಟಿ ನಾಯಕಿಯಾಗಿ ಆಯ್ಕೆ ಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಅದು ಮತ್ಯಾರು ಅಲ್ಲ ನಟಿ ನಭಾ ನಟೇಶ್. ಟಾಲಿವುಡ್ ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ನಭಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಾಗ ಚೈತನ್ಯ ಜೊತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ನಾಗ ಚೈತನ್ಯ ನಟನೆಯ 'ಥ್ಯಾಂಕ್ಯು' ಸಿನಿಮಾಗೆ ನಭಾ ನಾಯಕಿ ಎನ್ನುವ ಮಾತುಗಳು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.
ಅಮೀರ್ ಖಾನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ತೆಲುಗಿನ ಯುವ ನಟ
'ಥ್ಯಾಂಕ್ಯು' ಚಿತ್ರಕ್ಕೆ ವಿಕ್ರಮ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮನಂ, ಹೆಲೋ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ವಿಕ್ರಮ್ ಕುಮಾರ್ ಥ್ಯಾಂಕ್ಯು ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರೊಮ್ಯಾಂಟಿಕ್ ಸಿನಿಮಾ ಇದಾಗಿದ್ದು, ನಾಗ ಚೈತನ್ಯ ಮತ್ತು ನಭಾ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿದ್ದಾರೆ.
ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜ್ ಬಂಡವಾಳ ಹೂಡುತ್ತಿದ್ದಾರೆ. ಎಸ್ ಎಸ್ ತಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸದ್ಯ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿನಿಮಾತಂಡ ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದೆ.
ನಟ ನಾಗ ಚೈತನ್ಯ ಸದ್ಯ ಲವ್ ಸ್ಟೋರಿ ಸಿನಿಮಾದ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಹಾಡುಗಳು ಮತ್ತು ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಲವ್ ಸ್ಟೋರಿ ಚಿತ್ರದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಇನ್ನು ನಭಾ ನಟೇಶ್ ಹಿಂದಿಯ ಸೂಪರ್ ಹಿಟ್ ಅಂಧಾಧುನ್ ತೆಲುಗು ರಿಮೇಕ್‌ನಲ್ಲಿ ನಟಿಸುತ್ತಿದ್ದಾರೆ. ನಟ ನಿತಿನ್‌ಗೆ ನಾಯಕಿಯಾಗಿ ಬಣ್ಣಹಚ್ಚುತ್ತಿದ್ದಾರೆ. ಪುರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಸಿನಿಮಾ ಬಳಿಕ ತೆಲುಗಿನಲ್ಲಿ ನಭಾ ಲಕ್ಕೇ ಬದಲಾಗಿದೆ. ತೆಲುಗಿನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.