For Quick Alerts
  ALLOW NOTIFICATIONS  
  For Daily Alerts

  ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು?

  |

  ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಸದ್ಯ ವಕೀಲ್ ಸಾಬ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಪವನ್ ಕಲ್ಯಾಣ್ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

  ಪವನ್ ಕಲ್ಯಾಣ್ ವಕೀಲ್ ಸಾಬ್ ಬಳಿಕ, ಕ್ರಿಶ್ ನಿರ್ದೇಶನದ ಐತಿಹಾಸಿಕ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇದಲ್ಲದೆ ಮಲಯಾಳಂನ ಸೂಪರ್ ಹಿಟ್ ಅಯ್ಯಪ್ಪನೂಮ್ ಕೊಶಿಯಮ್ ಸಿನಿಮಾದ ರಿಮೇಕ್ ನಲ್ಲಿ ನಟಿಸಲಿದ್ದಾರೆ ಅಂತ ಹೇಳಲಾಗುತ್ತಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಪನ್ ಕಲ್ಯಾಣ್ ಕ್ರಿಶ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

  ಚಿರಂಜೀವಿ ಜನಸೇನಾ ಪಕ್ಷ ಸೇರ್ಪಡೆ ಬಗ್ಗೆ ಪವನ್ ಕಲ್ಯಾಣ್ ಪ್ರತಿಕ್ರಿಯೆಚಿರಂಜೀವಿ ಜನಸೇನಾ ಪಕ್ಷ ಸೇರ್ಪಡೆ ಬಗ್ಗೆ ಪವನ್ ಕಲ್ಯಾಣ್ ಪ್ರತಿಕ್ರಿಯೆ

  ಈಗಾಗಲೇ ಚಿತ್ರೀಕರಣ ಸಹ ಪ್ರಾರಂಭವಾಗಿದ್ದು, ಪವನ್ ಕಲ್ಯಾಣ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವಿಶೇಷ ಎಂದರೆ ಚಿತ್ರಕ್ಕೆ ನಾಯಕಿ ಕೂಡ ಫಿಕ್ಸ್ ಆಗಿದ್ದಾರೆ. ಪವನ್ ಕಲ್ಯಾಣ್ ಗೆ ನಾಯಕಿ ಯಾರು ಎನ್ನುವ ಕುತೂಹಲ ಎಲ್ಲರಲ್ಲಿತ್ತು ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಹೌದು, ಪವನ್ ಕಲ್ಯಾಣ್ ಜೊತೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ನಿಧಿ ಅಗರ್ಲಾವ್ ಕಾಣಿಸಿಕೊಳ್ಳುತ್ತಿದ್ದಾರೆ.

  ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದಾರೆ. ಸಿನಿಮಾದ ಬಗ್ಗೆ ಮಾಹಿತಿ ಬಿಟ್ಟುಕೊಡದ ನಿಧಿ, ಪವನ್ ಕಲ್ಯಾಣ್ ಜೊತೆ ನಟಿಸುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ಇದು ನನಗೆ ಕನಸು ನನಸಾದ ಹಾಗಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳಿದ್ದಾರೆ.

  ವಿದೇಶದಲ್ಲಿ KGF 2 ಗೆ ಎದುರಾಯ್ತು ಅಡ್ಡಿ | Filmibeat Kannada

  ಅವರು ತುಂಬೀ ಸರಳ ಮತ್ತು ಅದ್ಭುತವಾದ ವ್ಯಕ್ತಿ. ಅವರು ಬೆಸ್ಟ್ ಎಂದು ಹೇಳುತ್ತೇನೆ' ಎಂದು ಪವನ್ ಕಲ್ಯಾಣ್ ಅವರನ್ನು ಹಾಡಿ ಹೊಗಳಿದ್ದಾರೆ. ನಿಧಿ ಅಗರ್ವಾಲ್ ಸದ್ಯ ಎರಡು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಜೊತೆಗೆ ತಮಿಳು ಸಿನಿಮಾಗಳಲ್ಲೂ ನಿಧಿ ನಟಿಸುತ್ತಿದ್ದಾರೆ. ಚೆನ್ನೈ ಮತ್ತು ಹೈದರಾಬಾದ್ ಎರಡು ಕಡೆ ಓಡಾಡಿಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿರುವುದಾಗಿ ಹೇಳಿದ್ದಾರೆ.

  English summary
  Actress Nidhi Agarwal joins Pawan Kalyan's next project pan india film.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X