For Quick Alerts
  ALLOW NOTIFICATIONS  
  For Daily Alerts

  ಮಹೇಶ್ ಬಾಬು ಮದುವೆ ಫೋಟೋ ವೈರಲ್: 'ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ' ಎಂದ ಪತ್ನಿ

  |

  ತೆಲುಗು ಖ್ಯಾತ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಇತ್ತೀಚಿಗೆ ತಮ್ಮ ಮದುವೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಮ್ರತಾ ಆಗಾಗ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಈ ಬಾರಿ ಶೇರ್ ಮಾಡಿರುವ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

  ಮಹೇಶ್ ಬಾಬು ಜೊತೆ ಹಸೆಮಣೆ ಏರಿದ ಫೋಟೋ ಜೊತೆಗೆ ತನ್ನ ತಂದೆ-ತಾಯಿಯ ಮದುವೆ ಫೋಟೋವನ್ನು ಶೇರ್ ಮಾಡಿದ್ದಾರೆ. ಎರಡು ಫೋಟೋವನ್ನು ಹೋಲಿಸಿ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ಸ್ ಹರಿದುಬರುತ್ತಿದೆ.

  ಅರಿಶಿಣ ಶಾಸ್ತ್ರದ ಫೋಟೋ ಹಂಚಿಕೊಂಡ ನಟ ಮಹೇಶ್ ಬಾಬು ಪತ್ನಿ ನಮ್ರತಾ

  ಫೋಟೋ ಜೊತೆಗೆ ನಮ್ರತಾ 'ಚಿತ್ರ ಪರಿಪೂರ್ಣ, ಅಂದು ಮತ್ತು ಈಗ. ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ' ಎಂದು ಕ್ಯಾಪ್ಷನ್ ನೀಡಿದ್ದಾರೆ.

  ಅಂದ್ಹಾಗೆ ಮಹೇಶ್ ಬಾಬು ಮತ್ತು ನಮ್ರತಾ ಅವರದ್ದು ಪ್ರೇಮ ವಿವಾಹ. 2000ರಲ್ಲಿ ಸಿನಿಮಾ ಸೆಟ್ ನಲ್ಲಿ ಭೇಟಿಯಾದ ಮಹೇಶ್ ಬಾಬು ಮತ್ತು ನಮ್ರತಾ ಇಬ್ಬರು ಉತ್ತಮ ಸ್ನೇಹಿತರಾಗಿದ್ದರು. ನಂತರ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ ಬಳಿಕ 2005ರಲ್ಲಿ ವಿವಾಹಬಂಧನಕ್ಕೆ ಒಳಗಾಗಿದ್ದಾರೆ. ಇಬ್ಬರು ಹಿಂದೂ ಸಂಪ್ರದಾಯದಂತೆ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.

  ಮಹೇಶ್ ಬಾಬು ಮತ್ತು ನಮ್ರತಾ ಇಬ್ಬರು ಸಂತೋಷದ ಜೀವನ ಸಾಗಿಸುತ್ತಿದ್ದಾರೆ. ಟಾಲಿವುಡ್ ನ ಮುದ್ದಾದ ದಂಪತಿಗೆ ಸಿತಾರಾ ಮತ್ತು ಗೌತಮ್ ಇಬ್ಬರು ಮಕ್ಕಳಿದ್ದಾರೆ. ಒಂದು ಕಾಲದಲ್ಲಿ ಟಾಪ್ ನಟಿಯಾಗಿ ಗುರುತಿಸಿಕೊಂಡಿದ ನಮ್ರತಾ ಮದುವೆ ಬಳಿಕ ಅಭಿನಯದಿಂದ ದೂರ ಉಳಿದಿದ್ದಾರೆ. ಆದರೆ ಪತಿ ಮಹೇಶ್ ಬಾಬು ಸಿನಿಮಾ ಜೀವನವನ್ನು ನಿಭಾಯಿಸಿಕೊಂಡು ಬರುತ್ತಿದ್ದಾರೆ.

  English summary
  Namrata Shirodkar compares Mahesh Babu and hers wedding photo with that of her parents. she says marriages are made in heaven.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X